ರಾಜ್ಯ ಸರ್ಕಾರ(state government ) ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯೋಗ ವಾಗಿದೆ. ಇನ್ನು ನೋಡುವುದಾದರೆ ಐದು ಗ್ಯಾರಂಟಿ ಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಇನ್ನು10 ಲಕ್ಷ ಅರ್ಜಿದಾರರಿಗೆ ಹಣ ದೊರೆತಿಲ್ಲ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇನ್ನೂ 10 ಲಕ್ಷ ಜನರಿಗೆ ಗೃಹಲಕ್ಷ್ಮಿಯ ಹಣ ಬರುತ್ತಿಲ್ಲ :
ಈಗಾಗಲೇ ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯೂ ಎಲ್ಲರಿಗೂ ತಲುಪುತಿಲ್ಲ ಎಂದು ಜನರ ಆಕ್ರೋಶ ಕೇಳಿ ಬರುತ್ತಿದೆ. ಇದಕ್ಕೆ ಸರಕಾರವು ಹಲವಾರು ತಾಂತ್ರಿಕ ಕಾರಣದ ನೆಪ ನೀಡಿದೆ. ಹೀಗಾಗಿ ಈ ಯೋಜನೆಯಲ್ಲಿ ಇನ್ನು ಸುಮಾರು 10 ಲಕ್ಷ ಅರ್ಜಿದಾರರಿಗೆ ಹಣ ತಲುಪಿಸಲು ಬಾಕಿ ಇದೆ. ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಿದವರ ಪೈಕಿ 3,082 ಮಂದಿ ಮೃತಪಟ್ಟಿರುವುದರಿಂದ ಅವರನ್ನು ಸರಕಾರ ಅನರ್ಹ ಎಂದು ಪರಿಗಣಿಸಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ(Bank account) ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. ಹೀಗಾಗಿ ಯೋಜನೆಯಲ್ಲಿ ಸಾಕಷ್ಟು ಗೊಂದಲ ಕಾಣಿಸಿಕೊಳ್ಳುತ್ತಿದೆ.
ಖಾತೆಗೆ ಹಣ ಬಾರದೇ ಇರುವುದಕ್ಕೆ ತಾಂತ್ರಿಕ ಕಾರಣ ಸೇರಿದಂತೆ ಹಲವಾರು ಕಾರಣಗಳನ್ನು ರಾಜ್ಯ ಸರ್ಕಾರ ನೀಡಿದೆ. ಹೀಗೆ ಹಣ ತಲುಪದೇ ಇರುವವರ ಪಟ್ಟಿ ಮಾಡಿಕೊಂಡು ಆ ಎಲ್ಲ ಸಮಸ್ಯೆಗಳನ್ನು ಸರಿಪಡಿಸಲು ಸಂಬಂಧ ಪಟ್ಟ ಇಲಾಖೆ ಮುಂದಾಗಿದೆ. ಅಲ್ಲದೇ ಅದಕ್ಕೆ ಕಾರಣ ಮತ್ತು ಪರಿಹಾರವನ್ನು ಕೂಡ ನೀಡಿದೆ.
ಹಣ ಪಡೆಯಲು ಏನೆಲ್ಲ ತಿದ್ದುಪಡಿ ಅಥವಾ ಜೋಡಣೆ ಮಾಡಬೇಕು ?
ಬಹುತೇಕರ ಆಧಾರ್ ಜೋಡಣೆ ಸರಿಯಾಗಿಲ್ಲ. ಆಧಾರ್ ನಲ್ಲಿ ಹೆಸರು ಮತ್ತು ಹಲವಾರು ಸಮಸ್ಯೆಗಳು ಎದುರಾಗಿವೆ. ಅಷ್ಟೇ ಅಲ್ಲದೆ ಹಲವರ ಬ್ಯಾಂಕ್ ಖಾತೆಯ ಸಮಸ್ಯೆಯು ಇದೆ. ಅಂತವರು ಈ ಹಿಂದೆ ನೊಂದಣಿ ಮಾಡಿಸಿಕೊಂಡಿದ್ದ ಕೇಂದ್ರಗಳಿಗೆ ತೆರಳಿ ಸಮಸ್ಯೆಯನ್ನು ಪರಿಹರಿಸಕೊಳ್ಳಬೇಕು. ಅದಕ್ಕಾಗಿ ಆಧಾರ್ ಕಾರ್ಡ್ ನೀಡಿ ಜೋಡಣೆ ಆಗಿದೆಯೋ ಇಲ್ಲವೇ ಖಚಿತಪಡಿಸಿಕೊಂಡು ಸರಿಪಡಿಸಿಕೊಳ್ಳಬೇಕು.
ಅಷ್ಟೇ ಅಲ್ಲದೆ ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಗಳಿದ್ದರೆ ಯಾವ ಖಾತೆಯ ಸಂಖ್ಯೆ ಜೋಡಣೆಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಂಡು ಬ್ಯಾಂಕ್‌ಗೆ ಹೋಗಿ ಒಮ್ಮೆ ಖಾತೆ ಚಾಲ್ತಿಯಲ್ಲಿ ಇದೆಯೋ ಇಲ್ಲವೋ ಎನ್ನುವುದನ್ನೂ ಪರೀಕ್ಷಿಸಿಕೊಳ್ಳಬೇಕು. ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಅಲ್ಲಿ ನಿಖರ ಮಾಹಿತಿ ತಿಳಿಯಲಿದೆ.
ಅರ್ಜಿ ಸಲ್ಲಿಸಿದರು ಹಣ ಬರದಿದ್ದವರಿಗೆ ಸರ್ಕಾರದಿಂದ ಒಟ್ಟಿಗೆ ಸಿಗಲಿದೆ 4000 ರೂ :
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎರಡು ತಿಂಗಳಿಗಿಂತ ಹೆಚ್ಚಾದರೂ ಇನ್ನೂ ಕೂಡ ಹಣ ಬಂದಿಲ್ಲ ಎಂದು ಚಿಂತೆಯಲ್ಲಿರುವ ಮಹಿಳೆಯರಿಗೆ ಸಿದ್ದರಾಮಯ್ಯನವರು tweet ಮಾಡುವ ಮೂಲಕ ನವರಾತ್ರಿಯ ಭರ್ಜರಿ ಗಿಫ್ಟನ್ನು ಘೋಷಣೆ ಮಾಡಿದ್ದಾರೆ. ಅದೇನೆಂದರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಹಣಬರದಿದ್ದ ಮಹಿಳೆಯರಿಗೆ ಒಟ್ಟಿಗೆ ನಾಲ್ಕು ಸಾವಿರದ ಹಣವನ್ನು ಅಕೌಂಟಿಗೆ ಜಮಾ ಮಾಡಲಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಹಣ ಒಟ್ಟಿಗೆ ಜಮೆ :
ಸಿದ್ದರಾಮಯ್ಯನವರು ನವರಾತ್ರಿ ಸಂಭ್ರಮದ ಟ್ವೀಟ್ ಮೂಲಕ ಖುಷಿಯಾದ ವಿಷಯವನ್ನು ಹಂಚಿಕೊಂಡಿದ್ದಾರೆ ಅದರ ವಿವರ ಕೆಳಗಿನಂತಿದೆ : “ಕುಟುಂಬ ನಿರ್ವಹಣೆಯ ಹೊಣೆಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ರೂ. 2,000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.08 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು, ಈ ಉದ್ದೇಶಕ್ಕಾಗಿ ಸರ್ಕಾರವು ರೂ. 4,449 ಕೋಟಿ ಅನುದಾನ ಬಳಕೆ ಮಾಡಿದೆ. ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ.” ಎಂದು ಟ್ವೀಟ್ ಮುಖಾಂತರ ತಿಳಿಸಿದ್ದಾರೆ.
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ