ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣದ ಬಗ್ಗೆ ಮಾಹಿತಿ ಕೊಡಲಾಗುವುದು. ಈಗಾಗಲೇ ಎರಡನೇ ಕಂತು ಬಿಡುಗಡೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಮಹಿಳೆಯರ ಕೈಗೆ ಹಣ ಸಿಕ್ಕಿದ್ದು, ಬಾಕಿ ಇರುವ ಕಡೆಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ಬಾಕಿ ಉಳಿದ ಫಲಾನುಭವಿಗಳಿಗೆ ಶೀಘ್ರ ಹಣ ತಲುಪಿಸಬೇಕು. ಇನ್ನು ಎರಡನೇ ಕಂತಿನ ಹಣವು ಹಂತ ಹಂತವಾಗಿ ಬಿಡುಗಡೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಇಲ್ಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
2ನೇ ಕಂತಿನ ಹಣ ಬಿಡುಗಡೆ..! 31 ನೇ ತಾರೀಕಿಗೆ ಬ್ಯಾಂಕ್ ಗೆ ಜಮಾ
ದಸರಾ, ದೀಪಾವಳಿ ಹಬ್ಬದ (festival season) ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಎರಡು ಸಾವಿರ ರೂಪಾಯಿಗಳನ್ನು ಜಮಾ ಮಾಡಿ ಹಬ್ಬದ ಉಡುಗೊರೆ ನೀಡಿದೆ. ಗೃಹಲಕ್ಷ್ಮಿ ಯೋಜನೆಯ (Gruha lakshmi scheme) 2ನೇ ಕಂತಿನ ಸೆಪ್ಟೆಂಬರ್ ತಿಂಗಳ ಹಣ ಕೂಡ ಬಿಡುಗಡೆ ಆಗಿ ಬೆಳಗಾವಿ ಮತ್ತು ಮೈಸೂರು ವಿಭಾಗದ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ., ಈ ಕೆಳಗೆ ಕೊಟ್ಟಿರುವ ಫೋಟೋ ನೀವು ಗಮನಿಸಬಹುದು, ಹಾವೇರಿ ಜಿಲ್ಲೆಯ ಮನೆ ಯಜಮಾನಿಯ ಖಾತೆಗೆ ಹಣ ಜಮಾ ಆಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಎಲ್ಲಾ ದಾಖಲೆ ಸರಿ ಇದ್ರೂ ಹಣ ಬಂದಿಲ್ಲ..!
ಇದಕ್ಕೆ ಮುಖ್ಯವಾಗಿರುವ ಕಾರಣ ಫಲಾನುಭವಿ ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳು. ನಿಮ್ಮ ಖಾತೆಯಲ್ಲಿ ಒಂದು ಸಣ್ಣ ಹೆಸರಿನ (Spelling Mistake) ವ್ಯತ್ಯಾಸವಾದರೂ ಕೂಡ ಹಣ ವರ್ಗಾವಣೆ ಆಗುವುದಿಲ್ಲ. ನೀವು ಅರ್ಜಿ ಸಲ್ಲಿಕೆ ಮಾಡುವುದಾಗ ನೀಡಿರುವ ಮಾಹಿತಿ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಆಧಾರ್ ಕಾರ್ಡ್ನಲ್ಲಿರುವ ಮಾಹಿತಿ. ಈ ಮೂರು ಕೂಡ ಒಂದೇ ಆಗಿರಬೇಕು. ಅಂದರೇ ನಿಮ್ಮ ಹೆಸರು, ಮನೆ ವಿಳಾಸ, ನಿಮ್ಮ ಹೆಸರಿಗೆ ಇನ್ಶಲ್ ಇದ್ದರೆ ಅದು ಕೂಡ ಸರಿಯಾಗಿ ಇರಬೇಕು. ಈ ಸಮಸ್ಯೆ ಇರುವ ಕಾರಣದಿಂದಲೇ ಇನ್ನೂ 8-9 ಲಕ್ಷ ಮಂದಿಗೆ ಹಣ ವರ್ಗಾವಣೆ ಆಗಿಲ್ಲ ಅಂತ ಇಲಾಖೆ ಮಾಹಿತಿ ನೀಡಿದೆ. ಎನ್ ಪಿ ಸಿ ಐ (NPCI), ಆಧಾರ್ ಮ್ಯಾಪಿಂಗ್ (Aadhaar Mapping), ರೇಷನ್ ಕಾರ್ಡ್ (ration card correction) ನಲ್ಲಿ ಹೆಸರು ಬದಲಾವಣೆ, ಬ್ಯಾಂಕ್ ಖಾತೆಯನ್ನು ಆಕ್ಟಿವ್ ಆಗಿ ಇಟ್ಟುಕೊಳ್ಳುವುದು ಈ ಮೊದಲಾದ ಬದಲಾವಣೆಗಳನ್ನು ನೀವು ಮಾಡಿಕೊಳ್ಳಬೇಕು.
ಎಲ್ಲಾ ಸರಿ ಇದ್ರೂ ಹಣ ಬಂದಿಲ್ಲ ಅನ್ನೋರು ಇದೊಂದು ಪ್ರಯತ್ನ ಮಾಡಿ
ಎಲ್ಲಾ ದಾಖಲಾತಿ ಸರಿಯಿದೆ ಆದರೂ ಹಣ ಬರುತ್ತಿಲ್ಲ ಎಂದು ಹಾವೇರಿ ಯಜಮಾನಿ ಒಬ್ಬರು ಹೇಳುತ್ತಿದ್ದರು, ನಂತರ ಬ್ಯಾಂಕ್ ಖಾತೆ ಸಮಸ್ಯೆ ಇದೆಯಾ ಎಂದು ಬ್ಯಾಂಕ್ ಆಫ್ ಬರೋಡ ದಲ್ಲಿ ಹೊಸ ಖಾತೆ ತೆರೆದ ಕೇವಲ ಮೂರು ದಿನದಲ್ಲಿ ಖಾತೆಗೆ ಹಣ ಬಂದು ಜಮಾ ಆಗಿದೆ
ಎಲ್ಲ ದಾಖಲಾತಿ ಸರಿ ಇದ್ದವರು ಮತ್ತೊಮ್ಮೆ ಪೋಸ್ಟ್ ಆಫೀಸ್ನಲ್ಲಿ ಒಂದು ಹೊಸ ಖಾತೆಯನ್ನು ತೆರೆಯುವುದು ಉತ್ತಮ, ಅಥವಾ ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾತೆಯನ್ನು ತೆರೆಯಿರಿ ಉದಾ : ಬ್ಯಾಂಕ್ ಆಫ್ ಬರೋಡ, ಕೆನರಾ, SBI, ಎಲ್ಲಾ ಸರಿ ಇದ್ರೂ ಹಣ ಬರ್ತಿಲ್ಲ ಅಂದ್ರೆ ಅದು ಬ್ಯಾಂಕ್ ಆಧಾರ್ ಸೀಡಿಂಗ್ ಸಮಸ್ಯೆಯೂ ಆಗಿರಬಹುದು ಹಾಗಾಗಿ ಹೊಸ ಖಾತೆಯನ್ನು ನೀವು ಆಧಾರ್ ದೃಢೀಕರಣ ಮೂಲಕ ತೆರೆದಾಗ DBT ವರ್ಗಾವಣೆ ಸುಲಭವಾಗಿ ಆಗುತ್ತದೆ. ಇದೊಂದು ಪ್ರಯತ್ನ ಮಾಡಿ ನೋಡಿ.
ಗೃಹ ಲಕ್ಷ್ಮಿ ಹಣ DBT ಆಪ್ ನಲ್ಲಿ ಈಗ ತೋರಿಸುತ್ತಿದೆ ಚೆಕ್ ಮಾಡಿ
ಕೆಲವೊಮ್ಮೆ ಮನೆ ಯಜಮಾನಿಯರಿಗೆ ಹಣ ಜಮಾ ಆಗಿರುತ್ತದೆ. ಆದರೆ ಹಲವು ಬ್ಯಾಂಕ್ ಖಾತೆಗಳು ನಿಮ್ಮ ಹೆಸರಲ್ಲಿ ಇದ್ದಾಗ ಯಾವ ಖಾತೆಗೆ ಜಮೆ ಆಗಿದೆ ಅಂತ ನಿಮಗೆ ಗೊತ್ತಾಗುವುದಿಲ್ಲ ಸಂದರ್ಭದಲ್ಲಿ ನೀವು ಡಿ ಬಿ ಟಿ ಆಪ್ ಮೂಲಕ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹೌದು, ಡಿಬಿಟಿ ಆಪ್ ನಲ್ಲಿ ಈಗ ಗೃಹಲಕ್ಷ್ಮಿ ಹಣ ಅಪ್ಡೇಟ್ ಆಗುತ್ತಿದೆ. ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
I don’t have any other canerbank aonut i only un bank
Hi, Thank you for your comment. please join our WhatsApp and telegram groups for quick news alerts