ಇತ್ತೀಚೆಗಷ್ಟೇ ಬೆಂಗಳೂರು ಮತ್ತು ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲ್ ( vande Bharath Express Train ) ಅನ್ನು ಬಿಡಲಾಗಿತ್ತು. ಇದು ಹಲವಾರು ಜನರಿಗೆ ಅನುಕೂಲ ತಂದಿದೆ. ಹಾಗೆಯೇ ಇದೀಗ ಮತ್ತೊಂದು ಖುಷಿಯ ವಿಷಯ ಎಂದರೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ( Belagavi) ವಿಸ್ತಾರ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ( CM . Siddaramaiah ) ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ( Ashwin Vaishnav) ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇದರ ಮುಖ್ಯ ಉದ್ದೇಶ ಏನೆಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಪರ್ಕ ಬೆಳಗಾವಿ ಜಿಲ್ಲೆಯತನಕ ವಿಸ್ತರಣೆಗೆ ಕೋರಿಕೆ :
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಪರ್ಕ ವಿಸ್ತರಣೆಯಿಂದ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ ಹಾಗೆಯೇ ಬೆಳಗಾವಿ ಜಿಲ್ಲೆಯ ತನಕ ವಿಸ್ತರಣೆ ಮಾಡಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೂ ಉತ್ತಮ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ. ಹೀಗಾಗಿ ವಂದೇ ಭಾರತ್ ರೈಲು ಸಂಪರ್ಕವನ್ನು ಹುಬ್ಬಳ್ಳಿ – ಧಾರವಾಡದಿಂದ ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಇನ್ನೂ ನೋಡುವುದಾದ್ರೆ ಬೆಳಗಾವಿ ಹಲವಾರು ಉದ್ಯಮಿಗಳು ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿದೆ. ಬೆಳಗಾವಿ ಅನೇಕ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ, ಸಕ್ಕರೆ ಕಾರ್ಖಾನೆ, ಆಟೋ ಮೊಬೈಲ್ ಉದ್ಯಮಕ್ಕೆ ಆಶ್ರಯ ತಾಣವಾಗಿದೆ. ಇದೇ ಕಾರಣಕ್ಕೆ ಈ ರೈಲಿನ ಸಂಚಾರವನ್ನು ವಿಸ್ತರಿಸಿದರೆ ಎಲ್ಲರಿಗೂ ಇಷ್ಟೆಲ್ಲ ಕಾರ್ಯಗಳಿಗೆ ಉಪಯುಕ್ತವಾಗುತ್ತದೆ.
ಇದನ್ನೂ ಓದಿ – Solar Pumpset Scheme – ಬರೋಬ್ಬರಿ 1.5 ಲಕ್ಷ ಸಬ್ಸಿಡಿ ಸಿಗುವ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ – ಮೊಬೈಲ್ ನಲ್ಲೆ ಅರ್ಜಿ ಹಾಕಿ
ಬೆಂಗಳೂರು-ಧಾರವಾಡದ ಸಂಚಾರ ದರ ( train ticket) :
ಬೆಂಗಳೂರು-ಧಾರವಾಡ 1185 ರೂ
ಬೆಂಗಳೂರು- ಹುಬ್ಬಳ್ಳಿ 1155 ರೂ
ಬೆಂಗಳೂರು- ದಾವಣಗೆರೆ 935 ರೂ
ಯಶವಂತಪುರ-ದಾವಣಗೆರೆ 920 ರೂ
ಯಶವಂತಪುರ-ಹುಬ್ಬಳ್ಳಿ 1155 ರೂ
ಯಶವಂತಪುರ-ಧಾರವಾಡ 1185 ರೂ
ದಾವಣಗೆರೆ-ಧಾರವಾಡ ರೂ.555
ದಾವಣಗೆರೆ-ಹುಬ್ಬಳ್ಳಿ 520 ರೂ
ಹುಬ್ಬಳ್ಳಿಯಿಂದ ಧಾರವಾಡಕ್ಕೆ 365 ರೂ.
ಹೀಗೆ ನಿಗದಿಪಡಿಸಲಾಗಿದೆ, ಹಾಗೆಯೇ ಬೆಳಗಾವಿಯ ತನಕ ಸಂಚಾರ ಕಲ್ಪಿಸಿದರೆ ದರ ಎಷ್ಟಾಗುತ್ತದೆ ಎಂದು ನೋಡೋಣ.
ವಂದೇ ಭಾರತ್ ಸಂಚಾರದ ಸಮಯದಲ್ಲಿ ಬದಲಾವಣೆ :
ಹಾಗೆಯೇ ರೈಲಿನ ಸಂಖ್ಯೆಯ ಪ್ರಕಾರ ಕೆಲವೊಂದು ಕಡೆಗಳಲ್ಲಿ ಸಮಯದ ( Timings) ಬದಲಾವಣೆ ಮಾಡಲಾಗಿದೆ. ಸಂಚಾರದ ಸಮಯ ಈ ಕೆಳಗಿನಂತಿದೆ :
ರೈಲು ಸಂಖ್ಯೆ 20661, ಕೆ.ಎಸ್.ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಎಸ್.ಎಸ್.ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಗ್ಗೆ 11:30/11:35ರ ಬದಲು ಬೆಳಗ್ಗೆ 11:00/11:05 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಇದನ್ನೂ ಓದಿ – OJA Tractors – ಭಾರಿ ಜನಪ್ರಿಯತೆ ಪಡೆಯುತ್ತಿದೆ ಕಮ್ಮಿ ಬೆಲೆಯ ಓಜಾ ಟ್ರಾಕ್ಟರ್, ಇಲ್ಲಿದೆ ಕಂಪ್ಲೀಟ್ ಮಾಹಿತಿ
2ರೈಲು ಸಂಖ್ಯೆ 20662, ಧಾರವಾಡ-ಕೆ.ಎಸ್.ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಯಶವಂತಪುರ ನಿಲ್ದಾಣಕ್ಕೆ ಸಂಜೆ 07:13-07:15ರ ಬದಲು ಸಂಜೆ 06:58-07:00 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಇತರ ಎಲ್ಲಾ ನಿಲ್ದಾಣಗಳಲ್ಲಿ ಸಮಯದಲ್ಲಿ ಬದಲಾವಣೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ