ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನವನ್ನು ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದವರು ಅರ್ಜಿಯನ್ನು ಆಹ್ವಾನಿಸಿದ್ದಾರೆ. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಯಾವ ಯಾವ ದಾಖಲೆಗಳು ಅವಶ್ಯವಾಗಿವೆ?, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು?ಹಾಗೂ ಈ ವಿದ್ಯಾ ವೇತನದಿಂದ ಏನು ಪ್ರಯೋಜನಗಳು? ಹೀಗೆ ಹಲವಾರು ವಿಷಯಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನ 2022-23 :
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಮೊದಲನೆಯದಾಗಿ ರೈತರಿಗೆ ಅಂದರೆ ಜಮೀನು ಇದ್ದಂತಹ ರೈತ ಮಕ್ಕಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿತ್ತು ಆದರೆ ಇದರಲ್ಲಿ ಸ್ವಲ್ಪ ವಿಸ್ತರಣೆಯಾಗಿದೆ. ಅದೇನೆಂದರೆ ಈ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ಜಮೀನಿರುವ ರೈತರ ಮಕ್ಕಳಿಗೆ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಕೂಡ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ಅಷ್ಟೇ ಅಲ್ಲದೆ ಮೀನುಗಾರರ ಮಕ್ಕಳು ಕೂಡ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಆರ್ಥಿಕವಾಗಿ ಹಿಂದುಳಿದಂತಹ ರೈತರಿಗೆ ಹಾಗೂ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಗಳನ್ನು ಪೂರೈಸುವಲ್ಲಿ ಅಡೆತಡೆಯಾಗದಂತೆ, ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಲು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಎಲ್ಲಾ ಫಲಾನುಭವಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಮೂಲಕ, ವಿದ್ಯಾರ್ಥಿಗಳು 2,500 ರೂಗಳಿಂದ, ರೂ.11,000 ವರೆಗೂ ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ಓದಿನ ಆಸೆಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ. ಇಂತಹ ವಿದ್ಯಾರ್ಥಿ ವೇತನಗಳನ್ನು ರಾಜ್ಯ ಸರ್ಕಾರದವರು ನೀಡುವುದರಿಂದ ರೈತರಿಗೆ ತಮ್ಮ ಮಕ್ಕಳನ್ನು ಓದಿಸಲು ಯಾವುದೇ ರೀತಿಯ ತೊಂದರೆಯೂ ಆಗುವುದಿಲ್ಲ. ಒಟ್ಟಾರೆ ರೈತರ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಪೂರೈಸುವಲ್ಲಿ ಯಾವುದೇ ಅಡೆತಡೆಯಾಗದಂತೆ ನೆರವು ನೀಡುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ.
ಕಳೆದ ವರ್ಷ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಬಂದಿರುವುದನ್ನ ಕೆಳಗಡೆ ಗಮನಿಸಬಹುದು.
ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಏಪ್ರಿಲ್ 11 2022ರಂದು ನಮ್ಮ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು ಘೋಷಿಸಿದರು. ಕರ್ನಾಟಕ ರಾಜ್ಯ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಸಮಾಜ ಕಲ್ಯಾಣದ ಮೀನುಗಾರ ಕುಟುಂಬದ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಆರ್ಥಿಕವಾಗಿ ದೌರ್ಬಲ್ಯ ಉಳ್ಳವರಿಗೆ ಈ ಯೋಜನೆಯಿಂದ ತುಂಬಾ ಅನುಕೂಲವಾಗಲಿದೆ ಎಂದು ಹೇಳಲಾಗುತ್ತದೆ. ವಿದ್ಯಾರ್ಥಿ ವೇತನದ ಮೊತ್ತವಾದ 2500 ರೂಗಳಿಂದ 11000 ರೂಗಳವರೆಗಿನ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ವಿದ್ಯಾರ್ಥಿ ವೇತನದಿಂದ ನಮ್ಮ ರಾಜ್ಯದ ಅನರಕ್ಷತೆಯನ್ನು ಹೋಗಲಾಡಿಸಲು ಒಂದು ಪುಟ್ಟ ಆಶಾಕಿರಣ ಎನ್ನಬಹುದು.
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ಅರ್ಜಿ ಸಲ್ಲಿಸುವ ವಿಧಾನ
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :
- ವಿದ್ಯಾರ್ಥಿಯು ಖಾಯಂ ಕರ್ನಾಟಕದ ನಿವಾಸಿಯಾಗಿರಬೇಕು.
- ವಿದ್ಯಾರ್ಥಿಗಳು ಪಿಯುಸಿ, ಐಟಿಐ, ಬಿಎ, ಬಿ ಎಸ್ ಸಿ, ಬಿಕಾಂ, ಎಂಬಿಬಿಎಸ್, ಕಾನೂನು, ಅರೆ ವೈದ್ಯಕೀಯ, ನರ್ಸಿಂಗ್, ಇತರೆ ವೃತ್ತಿಪರ ಪದವಿಗಳು ಅಥವಾ ಸ್ನಾತಕೋತ್ತರ ಪದವಿಯನ್ನು ಓದುತ್ತಿರಬೇಕು.
- ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ವತಿಯಿಂದ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
- ಕೃಷಿ ಹಾಗೂ ಮೀನುಗಾರಿಕೆ ಮಾಡಿಕೊಂಡ ಪೋಷಕರ ಮಕ್ಕಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿ ವೇತನದ ಮೊತ್ತ :
- ಪಿಯುಸಿ ಅಥವಾ ಐಟಿಐ ವಿದ್ಯಾರ್ಥಿ ಗಳಿಗೆ: ವಿದ್ಯಾರ್ಥಿಗಳಿಗೆ ವರ್ಷಕ್ಕೆ 2500ರೂ ಹಾಗೂ ವಿದ್ಯಾರ್ಥಿನಿಯರಿಗೆ ರೂ.3,000ಗಳನ್ನು ನೀಡಲಾಗುತ್ತದೆ .
- ಬಿ ಎ, ಬಿ ಎಸ್ ಸಿ, ಬಿಕಾಂ, ಬಿಇ, ಎಂಬಿಬಿಎಸ್ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಿಗೆ : ವಿದ್ಯಾರ್ಥಿಗಳಿಗೆ 5000 ರೂಗಳು ಹಾಗೂ ವಿದ್ಯಾರ್ಥಿನಿಯರಿಗೆ 5500 ರೂಗಳನ್ನು ನೀಡಲಾಗುತ್ತದೆ.
- ಕಾನೂನು, ಅರೆವೈದ್ಯಕೀಯ, ನರ್ಸಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್ ಗಳಿಗೆ : ವಿದ್ಯಾರ್ಥಿಗಳಿಗೆ 7,500 ರೂಗಳು ಹಾಗೂ ವಿದ್ಯಾರ್ಥಿನಿಯರಿಗೆ 8000 ರೂಗಳನ್ನು ನೀಡಲಾಗುತ್ತದೆ.
- ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ : ವಿದ್ಯಾರ್ಥಿಗಳಿಗೆ ರೂ.10,000 ಹಾಗೂ ವಿದ್ಯಾರ್ಥಿನಿಯರಿಗೆ ರೂ.11,000 ನೀಡಲಾಗುತ್ತದೆ.
ಕಳೆದ ವರ್ಷ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗೆ ಎರಡು ಸಾವಿರದ ಐದು ರುಪಾಯಿ ರೈತ ವಿದ್ಯಾರ್ಥಿ ಬಂದಿರುವುದನ್ನು ನೀವು ಕೆಳಗೆ ಗಮನಿಸಬಹುದು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು :
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಗಳ SATS ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
- ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ
- ವಿದ್ಯಾರ್ಥಿಯ ಅಥವಾ ಹೆತ್ತವರ FRUITS ಗುರುತಿನ ಸಂಖ್ಯೆ
- ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ಲಿನ ದಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತಿಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ) ಸೂಚನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
- ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್ ಡಿ ಇಂದ ಶುರುವಾಗುವ ಜಾತಿ ಅಥವಾ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗದ ( ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರಮಾಣ ಪತ್ರಗಳ ಸಂಖ್ಯೆ.
- ಇ ದೃಡಿಕರಿಸಿದ ದಾಖಲೆಗಳ ಸಂಖ್ಯೆಗಳು
- ಅಂಕಪಟ್ಟಿ
- ಶುಲ್ಕ ರಶೀದಿ
- ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗೈಯಲ್ಲಿ ಅಂಗವಿಕಲ ಕಾರ್ಡ್ ಸಂಖ್ಯೆ
ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ದೃಢೀಕರಣವನ್ನು ಮಾಡಿಸುವ ಅಗತ್ಯವಿರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 31.2022
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಈ ಮೊದಲು ಕೃಷಿ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ರೈತ ವಿದ್ಯಾನಿಧಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿತ್ತು. ನಂತರ ಈ ರೈತ ವಿದ್ಯಾನಿಕೇತನ ವರ್ಷಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಅಂದರೆ SSP ಪೋರ್ಟಲ್ಲಿ ನಾವು ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು. ನೀವು ಈಗಾಗಲೇ SSP ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಿದ್ದರೆ ಇದು ರೈತ ವಿದ್ಯಾನಿಧಿ ಮತ್ತು ಕಾರ್ಮಿಕ ಸ್ಕಾಲರ್ಶಿಪ್ ಅನ್ನೋ ಒಳಗೊಂಡಿರುತ್ತದೆ.
ಕರ್ನಾಟಕ SSPವಿದ್ಯಾರ್ಥಿವೇತನ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್‌ಲೈನ್‌ನಲ್ಲಿ ಇರಲಿದ್ದು. ಈ ಕೆಳಗಿನ ಹಂತಗಳನ್ನು ಅನುಸರಿಸಿ
ಹಂತ 1: ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಕೆಳಗಡೆ ಆನ್ಲೈನ್ ಸೇವೆಗಳು ಎಂಬ ಆಪ್ಷನ್ ಅಲ್ಲಿ ಮುಖ್ಯಮಂತ್ರಿ ರೈತ ವಿಜ್ಞಾನಿಧಿ ಕಾರ್ಯಕ್ರಮದಲ್ಲಿ ಮಾಡಲು ಎನ್ನುವ ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ
ಹಂತ 3: ನಂತರ ರಾಜ್ಯ ವಿದ್ಯಾರ್ಥಿ ತಂತ್ರಾಂಶ ಅಂದ್ರೆ SSP ಪೋರ್ಟಲ್ ಗೆ ಮರು ನಿರ್ದೇಶಸಲಾಗುತ್ತದೆ. ಅಥವಾ ನೇರವಾಗಿ ಅಧಿಕೃತ ವೆಬ್ಸೈಟ್ ssp.karnataka.gov.in ಗೆ ಭೇಟಿ ನೀಡಿ.
ಹಂತ 4: ಹೋಂ ಪೇಜ್ ನಲ್ಲಿ ಲಭ್ಯವಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 5:ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ಇಲ್ಲಿ ನಮೂದಿಸಿ, ಲಿಂಗವನ್ನು ಆಯ್ಕೆ ಮಾಡಿ, ಕ್ಯಾಪ್ಚಾ ಕೊಡನ್ನು ನಮೂದಿಸಿ ಅರ್ಜಿಯನ್ನು ಮುಂದುವರಿಸಿ
ಹಂತ 6: ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಮೊಬೈಲ್ ನಂಬರನ್ನು ಭರ್ತಿ ಮಾಡಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಪಡೆಯುತ್ತೀರಿ.
ಹಂತ 7: ನಂತರ ಅರ್ಜಿದಾರರು ಬಳಕೆದಾರ ID ಮತ್ತು ಪಾಸ್‌ವರ್ಡ್ ಅನ್ನು ಪಡೆಯುತ್ತೀರಿ. ಅದನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಕರ್ನಾಟಕ ಎಸ್‌ಎಸ್‌ಪಿ ವೆಬ್‌ಸೈಟ್‌ಗೆ ಲಾಗಿನ್ ಮಾಡುವುದು ಹೇಗೆ?
ಅರ್ಜಿದಾರರು ನೀವು ಪಡೆದುಕೊಂಡಿರುವ ಬಳಕೆದಾರ ID ಮತ್ತು ಪಾಸ್‌ವರ್ಡ್‌ನೊಂದಿಗೆ ಅಧಿಕೃತ ವೆಬ್‌ಸೈಟ್‌ಗೆ ಲಾಗ್ ಇನ್ ಮಾಡಬಹುದು.
ನಂತರ ವಿದ್ಯಾರ್ಥಿ ಖಾತೆಯ ಮುಖಪುಟಕ್ಕೆ ಪ್ರವೇಶ ಪಡೆಯುತ್ತೀರಿ. ಆ ಮುಖಪುಟದಲ್ಲಿ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ವಿವರಗಳಾದ ಆಧಾರ್ ಸಂಖ್ಯೆ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಮತ್ತು NSP ID, FRUIT ID, KUTUMB ID ಯನ್ನು ಭರ್ತಿ ಮಾಡಬೇಕಾಗುತ್ತದೆ. ಎಲ್ಲಾ ಅಗತ್ಯ ವಿವರಗಳನ್ನು ಪರಿಶೀಲಿಸಿದ ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಮತ್ತು ನಂತರ ಅದನ್ನು ಸ್ವೀಕೃತಿ ಚೀಟಿಯೊಂದಿಗೆ ಶಾಲೆಗೆ ಅಥವಾ ಕಾಲೇಜಿಗೆ ಸಲ್ಲಿಸಬೇಕು.
ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪಟ್ಟಿ 2022-23 ವೀಕ್ಷಿಸುವುದ ಹೇಗೆ ?
ಎಸ್‌ಎಸ್‌ಪಿ ಅಧಿಕೃತ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಪೂರ್ಣ ಪಟ್ಟಿಯನ್ನು ನೀಡಲಾಗಿರುತ್ತದೆ
ಹಂತ 1: ಎಸ್‌ಎಸ್‌ಪಿ ಕರ್ನಾಟಕ ವಿದ್ಯಾರ್ಥಿವೇತನದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ಲಾಗಿನ್ ಆಗಿ.
ನಂತರ ಸಂರ್ಪೂರ್ಣ ವಿವರ ನಿಮ್ಮ ಪರದೆಯ ಮೇಲೆ ಮೂಡಲಿದೆ.
ಕರ್ನಾಟಕ ರಾಜ್ಯ ಸರ್ಕಾರದ ಈ ಯೋಜನೆಯ ಮೂಲಕ ಆರ್ಥಿಕವಾಗಿ ದುರ್ಬಲವಾಗಿರುವ ರೈತರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸಲಾಗುವುದು. ಸ್ಕಾಲರ್‌ಶಿಪ್ ಮೊತ್ತವನ್ನು ರಾಜ್ಯ ಸರ್ಕಾರವು ಫಲಾನುಭವಿ ವಿದ್ಯಾರ್ಥಿಗಳಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರ ಲಾಭ ವರ್ಗಾವಣೆ ವಿಧಾನದ ಮೂಲಕ ನೇರವಾಗಿ ವರ್ಗಾಯಿಸುತ್ತದೆ. ರಾಜ್ಯ ಸರ್ಕಾರದ ಈ ಯೋಜನೆಯ ಪೋರ್ಟಲ್‌ನಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ಯೋಜನೆಯಿಂದ ಎಲ್ಲಾ ರೈತ ಮಕ್ಕಳು ಅನುಕೂಲವನ್ನು ಪಡೆದುಕೊಳ್ಳಬೇಕೆಂಬುದು ನಮ್ಮ ಆಶಯವಾಗಿದೆ. ಇಂತಹ ಮುಖ್ಯ ಮಾಹಿತಿಯನ್ನು ಒಳಗೊಂಡಿರುವಂತಹ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ರೈತ ಮಿತ್ರರಿಗೆ, ಸ್ನೇಹಿತರಿಗೆ ಹಾಗೂ ಪೋಷಕರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು 2022-23:
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
Not published