ಕಾವೇರಿ ನೀರಿನ ವಿಷಯದಲ್ಲಿ ಮತ್ತೆ ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಬಂದ್ ಆಗುವ ಎಲ್ಲ ಸಾಧ್ಯತೆಯೂ ಇದ್ದು, ಇದರ ನಡುವೆ ಈ ಮತ್ತೊಂದು ವಿಷಯ ತಿಳಿದು ಬಂದಿದೆ. ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ :
ತಮಿಳುನಾಡಿಗೆ ಮತ್ತೆ 3,000 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶಿಸಿದೆ. ತಮಿಳುನಾಡಿ(Tamilnaadu)ಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ ನಡೆಯುತ್ತಿರುವ ಹೊತ್ತಲ್ಲೇ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯೂ ಆರ್ ಸಿ(CWRC ) ಆದೇಶಿಸಿರುವುದು ರಾಜ್ಯ ಸರ್ಕಾರವನ್ನು ಮತ್ತಷ್ಡು ಸಂಕಷ್ಟಕ್ಕೆ ತಳ್ಳಿದಂತಾಗಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂ ಆರ್ ಸಿ ( CWRC ) ಸಭೆ ನಡೆಯಿತು. ಮುಂದಿನ ತಿಂಗಳು ಅ.15ರವರೆಗೆ 3000 ಕ್ಯೂಸೆಕ್ ನೀರನ್ನು, ತಮಿಳುನಾಡಿನ ಬಿಳಿಗೊಂಡ್ಲುವಿಗೆ ಹರಿಸುವಂತೆ ಸೂಚಿಸಿದೆ.
ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿತು.
ಕಳೆದ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಇದುವರೆಗೆ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಪಟ್ಟುಹಿಡಿಯಿತು.
ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್ ತಿಂಗಳ 22 ಟಿಎಂಸಿ(TMC) ನೀರನ್ನು ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಒತ್ತಾಯಿಸಿದೆ.
ಎರಡು ಕಡೆ ವಾದ ಆಲಿಸಿದ ಸಿಡಬ್ಲ್ಯೂ ಆರ್ ಸಿ ( CWRC ) ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ತಮಿಳುನಾಡಿನ ಬೇಡಿಕೆಯನ್ನು ತಿರಸ್ಕರಿಸಿತು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ