ಬಿಪಿಎಲ್(BPL) ಪಡಿತರ ಕಾರ್ಡ್ಗಾಗಿ(Ration card ) ಅರ್ಜಿ ಸಲ್ಲಿಸಿ ಕಾಯುತ್ತಿದ್ದವರಿಗೆ ಮತ್ತೊಂದು ಸಿಹಿಸುದ್ದಿ ಇದಾಗಿದೆ. ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಈಗಾಗಲೇ 2.95 ಲಕ್ಷ ಮಂದಿ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಬಿಪಿಎಲ್ ಕಾರ್ಡ್ಗಳಿಗೆ ಬೇಕಾದ ಅರ್ಹತೆ ನೋಡಿದ ನಂತರ ಅವರಿಗೆ ಹೊಸ ಕಾರ್ಡ್ ದೊರೆಯಲಿದೆ.
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆದಷ್ಟು ಬೇಗ ವಿತರಣೆ :
ಈಗಾಗಲೇ ಹಲವಾರು ದಿನಗಳಿಂದ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರ ಮೊಗದಲ್ಲಿ ನಗುವರಳಲಿದೆ. ಈ ತಿಂಗಳೊಳಗೆ ಹೊಸ ಕಾರ್ಡ್ ಅವರ ಕೈಗೆ ಸಿಗಲಿದೆ. 2.5 ಲಕ್ಷಕ್ಕೂ ಅಧಿಕ ಮಂದಿ ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ಈ ಕಾರ್ಡ್ಗಳನ್ನು ಚೆಕ್ ಮಾಡುವ ಕಾರ್ಯ ನಡೆಯುತ್ತಿದೆ. ಯಾರೆಲ್ಲಾ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಹರೋ ಅವರಿಗೆ ಆದಷ್ಟು ಬೇಗ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ನೀಡಲು ಆಹಾರ ಮತ್ತು ನಾಗರಿಕರ ಇಲಾಖೆ(Department of Food and Civil) ಮುಂದಾಗಿದೆ.
ಪಡಿತರ ಚೀಟಿಯ ತಿದ್ದುಪಡಿ(Ration card correction)ಗೂ ಕೂಡ ಅವಕಾಶ ನೀಡಲಾಗಿದೆ :
ಇದರ ನಡುವೆ ಬಿಪಿಎಲ್ ಕಾರ್ಡ್ ಗಳಲ್ಲಿ ಹೊಸ ಬದಲಾವಣೆ ಮಾಡಲು ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗೆ ಫಲಾನುಭವಿಗಳ ಹೆಸರು ಸೇರ್ಪಡೆ ಮತ್ತು ಮುಂತಾದ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಎಲ್ಲ ಬದಲಾವಣೆಗೆ ಅಥವಾ ತಿದ್ದುಪಡಿಗೆ ಬೆಂಗಳೂರು ಒನ್, ಕರ್ನಾಟಕ ಒನ್, ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ.
ಈ ಎಲ್ಲಾ ಬದಲಾವಣೆಗಳಿಗೆ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗದಿತ ದಿನಾಂಕ ನೀಡಲಾಗಿದೆ. ಅವು ಯಾವುದೆಂದು ನೋಡೋಣ ಬನ್ನಿ.
ಮೊದಲನೇ ಹಂತ(first step) :
ಅ.7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಎರಡನೇ ಹಂತ(second step) :
ಅ.8 ರಿಂದ 10 ರವರೆಗೆ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಮೂರನೇ ಹಂತ(third step) :
ಅ.11 ರಿಂದ 13ರವರೆಗೆ ಬಳ್ಳಾರಿ, ಕಲಬುರಗಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅವಕಾಶ ನೀಡಲಾಗಿದೆ.
ಮೇಲ್ಕಂಡ ಈ ಎಲ್ಲಾ ವಿಭಾಗಗಳಲ್ಲಿಯೂ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ಬಿಪಿಎಲ್ ರೇಷನ್ ಕಾರ್ಡ್ ತಿದ್ದುಪಡಿ(BPL card correction)ಗೆ ಅವಕಾಶ ನೀಡಲಾಗಿದೆ. ಆದಷ್ಟು ಬೇಗ ಈ ಸಮಯವನ್ನು ಬಳಸಿಕೊಂಡು ಬೇಕಾದ ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ