ಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

WhatsApp Image 2023 11 10 at 10.46.49 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ:

ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನು ಮಾಡದೆ ಸ್ಥಾನ ಕಾಲಿಯಲ್ಲಿ ಉಳಿದಿತ್ತು, ಆದರೆ ದೀಪಾವಳಿಯ ಸಂದರ್ಭದಲ್ಲಿ ಒಂದು ಉಡುಗೊರೆಯನ್ನು ನೀಡಿದಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದಾರೆ. ಈ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಜನರ ಹೆಸರು ಕೂಡ ಬರುತ್ತಿದ್ದವು ಆದರೆ ಯಡಿಯೂರಪ್ಪನವರ ಮಗನಾದ ವಿಜಯೇಂದ್ರ ಅವರನ್ನು ಈ ಸ್ಥಾನಕ್ಕೆ ಏರಿಸಿರುವುದು ಎಲ್ಲರಲ್ಲಿಯೂ ಆಶ್ರಯವನ್ನು ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿದ ಆದೇಶ ಪ್ರಕಟಿಸಿದ್ದಾರೆ.  ಬಿಜೆಪಿ ಹೈಕಮಾಂಡ್‌ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.

byy

ಯಡಿಯೂರಪ್ಪನವರ ಮಗ ಎಂಬ ಕಾರಣಕ್ಕೆ ಈ ಹುದ್ದೆ ನೀಡಿಲ್ಲ ಎಂದ ಬಿವೈ ವಿಜಯೇಂದ್ರ:

ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಆಯ್ಕೆಯಾದ ನಂತರ ಪ್ರತಿಕ್ರಿಯೆಸಿದ ಇವರು ಮಾಜಿ ಮುಖ್ಯಮಂತ್ರಿಯ ಮಗ ಎಂಬ ಕಾರಣಕ್ಕೆ ಈ ಸ್ಥಾನ ಕೊಟ್ಟಿಲ್ಲ, ಆದರೆ ನನಗೆ ಯಡಿಯೂರಪ್ಪನವರ ಮಗ ಎಂಬುವ ಹೆಮ್ಮೆಯಿದೆ ಪಕ್ಷ ಬಿಡುವ ಯೋಚನೆಯಲ್ಲಿ ಇರುವವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಶುಕ್ರವಾರ ಮಾತನಾಡಿ ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರದ ವೀಕ್ಷಕರು ಕೂಡ ಆಗಮಿಸುತ್ತಿದ್ದಾರೆ, ಅವರ ಸಮ್ಮುಖದಲ್ಲೇ ಪ್ರತಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಯಾಗಲಿದೆ ಎಂದು ತಿಳಿಸಿದರು.

by vijayendra and bs yediyurappa 104826924

ಮುಂದಿನ ವಾರ ವಿಧಾನಸಭೆ ವಿಪಕ್ಷ ನಾಯಕರ ಆಯ್ಕೆ:

ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕರಾಗಿರುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಲಿಂಗಾಯತ ಹಾಗೂ ಒಕ್ಕಲಿಗ ಎರಡು ಪ್ರಬಲ ಸಮುದಾಯಗಳಾಗಿವೆ. ಈ ಸಮುದಾಯಗಳು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಪ್ರಬಲವಾಗಿವೆ. ಈ ಸಮುದಾಯಗಳ ಒಟ್ಟಾರೆ ಬಲ ಯಾವ ಪಕ್ಷಕ್ಕೆ ಅಧಿಕವಾಗಿರುತ್ತೋ ಆ ಪಕ್ಷಗಳು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿವೆ. ಆದ್ದರಿಂದ, ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಹಾಗೂ ವಿಧಾನಸಭೆಯಲ್ಲಿ ವಿಪಕ್ಷಗಳ ನಾಯಕತ್ವ ಸ್ಥಾನ – ಇವೆರಡಕ್ಕೂ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯವರನ್ನು ಪ್ರತ್ಯೇಕವಾಗಿ ನೇಮಕ ಮಾಡಲೇಬೇಕಾಗುತ್ತದೆ. ಸದ್ಯಕ್ಕೆ ಅಶ್ವತ್ಥ ನಾರಾಯಣ ಅವರ ಹೆಸರು ವಿಪಕ್ಷ ನಾಯಕರಾಗಿ ಕೇಳಿ ಬರುತ್ತಿದೆ. ಆದರೆ, ಹೈಕಮಾಂಡ್ ನವರು ಫೈನಲ್ ಆಗಿ ಯಾರನ್ನು ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ, ಕಾದು ನೋಡಬೇಕಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

“ಕರ್ನಾಟಕದಿಂದ ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತು ಪ್ರಧಾನಿ ಮೋದಿಯವರ ಬ್ರ್ಯಾಂಡ್ ಮತ್ತು ಖ್ಯಾತಿಯನ್ನು ಬಲಪಡಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಯಶಸ್ಸಿಗೆ ನಾವು ಕೆಲಸ ಮಾಡುತ್ತೇವೆ,” ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಇದನ್ನೂ ಓದಿ – ಮಹಿಳೆಯರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆ’ಗೆ ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ 6,000 ರೂ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದನ್ನೂ ಓದಿ – Gold rate Today- ಚಿನ್ನ-ಬೆಳ್ಳಿಯ ದರದಲ್ಲಿ ಇಳಿಕೆ, ದೀಪಾವಳಿಗೆ ಚಿನ್ನಾಭರಣ ಖರೀದಿಸೋರಿಗೆ ಗುಡ್ ನ್ಯೂಸ್

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!