ಇದೀಗ ರಾಜ್ಯ ಸರ್ಕಾರದಿಂದ (State Government ) ರೈತರಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಹೌದು , ಗಂಗಾ ಕಲ್ಯಾಣ ಯೋಜನೆಯ ( Ganga Kalyan Scheme ) ಅಡಿಯಲ್ಲಿ ರೈತರಿಗೆ ಉಚಿತ ಬೋರ್(Free bore well) ಕೊರೆಸಲು ಸಹಾಯಧನ(subsidy) ನೀಡಲಿದೆ. ಈ ಒಂದು ಯೋಜನೆಯಿಂದ ರೈತರಿಗೆ ಬೆಳೆ ಬೆಳೆಯಲು ನೀರಿನ ಕೊರತೆ ನೀಗಿಸಲು ಮತ್ತು ಅವರ ಆರ್ಥಿಕ ಕಷ್ಟಕ್ಕೆ ಈ ಒಂದು ಯೋಜನೆಯು ಬಹಳ ಉಪಯೋಗ ಆಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ರೈತರಿಗೆ ಉಚಿತ ಬೋರ್ವೆಲ್ ಕೊರಸಲು ಉತ್ತಮ ಅವಕಾಶ :
ಈ ಒಂದು ಯೋಜನೆ ಅಡಿಯಲ್ಲಿ ರೈತರ ಜಮೀನಿನಲ್ಲಿ ಅವರಿಗೆ ಬೇಕಾದ ಮತ್ತು ಅಗತ್ಯ ಇರುವ ಬೋರ್ವೆಲ್ ಕೊರೆಸಿ ಪಂಪ್ ಸೆಟ್ ( Pump set ) ಅಳವಡಿಸಿಕೊಳ್ಳಲು ಸರ್ಕಾರ ಉಚಿತ ಸೌಲಭ್ಯವನ್ನು ಕೊಡಲಿದೆ. ಹಾಗೆಯೇ ಇದರಿಂದ ಉತ್ತಮ ಬೆಳೆಯನ್ನು ನಿರೀಕ್ಷಿಸಬಹುದು. ಮತ್ತು ಈ ಯೋಜನೆಯ ಅಡಿಯಲ್ಲಿ 1.5 ಲಕ್ಷ ರೂಪಾಯಿ ಗಳಿಂದ 3.50 ಲಕ್ಷ ರೂಪಾಯಿಗಳ ವರೆಗೆ ರೈತರು ಸರ್ಕಾರದಿಂದ ಸಹಾಯಧನ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ.
ಈ ಸಾಲ ಸೌಲಭ್ಯ ದಿಂದ ಅವರು ಅವರಿಗೆ ಬೇಕಾದ ರೀತಿಯಲ್ಲಿ ನೀರಾವರಿ ಮಾಡಿಕೊಂಡು ಬೆಳೆಗಳನ್ನು ಬೆಳೆಯಬಹುದು ಮತ್ತು ಬರಗಾಲದ ಸಮಯದಲ್ಲಿ ಇದು ಒಂದು ಉತ್ತಮ ಯೋಜನೆಯಾಗಿದೆ. ಹಾಗೆಯೇ ಇದು ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದಾಗಿದೆ.
ಮತ್ತು ರೈತರ ಸ್ವಾವಲಂಬಿ ಜೀವನವನ್ನು ( Own Agriculture ) ಸಾಕಾರಗೊಳಿಸಲು. ಅವರು ತಮ್ಮದೇ ಆದ ಹೊಸ ರೀತಿಯ ವ್ಯವಸ್ಥೆ ಯನ್ನು ಪಡೆದುಕೊಂಡು ಉತ್ತಮ ಕೃಷಿ ಯನ್ನು ಬೆಳೆಯಬಹುದು. ಹಾಗಾಗಿ ಇದೀಗ ‘ಗಂಗಾ ಕಲ್ಯಾಣ ಯೋಜನೆ’(Ganga kalyana scheme)ಯಡಿ, ಮತ್ತು ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಒಂದು ಯೋಜನೆಗೆ ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ಒಂದು ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳ ವಿವರ :
ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು.
ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ
ಕನಿಷ್ಠ 21 ವರ್ಷ ವಯೋಮಿತಿ
ಸಣ್ಣಹಿಳುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್
ಇದಿಷ್ಟು ದಾಖಲೆಗಳನ್ನು ಹೊಂದಿರಬೇಕು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ