JOB NEWS : 2400 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ, ಸಿಎಂ ಸಿದ್ದರಾಮಯ್ಯ ಸೂಚನೆ

police constable recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶೀಘ್ರದಲ್ಲೇ 2400 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕ(Police constable Recruitment) ಮಾಡಿಕೊಳ್ಳುವುದರ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕ :

ಶನಿವಾರ ದಂದು ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು, ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

“ಖಾಲಿ ಇರುವ ಹುದ್ದೆಗಳಿಗೆ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹೇಳಿದ್ದಾರೆ.

ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ(Arogya Bhagya scheme) ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್(Public school) ತೆರೆಯಲಾಗುವುದು. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ತವ್ಯದಲ್ಲಿ ಇರುವ ವೇಳೆ ಹುತಾತ್ಮರಾದ ಪೊಲೀಸರಿಗೆ 50 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದಿದ್ದಾರೆ.

“ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ ” ಎಂದು ಹೇಳಿಕೊಂಡಿದ್ದಾರೆ.

ಕಾನ್ಸ್ಟೇಬಲ್ ಹುದ್ದೆಗಾಗಿ ಕಾಯುತ್ತಿರುವವರಿಗೆ ಇದು ಒಂದು ಖುಷಿಯ ವಿಷಯ ಎನ್ನಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!