ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹ ಲಕ್ಷ್ಮಿ ಯೋಜನೆಯ DBT ಸ್ಟೇಟಸ್ ನ ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳೋಣ ಮತ್ತು ಇದುವರೆಗೂ ಎಲ್ಲಾ ದಾಖಲಾತಿ ಸರಿ ಇದ್ದರು ಸಹಿತ ಗೃಹಲಕ್ಷ್ಮಿ ಹಣ ಬರದೆ ಇದ್ದಲ್ಲಿ ಏನು ಮಾಡಬೇಕು ಎಂಬುದನ್ನು ಕೆಳಗೆ ವಿವರಿಸಲಾಗಿದೆ, ತಪ್ಪದೆ ವರದಿಯನ್ನು ಕೊನೆಯವರೆಗೂ ಓದಿ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ..!
ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 80 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ. ಮತ್ತು ಡಿ ಬಿ ಟಿ ಆಪ್ ನಲ್ಲಿ ಗೃಹ ಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಅಪ್ಡೇಟ್ ಮಾಡುತ್ತಿದ್ದಾರೆ. ವರದಿಯ ಕೊನೆಯಲ್ಲಿ ಇದರ ಬಗ್ಗೆ ವಿವರಿಸಲಾಗಿದೆ ಚೆಕ್ ಮಾಡಿ.
ದಸರಾ, ದೀಪಾವಳಿ ಹಬ್ಬದ (festival season) ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಎರಡು ಸಾವಿರ ರೂಪಾಯಿಗಳನ್ನು ಜಮಾ ಮಾಡಿ ಹಬ್ಬದ ಉಡುಗೊರೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯ (Gruha lakshmi scheme) 2ನೇ ಕಂತಿನ ಸೆಪ್ಟೆಂಬರ್ ತಿಂಗಳ ಹಣ ಕೂಡ ಬಿಡುಗಡೆ ಆಗಿ ಬೆಳಗಾವಿ ಮತ್ತು ಮೈಸೂರು ವಿಭಾಗದ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ., ಈ ಕೆಳಗೆ ಕೊಟ್ಟಿರುವ ಫೋಟೋ ನೀವು ಗಮನಿಸಬಹುದು, ಹಾವೇರಿ ಜಿಲ್ಲೆಯ ಮನೆ ಯಜಮಾನಿಯ ಖಾತೆಗೆ ಹಣ ಜಮಾ ಆಗಿದೆ.
ಎಲ್ಲಾ ದಾಖಲೆ ಸರಿ ಇದ್ರೂ ಹಣ ಬಂದಿಲ್ಲ..!
ಇದಕ್ಕೆ ಮುಖ್ಯವಾಗಿರುವ ಕಾರಣ ಫಲಾನುಭವಿ ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳು. ನಿಮ್ಮ ಖಾತೆಯಲ್ಲಿ ಒಂದು ಸಣ್ಣ ಹೆಸರಿನ (Spelling Mistake) ವ್ಯತ್ಯಾಸವಾದರೂ ಕೂಡ ಹಣ ವರ್ಗಾವಣೆ ಆಗುವುದಿಲ್ಲ. ನೀವು ಅರ್ಜಿ ಸಲ್ಲಿಕೆ ಮಾಡುವುದಾಗ ನೀಡಿರುವ ಮಾಹಿತಿ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಆಧಾರ್ ಕಾರ್ಡ್ನಲ್ಲಿರುವ ಮಾಹಿತಿ. ಈ ಮೂರು ಕೂಡ ಒಂದೇ ಆಗಿರಬೇಕು. ಅಂದರೇ ನಿಮ್ಮ ಹೆಸರು, ಮನೆ ವಿಳಾಸ, ನಿಮ್ಮ ಹೆಸರಿಗೆ ಇನ್ಶಲ್ ಇದ್ದರೆ ಅದು ಕೂಡ ಸರಿಯಾಗಿ ಇರಬೇಕು. ಈ ಸಮಸ್ಯೆ ಇರುವ ಕಾರಣದಿಂದಲೇ ಇನ್ನೂ 8-9 ಲಕ್ಷ ಮಂದಿಗೆ ಹಣ ವರ್ಗಾವಣೆ ಆಗಿಲ್ಲ ಅಂತ ಇಲಾಖೆ ಮಾಹಿತಿ ನೀಡಿದೆ. ಎನ್ ಪಿ ಸಿ ಐ (NPCI), ಆಧಾರ್ ಮ್ಯಾಪಿಂಗ್ (Aadhaar Mapping), ರೇಷನ್ ಕಾರ್ಡ್ (ration card correction) ನಲ್ಲಿ ಹೆಸರು ಬದಲಾವಣೆ, ಬ್ಯಾಂಕ್ ಖಾತೆಯನ್ನು ಆಕ್ಟಿವ್ ಆಗಿ ಇಟ್ಟುಕೊಳ್ಳುವುದು ಈ ಮೊದಲಾದ ಬದಲಾವಣೆಗಳನ್ನು ನೀವು ಮಾಡಿಕೊಳ್ಳಬೇಕು.
ಎಲ್ಲಾ ಸರಿ ಇದ್ರೂ ಹಣ ಬಂದಿಲ್ಲ ಅನ್ನೋರು ಇದೊಂದು ಪ್ರಯತ್ನ ಮಾಡಿ
ಎಲ್ಲ ದಾಖಲಾತಿ ಸರಿ ಇದ್ದವರು ಮತ್ತೊಮ್ಮೆ ಪೋಸ್ಟ್ ಆಫೀಸ್ನಲ್ಲಿ ಒಂದು ಹೊಸ ಖಾತೆಯನ್ನು ತೆರೆಯುವುದು ಉತ್ತಮ, ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆಯನ್ನು ತೆರೆಯಿರಿ ಉದಾ : ಬ್ಯಾಂಕ್ ಆಫ್ ಬರೋಡ, ಕೆನರಾ, SBI, ಎಲ್ಲಾ ಸರಿ ಇದ್ರೂ ಹಣ ಬರ್ತಿಲ್ಲ ಅಂದ್ರೆ ಅದು ಬ್ಯಾಂಕ್ ಆಧಾರ್ ಸೀಡಿಂಗ್ ಸಮಸ್ಯೆಯೂ ಆಗಿರಬಹುದು ಹಾಗಾಗಿ ಹೊಸ ಖಾತೆಯನ್ನು ನೀವು ಆಧಾರ್ ದೃಢೀಕರಣ ಮೂಲಕ ತೆರೆದಾಗ DBT ವರ್ಗಾವಣೆ ಸುಲಭವಾಗಿ ಆಗುತ್ತದೆ. ಇದೊಂದು ಪ್ರಯತ್ನ ಮಾಡಿ ನೋಡಿ.
ಗೃಹ ಲಕ್ಷ್ಮಿ ಹಣ DBT ಆಪ್ ನಲ್ಲಿ ಈಗ ತೋರಿಸುತ್ತಿದೆ ಚೆಕ್ ಮಾಡಿ
ಕೆಲವೊಮ್ಮೆ ಮನೆ ಯಜಮಾನಿಯರಿಗೆ ಹಣ ಜಮಾ ಆಗಿರುತ್ತದೆ. ಆದರೆ ಹಲವು ಬ್ಯಾಂಕ್ ಖಾತೆಗಳು ನಿಮ್ಮ ಹೆಸರಲ್ಲಿ ಇದ್ದಾಗ ಯಾವ ಖಾತೆಗೆ ಜಮೆ ಆಗಿದೆ ಅಂತ ನಿಮಗೆ ಗೊತ್ತಾಗುವುದಿಲ್ಲ ಸಂದರ್ಭದಲ್ಲಿ ನೀವು ಡಿ ಬಿ ಟಿ ಆಪ್ ಮೂಲಕ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹೌದು, ಡಿಬಿಟಿ ಆಪ್ ನಲ್ಲಿ ಈಗ ಗೃಹಲಕ್ಷ್ಮಿ ಹಣ ಅಪ್ಡೇಟ್ ಆಗುತ್ತಿದೆ. ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು
ನೇರವಾಗಿ ತೆರಳಿ ವಿಚಾರಿಸಿ
ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಜಮಾ ಆಗದಿದ್ದರೆ, ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕಿ ಮಾಹಿತಿ ನೀಡಿದ್ದಾರೆ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು
ಇದನ್ನೂ ಓದಿ – SC/ST ವರ್ಗದವರಿಗೆ ಸಾಲ & ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿಯರಿಗೆ ನವರಾತ್ರಿ ಹಬ್ಬದ ಬಂಪರ್ ಗಿಫ್ಟ್ – ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ರೂ. 4000/- ಒಟ್ಟಿಗೆ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ನಮಗೆ
Namage 2 month amount namma khatege jama aagalilla
I didn’t get the amount