ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕೇಂದ್ರ ಸರ್ಕಾರ(central Government)ದಿಂದ 22,303 ಕೋಟಿ ಅನುಮೋದನೆ ಗೊಂಡಿರುವ ಪೀ ಅಂಡ್ ಕೆ ರಸಗೊಬ್ಬರ ಸಬ್ಸಿಡಿ(P and K Fertilizer subsidy) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ದೇಶದ ರೈತರಿಗೆ ಶುಭ ಸುದ್ದಿಯನ್ನು ಇದೀಗ ಕೇಂದ್ರ ಸರ್ಕಾರ ನೀಡಿದೆ. ಅದುವೇ ರೈತರಿಗೆ ಸಮಂಜಸ ಬೆಲೆಗೆ ರಸಗೊಬ್ಬರವನ್ನು ದೊರಕಿಸಿಕೊಡಲು ಸಬ್ಸಿಡಿಯನ್ನು ಅನುಮೋದನೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇನ್ನು ಮುಂದೆ ರಸ ಗೊಬ್ಬರಗಳ ಮೇಲೆ ಸಬ್ಸಿಡಿ ಲಭ್ಯ :
ಹೌದು,ಕೇಂದ್ರ ಸರ್ಕಾರವು ಇದೆ ಅಕ್ಟೋಬರ್ 25 ಬುಧವಾರ ನಡೆದ ಸಂಪುಟ ಸಭೆಯಲ್ಲಿ ಪ್ರಸಕ್ತ ರಾಬಿ ಋತುವಿನಲ್ಲಿ ಪಿ ಆಂಡ್ ಕೆ ರಸಗೊಬ್ಬರಗಳ ಮೇಲೆ 22,303 ಕೋಟಿ ರೂಪಾಯಿಗಳ ಸಬ್ಸಿಡಿಯನ್ನು ಒದಗಿಸಲು ಒಪ್ಪಿಗೆ ನೀಡಿದೆ.
ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಮತ್ತು ಬೆಲೆ ಏರಿಕೆಯಿಂದ ಅಪಾರ ನಷ್ಟಕ್ಕೀಡಾಗಿರುವ ಕೃಷಿ ಕ್ಷೇತ್ರದ ನೆರವಿಗೆ ಬಂದಿರುವ ಕೇಂದ್ರ ಸರ್ಕಾರ, ಇದೀಗ ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೇಕಾಗುವ ರಸಗೊಬ್ಬರಗಳ ಮೇಲೆ 22,303 ಕೋಟಿ ರೂಪಾಯಿ ಸಬ್ಸಿಡಿಯನ್ನು ನೀಡುತ್ತಿದೆ ಎಂದು ಘೋಷಣೆ ಮಾಡಿದೆ. ರೈತರು ರಬಿ ಬೆಳೆಗಳಿಗೆ ಬೇಕಾಗುವ ಮತ್ತು ಮಣ್ಣಿನ ಪೋಷಕಾಂಶ ಹೆಚ್ಚಿಸುವ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸಬ್ಸಿಡಿಯನ್ನು ನೀಡುತ್ತದೆ ಎಂದು ಒಪ್ಪಿಗೆ ನೀಡಿದೆ.
ಪೀ ಅಂಡ್ ಕೆ ರಸಗೊಬ್ಬರಗಳಿಗೆ ಸಬ್ಸಿಡಿ:
ರಸಗೊಬ್ಬರ ತಯಾರಕರು/ಆಮದುದಾರರ ಮೂಲಕ ಸರ್ಕಾರವು 25 ದರ್ಜೆಯ P & K ರಸಗೊಬ್ಬರಗಳನ್ನು ರೈತರಿಗೆ ಸಬ್ಸಿಡಿ ಬೆಲೆಯಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ. P&K ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು NBS ಸ್ಕೀಮ್ ರಿಂದ ನಿಯಂತ್ರಿಸಲಾಗುತ್ತದೆ. ಅದರ ರೈತ ಸ್ನೇಹಿ ವಿಧಾನಕ್ಕೆ ಅನುಗುಣವಾಗಿ, ಕೈಗೆಟುಕುವ ಬೆಲೆಯಲ್ಲಿ ರೈತರಿಗೆ P & K ರಸಗೊಬ್ಬರಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಬದ್ಧವಾಗಿದೆ ಎಂದು ಹೇಳಬಹುದಾಗಿದೆ.
ಯೂರಿಯಾ(Uriya), ಡಿಎಪಿ(DAP) , ಎಂಒಪಿ(MOP) ಮತ್ತು ಸಲ್ಫರ್‌ಗಳ(Sulphur) ಅಂತರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳ ದೃಷ್ಟಿಯಿಂದ, ರಬಿ 2023-24 ರ ಎನ್‌ಬಿಎಸ್(NBS) ದರಗಳನ್ನು 01.10.23 ರಿಂದ 31.03.24 ರ ವರೆಗೆ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ಮೇಲೆ ಅನುಮೋದಿಸಲು ಸರ್ಕಾರ ನಿರ್ಧರಿಸಿದೆ( ಪಿ & ಕೆ) ರಸಗೊಬ್ಬರಗಳು. (P and K Fertilizers ) ಅನುಮೋದಿತ ಮತ್ತು ಅಧಿಸೂಚಿತ ದರಗಳ ಪ್ರಕಾರ ರಸಗೊಬ್ಬರ ಕಂಪನಿಗಳಿಗೆ ಸಬ್ಸಿಡಿಯನ್ನು ಒದಗಿಸಲಾಗುವುದು ಇದರಿಂದ ರಸಗೊಬ್ಬರಗಳು ಕೈಗೆಟುಕುವ ಬೆಲೆಯಲ್ಲಿ ರೈತರಿಗೆ ಲಭ್ಯವಾಗುವಂತೆ ಮಾಡಲಾಗುತ್ತದೆ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ