ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ(Garantee schemes)ಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮತ್ತೆ ವಿಶೇಷ ರೀತಿಯಲ್ಲಿ ಸದ್ದನು ಮಾಡುತ್ತಿದೆ. ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಹಲವಾರು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ 2000ರೂಗಳ ಹಣವನ್ನು ಪ್ರತಿ ತಿಂಗಳು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಕೆಲವರಿಗೆ ಹಣ ಬರದೇ ಇದೆ, ಆದರೆ ಇನ್ನು ಮುಂದೆ ನಾಡ ದೇವಿಯಾದ ಚಾಮುಂಡೇಶ್ವರಿ ಗೆ ಕೂಡ ಪ್ರತಿ ತಿಂಗಳು 2000 ರೂಗಳ ಗೃಹಲಕ್ಷ್ಮಿಯ ಹಣವನ್ನು ನೀಡಲು ರಾಜ್ಯ ಸರ್ಕಾರ ಸೂಚಿಸಿದೆ.
ಇನ್ನು ಮುಂದೆ ಚಾಮುಂಡೇಶ್ವರಿ ದೇವರು ಕೂಡ ಗೃಹಲಕ್ಷ್ಮಿಯ ಫಲಾನುಭವಿ :
ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ ಚಾಲನೆಯನ್ನು ಮೈಸೂರಿನಲ್ಲಿಯೇ ನೆರವೇರಿಸಲಾಗಿತ್ತು. ಆಗಲೂ ಕೂಡ ಮೊದಲನೇ ಕಂತಿನ ಹಣವನ್ನು ತಾಯಿ ಚಾಮುಂಡೇಶ್ವರಿಯ ಪಾದಕ್ಕೆ ಅರ್ಪಿಸಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಲಾಗಿತ್ತು. ಈಗ ಚಾಮುಂಡೇಶ್ವರಿ ದೇವಿಯ ಖಾತೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ ಮಾಡುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(D K shivakumar) ಅವರು ಆದೇಶವನ್ನು ನೀಡಿದ್ದಾರೆ.
ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿಯ ಖಾತೆಗೆ 2000/- ಗೃಹಲಕ್ಷ್ಮಿಯ ಹಣ ಜಮಾ :
ಈ ವಿಷಯದ ಕುರಿತಾಗಿ ಕಾಂಗ್ರೆಸ್ ಎಂಎಲ್‌ಸಿ ಹಾಗೂ ಪಕ್ಷದ ರಾಜ್ಯ ಮಾಧ್ಯಮ ಪ್ರಕೋಷ್ಠದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಶುಕ್ರವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ಬಳಿ ಮನವಿ ಮಾಡಿದ್ದರು, ಇದಕ್ಕೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಅವರು ಪತ್ರದ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವೈಯಕ್ತಿಕವಾಗಿ ಅಥವಾ ಇಲಾಖೆಯ ಕಡೆಯಿಂದ ಪ್ರತಿ ತಿಂಗಳು ನಾಡದೇವಿಯಾದ ಚಾಮುಂಡಿ ಅಮ್ಮನವರ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ 2,000 ಹಣವನ್ನು ಜಮೆ ಮಾಡುವಂತೆ ತಿಳಿಸಿದ್ದಾರೆ.
ಇದೊಂದು ವಿಶೇಷ ಸೂಚನೆ ಅಂತಾನೆ ಹೇಳಬಹುದು. ವಿರೋಧ ಪಕ್ಷದವರು ಇದಕ್ಕೆ, ತಾಂತ್ರಿಕ ಅಡಚಣೆ ಗಳಿಂದಾಗಿ ಗೃಹಲಕ್ಷ್ಮಿಯ ಯೋಜನೆ ಅರ್ಧಕ್ಕೆ ನಿಂತಿರುವುದರಿಂದ ದೇವರ ಮೊರೆ ಹೋಗುತ್ತಿದ್ದಾರೆ ಎಂದು ಟೀಕಿಸುತ್ತಿದ್ದಾರೆ. ಅದೇನೆ ಆಗಲಿ ಇನ್ನು ಮುಂದೆ, ಚಾಮುಂಡೇಶ್ವರಿ ದೇವಿಯು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಲಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ