ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪಂಚ ರಾಜ್ಯಗಳಿಗೆ ಮುಂಬರುವ ಚುನಾವಣಾ ದಿನಾಂಕಗಳನ್ನು ಅಕ್ಟೋಬರ್ 9 ರಂದು ಪತ್ರಿಕಾಗೋಷ್ಠಿ ಯಲ್ಲಿ ಪ್ರಕಟಿಸಲಾಗಿದೆ. ಯಾವ ಯಾವ ರಾಜ್ಯಗಳು ಎಂದು ತಿಳಿಯಬೇಕೇ ಹಾಗಿದ್ದಲ್ಲಿ ಈ ವರದಿಯಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿ ದೊರೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
5 ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಣೆ :
ಚುನಾವಣಾ ಆಯೋಗ(Election Commission)ವು ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆ(vidhanasabha Election)ಗಳ ದಿನಾಂಕಗಳನ್ನು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‍ಕುಮಾರ್ ಅಕ್ಟೋಬರ್ 9 ರಂದು ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ದಿನಾಂಕಗಳ ಕುರಿತು ಮಾಹಿತಿ ನೀಡಿದರು. ನವೆಂಬರ್ 7 ರಿಂದ ನವೆಂಬರ್ 30 ರವರೆಗೆ ಐದೂ ರಾಜ್ಯಗಳ ವಿವಿಧ ದಿನಗಳಲ್ಲಿ ಮತ್ತು ವಿವಿಧ ಹಂತಗಳಲ್ಲಿ ಮತದಾನ ನಡೆದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ದಿನಾಂಕದಂದು ಚುನಾವಣೆ ನಡೆಯಲಿದೆ :
ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣ ಒಂದೇ ಹಂತದಲ್ಲಿ ಮತದಾನ ಮಾಡಬಹುದಾದರೆ, ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ಇಸಿಐ ಮೂಲಗಳು ತಿಳಿಸಿವೆ.
40 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ನವೆಂಬರ್ 7ರಂದು ಮತದಾನ ನಡೆಯಲಿದೆ.
90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್‌ಗಡದಲ್ಲಿ ಎರಡು ಹಂತಗಳಲ್ಲಿ ಮತದಾನ ನಿಗದಿಯಾಗಿದೆ. ನವೆಂಬರ್ 7 ಮತ್ತು ನವೆಂಬರ್ 17ರಂದು ಚುನಾವಣೆ ನಡೆಯಲಿದೆ.
230 ವಿಧಾನಸಭಾ ಕ್ಷೇತ್ರ ಹೊಂದಿರುವ ಮಧ್ಯ ಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಿಗದಿಯಾಗಿದೆ
200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ ನವೆಂಬರ್ 23 ರಂದು ಮತದಾನ
ನಡೆಯಲಿದೆ.
119 ಕ್ಷೇತ್ರಗಳನ್ನು ಒಳಗೊಂಡಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ಜರುಗಲಿದೆ.
ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಾಪ್ರದೇಶ ರಾಜ್ಯಗಳ ವಿಧಾನಸಭೆಯ ಅಧಿಕಾರ ಅವಧಿ 2024 ಜನವರಿ ಯಲ್ಲಿ ಮುಗಿಯಲಿದೆ. ಮತ್ತು ಮಿಜೋರಾಂನ ಶಾಸಕಾಂಗ ಸಭೆಯ ಅವಧಿ 2023ರ ಡಿಸೆಂಬರನಲ್ಲಿ ಕೊನೆಗೊಳ್ಳುತ್ತದೆ.
ಈ 5 ರಾಜ್ಯಗಳಲ್ಲಿ, ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಡಳಿತವಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷ ಆಡಳಿತ ಮಾಡುತ್ತಿದೆ ಮತ್ತು ಮಿಜೋರಾಂದಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್) ಅಧಿಕಾರ ನಡೆಸುತ್ತಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ