ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಬ್ಧಿವೃದ್ಧಿ ನಿಯಮದಿಂದ 2023- 2024 ನೇ ಸಾಲಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದಾರೆ. ಇದರಲ್ಲಿ ಸಹಾಯಧನ ಮತ್ತು ಸಾಲ(Loan schemes) ಸೌಲಭ್ಯಗಳ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ(swayam udyoga Loan Scheme) :
ಅಲೆಮಾರಿ, ಅರೆ ಅಲೆಮಾರಿ, ವರ್ಗದ ಯುವಕ/ ಯುವತಿಯರಿಗೆ ತರಕಾರಿ, ಹಣ್ಣು-ಹಂಪಲು, ಮೀನು ಮಾರಾಟ, ಕುರಿ/ಹಂದಿ/ಮೊಲ ಸಾಕಾಣಿಕೆ ಮುಂತಾದ ಸ್ವಯಂ ಉದ್ಯೋಗಕ್ಕೆ ಸಹಾಯಧನ ಹಾಗೂ ಇನ್ನಿತರ ಸಾಲ ಸೌಲಭ್ಯಗಳನ್ನು ನೀಡಲಾಗುವುದು.
ಗಂಗಾಕಲ್ಯಾಣ ನೀರಾವರಿ ಯೋಜನೆ:
ಕನಿಷ್ಟ 1.00 ಎಕರೆ ಕೃಷಿ ಜಮೀನಿರುವ ಪರಿಶೀಷ್ಟ ಅಲೆಮಾರಿ, ಅರೆ ಅಲೆಮಾರಿ ವರ್ಗದವರಿಗೆ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನಿನಲ್ಲಿ ತೆರೆದ ಬಾವಿ/ಕೊಳವೆ ಬಾವಿ ಕೊರೆಸಿ ಪಂಪ್‌ಸೆಟ್ ಅಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯಕ್ಕೆ ಸಹಾಯಧನ ಮತ್ತು ಸಾಲ ನೀಡಲಾಗುತ್ತದೆ.
ಅರಿವು ಶಿಕ್ಷಣ ಸಾಲ ಯೋಜನೆ(Education loan scheme) :
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈಗಾಗಲೇ ಅರ್ಜಿ ಸ್ವೀಕಾರ ಆರಂಭವಾಗಿದೆ. ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ / ನೀಟ್ ಮುಖಾಂತರ ಎಂಬಿಬಿಎಸ್ / ಬಿಡಿಎಸ್ / ಆಯುಷ್ / ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ / ಬ್ಯಾಚುಲರ್ ಆಫ್ ಇಂಜಿನಿಯರಿಂಗ್(BE) / ಬ್ಯಾಚುಲರ್ ಆಫ್ ಟೆಕ್ನಾಲಜಿ ಸೇರಿದಂತೆ ವೃತ್ತಿಪರ ಕೋರ್ಸ್‌ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.
ಅರ್ಜಿಯನ್ನು ಎಲ್ಲಿ ಹಾಕಬೇಕು ಹಾಗೂ ಕೊನೆಯ ದಿನಾಂಕ ಯಾವುದು?:
ಮೇಲ್ಕಂಡ ಈ ಎಲ್ಲಾ ಯೋಜನೆಗಳಿಗೆ ಮತ್ತು ಅರ್ಹ ಆಸಕ್ತರು ಆನ್ಲೈನ್ ನಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನವಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅರ್ಜಿದಾರರು ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ದಾಖಲಾತಿಗಳು:
ಅರ್ಜಿಯೊಂದಿಗೆ ಭಾವಚಿತ್ರ
ಅಲೆಮಾರಿ , ಅರೆಅಲೆಮಾರಿ ಪ್ರಮಾಣ ಪತ್ರ
ಕುಟುಂಬದ ವಾರ್ಷಿಕ ಆದಾಯ ಪತ್ರ
ಕುಟುಂಬದ ಪಡಿತರ ಚೀಟಿ
ಮತದಾರರ ಗುರುತಿನ ಚೀಟಿ
ಆಧಾರ ಕಾರ್ಡ್
ಪಹಣಿ/ ಆರ್‌ಟಿಸಿ (ಗಂಗಾ ಕಲ್ಯಾಣ ನೀರಾವರಿ ಯೋಜನೆ)
ಸಣ್ಣ ಅತಿಸಣ್ಣ ರೈತರ ಪ್ರಮಾಣ ಪತ್ರ (ಗಂಗಾ ಕಲ್ಯಾಣ ನೀರಾವರಿ ಯೋಜನೆ)
ವಂಶವೃಕ್ಷ (ಗಂಗಾ ಕಲ್ಯಾಣ ನೀರಾವರಿ ಯೋಜನೆ)’.
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Good