ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

cancelled

ಈಗಾಗಲೇ 8ಲಕ್ಷ BPL ರೇಷನ್ ಕಾರ್ಡ್ ಗಳು ರದ್ದು ಆಗಿವೆ! ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು ಅನರ್ಹ ಪಡಿತರ ಚೀಟಿಗಳ ವಿರುದ್ಧ ಸಮರ ಸಾರಿರುವ ಸರ್ಕಾರ, ಲಕ್ಷಾಂತರ ಅನರ್ಹರನ್ನು ಪತ್ತೆ ಮಾಡುವ ಕಾರ್ಯ ಮುಂದುವರಿಸಿದೆ.  ಹೀಗೆ ರದ್ದುಗೊಂಡರೆ ಈ ಎಲ್ಲ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ (Anna Bhagya and Gruha Lakashmi Scheme) ಹಣ ಹಾಕುವುದು ತಪ್ಪಲಿದೆ.

ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಕಾರ್ಡ್ ವಿತರಿಸುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ ಹಾಗಾಗಿ ಅನರ್ಹ ಪಡಿತರ ಚೀಟಿಗಳನ್ನು ರದ್ದು ಮಾಡಲು ಸರ್ಕಾರ ಎಲ್ಲಾ ರೀತಿಯ ಕಾಸರತ್ತುಗಳನ್ನು ನಡೆಸುತ್ತಿದೆ, ಹೌದು. ಈಗಾಗಲೇ ಪಡಿತರ ಚೀಟಿಗಳಲ್ಲಿದ್ದ ಮೃತಪಟ್ಟವರ ಹೆಸರನ್ನು ಡಿಲೀಟ್‌ ಮಾಡಿರುವ ಸರಕಾರ ಈಗ ಕಳೆದ 6 ತಿಂಗಳಿಂದ ರೇಷನ್‌ ತೆಗೆದುಕೊಳ್ಳದವರ ಪಡಿತರ ಚೀಟಿಗಳನ್ನು ರದ್ದು ಮಾಡಲು ಹೊರಟಿದೆ. ಮತ್ತು ನೀವು white board ಕಾರ್ ಹೊಂದಿರುವವರಾದರೆ, ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ. ಮತ್ತು ನೀವು ಆ ರೇಷನ್ ಕಾರ್ಡ್ ರದ್ದಾಗಿರುವ(Ration card cancellation) ಲಿಸ್ಟ್ ನ ಲ್ಲಿ ಇದ್ದೀರಾ ಇಲ್ಲವೋ ಎಂದು ಪರಿಶೀಲಿಸಬೇಕೆಂದರೆ ನಮ್ಮ ವರದಿಯನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪಡಿತರ ಚೀಟಿಯ ರದ್ದು ಪ್ರಾರಂಭ : 

ಹೌದು, ಐಷಾರಾಮಿ ಕಾರು ಇದ್ದವರು, ಸರಕಾರಿ ಕೆಲಸ ಮಾಡುವವರು, 3 ಎಕರೆಗಿಂತ ಜಾಸ್ತಿ ಕೃಷಿ ಜಮೀನು ಇದ್ದವರು, ಹೆಚ್ಚಿಗೆ ಟ್ಯಾಕ್ಸ್ ಕಟ್ಟುವವರು ಹೀಗೆ ಅನೇಕ ಸೌಲಭ್ಯ ಇದ್ದವರು ಕೂಡಾ ನಕಲಿ BPL ಕಾರ್ಡ್ ಅನ್ನು ಹೊಂದಿದ್ದಾರೆ. ಆಹಾರ ಇಲಾಖೆಯು ಇಂತಹ ನಕಲಿ BPL ಕಾರ್ಡನ್ನು ಹೊಂದಿದವರ ಪತ್ತೆ ಹಚ್ಚಿ ಅವರ Ration card ರದ್ದುಗೊಳಿಸುತ್ತಿದ್ದಾರೆ, ಮತ್ತು ದಂಡ ಕೂಡ ವಿಧಿಸಲಾಗುತ್ತಿದೆ. 6 ತಿಂಗಳಿಂದ ಪಡಿತರ ಪಡೆಯದೇ ಇರುವ ಎಲ್ಲ 3.26 ಲಕ್ಷಕ್ಕೂ ಅಧಿಕ ಪಡಿತರ ಕಾರ್ಡ್‌ಗಳು ಪತ್ತೆಯಾಗಿವೆ. ಹೀಗಾಗಿ ಇವುಗಳ ದತ್ತಾಂಶವನ್ನು ಸಮರ್ಪಕವಾಗಿ ಸಂಗ್ರಹ ಮಾಡಿ ರದ್ದು ಮಾಡಲು ರಾಜ್ಯ ಸರ್ಕಾರ ಸಹ ಆದೇಶ ನೀಡಿದೆ. ಇದರಿಂದ ಯಾವೆಲ್ಲ ಗ್ಯಾರಂಟಿ ಯೋಜನೆಗೆ ಪಡಿತರ ಚೀಟಿ ಬೇಕೋ ಅದೆಲ್ಲದಕ್ಕೂ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಮತ್ತು  ಗ್ರಾಹಕರ ವ್ಯವಹಾರಗಳ ಇಲಾಖೆ, ಸುಮಾರು 4.6 ಲಕ್ಷ ನಕಲಿ ಕಾರ್ಡ್ ಇರುವವರಿಗೆ ದಂಡ ವಿಧಿಸಿದೆ. ಮತ್ತು ಸಾರಿಗೆ ಇಲಾಖೆಯ  ಸಹಾಯದಿಂದ 12,583 ಜನರ BPL ಕಾರ್ಡ್ ಇದ್ದವರ ಐಷಾರಾಮಿ ಕಾರ್ ಮತ್ತು white board ಕಾರ್ ಗಳನ್ನು ಹೊಂದಿದ್ದಾರೆ ಎಂದು ಪತ್ತೆ ಹಚ್ಚಿದೆ.

ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗೆ ಕೊಕ್ !

ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಬಿಪಿಎಲ್ & ಅಂಥೋದಯ ಪಡಿತರ ಚೀಟಿ ಇದ್ದವರಿಗೆ ಮಾತ್ರ ಸಿಗುತ್ತದೆ, ಒಂದು ವೇಳೆ ಬಿಪಿಎಲ್ & ಅಂಥೋದಯ ಕಾರ್ಡುಗಳು ರದ್ದಾದರೆ ಎಲ್ಲಾ ಗ್ಯಾರಂಟಿ ಯೋಜನೆಗಳಿಂದ ದೂರವಾಗ ಬೇಕಾಗುತ್ತದೆ. ಹೌದು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಹಣ ಕಾರ್ಡ್ ರದ್ದಾಗ ಫಲಾನುಭವಿಗಳಿಗೆ ಸಿಗುವುದಿಲ್ಲ

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ :

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

rrrrr

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

rrrrr2

whatss

ಹಂತ 4: ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

sdfgsewf

ಈ ಮೇಲಿನ ಹಂತಗಳನ್ನು ಅನುಸರಿಸಿಕೊಂಡು, ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ. ರದ್ದಾಗಿರುವುದಕ್ಕೆ ಕಾರಣವನ್ನು ನೀಡಿದ್ದರೆ ಅವುಗಳನ್ನು ಸರಿಪಡಿಸುವಂತಿದ್ದರೆ ಸರಿಪಡಿಸಿಕೊಂಡು ಪುನಃ ನೀವು ಅರ್ಜಿಗಳನ್ನು ಕೂಡ ಅಸಲಿಸಬಹುದಾಗಿದೆ.

Ration card  ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:

ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010  

 

ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.

mk1

ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು  ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ  ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ  ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.

mk2

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

One thought on “ಈ ವರ್ಗದ ಜನರ ಗೃಹಲಕ್ಷ್ಮಿ & ಅನ್ನಭಾಗ್ಯದ ಹಣ ರದ್ದು.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ , @ahara.kar.nic.in/

Leave a Reply

Your email address will not be published. Required fields are marked *

error: Content is protected !!