ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ನವೆಂಬರ್ 23 ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಇನ್ನು ಕರ್ನಾಟಕದ ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಟಣೆಯಲ್ಲಿ ನೀಡಿದ ಮಾಹಿತಿ ಪ್ರಕಾರ ಹಗುರ ಮಳೆ ಎಂದರೆ 2.5 ಮಿ.ಮೀ.ನಿಂದ 64.5 ಮಿ.ಮೀ. ವರೆಗೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನವೆಂಬರ್ 24 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಒಣಹವೆ ವಾತಾವರಣ ಕಂಡು ಬಂದಿದೆ, ಹಿಂಗಾರು ಮಳೆ ಸಹ ಕ್ಷೀಣವಾಗಿತ್ತು. ಇದೀಗ ಮತ್ತೆ ಹಿಂಗಾ-ರು ಚುರುಕುಗೊಂಡಿದ್ದು, ಮತ್ತೆ ಮಳೆರಾಯನ ಆಗಮನವಾಗಲಿದೆ.
ಮುಂದಿನ 48 ಗಂಟೆಗಳ ಒಳಗಡೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ. ಅದೇ ರೀತಿ ಕರಾವಳಿ ಭಾಗದಲ್ಲೂ ಒಣ ಹವೆ ಇರಲಿದೆ. ಆದರೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.
ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದ್ದು, ರಾಜ್ಯದ ಇತರ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆ ಸೇರಿದಂತೆ ಕನ್ಯಾಕುಮಾರಿ, ರಾಮನಾಥಪುರಂ, ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ