Karnataka Freeship Card scheme – 2023 | Free collage Admission for SC & ST Students
ಕರ್ನಾಟಕ ಸರ್ಕಾರ ರಾಜ್ಯದ ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನ ಹೊರತಂದಿದೆ. ಅದರಲ್ಲೂ ವಿಶೇಷವಾಗಿ ಎಸ್‌ಸಿ ಮತ್ತು ಎಸ್ ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಫ್ರೀಶಿಪ್ ಕಾರ್ಡ್ ಗಳನ್ನು ಒದಗಿಸುತ್ತಿದೆ. ಭಾರತ ಸರ್ಕಾರದ ಮಾರ್ಗಸೂಚಿ 2020-21 ರನ್ವಯ Freeship Card ಯೋಜನೆಯಡಿಯಲ್ಲಿ ಎಲ್ಲಾ ಅರ್ಹ ವಿದ್ಯಾರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸದೇ ತಮ್ಮ ಆಯ್ಕೆಯ ಕೋರ್ಸಗಳಿಗೆ ಪ್ರವೇಶಾತಿ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ವಿಳಂಬವಾಗುವ ಏಕೈಕ ಕಾರಣಕ್ಕೆ ತಾವು ಇಚ್ಛಿಸಿದ ಕೋರ್ಸಿಗೆ ಪ್ರವೇಶಾತಿಯನ್ನು ಪಡೆಯದೆ ಇರುವಂತಹ ಪರಿಸ್ಥಿತಿಯನ್ನು ತಪ್ಪಿಸಲು ಈ ಕಾರ್ಡ್ಗಳನ್ನು ವಿತರಿಸುತ್ತಿದೆ (Freeship card ).
ಏನಿದು ಫ್ರೀಶಿಪ್ ಕಾರ್ಡ್ – Freeship Card
ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಜಮಾ ಮಾಡುವಲ್ಲಿ ವಿಳಂಬವನ್ನು ನಿವಾರಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಕಾರ್ಡ್ ಶಿಕ್ಷಣ ಸಂಸ್ಥೆಗಳಿಗೆ ಶುಲ್ಕ ಪಾವತಿಗೆ ಸರ್ಕಾರದ ಗ್ಯಾರಂಟಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಶುಲ್ಕ ಪಾವತಿಸಲು ವಿದ್ಯಾರ್ಥಿಗಳನ್ನು ಒತ್ತಾಯಿಸದಂತೆ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
Freeship Card ವಿತರಿಸುವಾಗ ವಿದ್ಯಾರ್ಥಿಗೆ ಶುಲ್ಕ ಮರು ಪಾವತಿ ಪಡೆದ ಕೂಡಲೇ ಅದನ್ನು ಶಿಕ್ಷಣ ಸಂಸ್ಥೆಗೆ ಪಾವತಿಸಲು ಹಾಗೂ ಈ ಬಗ್ಗೆ ಶಿಕ್ಷಣ ಸಂಸ್ಥೆಗೆ ಮಾಹಿತಿಯನ್ನು ನೀಡಬೇಕೆಂಬ ಷರತ್ತನ್ನು ವಿಧಿಸಬೇಕಾಗಿರುತ್ತದೆ. Freeship Card ನಿಂದಾಗಿ ಅರ್ಹ ವಿದ್ಯಾರ್ಥಿಗೆ ತನ್ನ ಐಚ್ಛಿಕ ಕೋರ್ಸಗಾಗಿ ಯಾವುದೇ ಶೈಕ್ಷಣಿಕ ಸಂಸ್ಥೆಯಲ್ಲಿ ಶುಲ್ಕರಹಿತವಾಗಿ ಷರತ್ತುಬದ್ಧ ಪ್ರವೇಶಾತಿಯನ್ನು ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ.
ಫ್ರೀಶಿಪ್ ಕಾರ್ಡ್ ಅರ್ಹತೆ
ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು, ಪೋಸ್ಟ್ ಮೆಟ್ರಿಕ್ ಓದುತ್ತಿರುವ ವಿದ್ಯಾರ್ಥಿಗಳು ಕರ್ನಾಟಕ ಫ್ರೀಶಿಪ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಎಲ್ಲಾ ಹಿಂದುಳಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಫ್ರೀಶಿಪ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಯಾವುದೇ ಕೋರ್ಸ್ಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗೂ ಪ್ರವೇಶಾತಿಯ ದಿನಾಂಕಕ್ಕೂ ಮೊದಲೇ ರಾಜ್ಯದ ವಿದ್ಯಾರ್ಥಿ ವೇತನ ವಿತರಣಾ ಪೋರ್ಟಲ್ ನಲ್ಲಿ ತನ್ನ ಆಧಾರ್ ಸಂಖ್ಯೆ ಹಾಗೂ ತಾನು ಇಚ್ಛಿಸುವ ಕೋರ್ಸ್ನ ವಿವರಗಳನ್ನು ಸಲ್ಲಿಸಿ Freeship Card ಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ ಹಾಗೂ ಶುಲ್ಕ ಮರುಪಾವತಿ ಪಡೆದ 7 ದಿನಗಳೊಳಗಾಗಿ ತಾನು ಶಿಕ್ಷಣ ಸಂಸ್ಥೆಗೆ ಶುಲ್ಕವನ್ನು ಪಾವತಿಸುವ ಬಗ್ಗೆ ಪ್ರಮಾಣ ಪತ್ರ ನೀಡಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು SSP ಪೋಸ್ಟ್ ಮೆಟ್ರಿಕ್ ಕರ್ನಾಟಕ ಪೋರ್ಟಲ್ ಗೆ ಭೇಟಿ ನೀಡಿ. https://ssp.postmatric.karnataka.gov.in/homepage.aspx
ಅರ್ಜಿ ಸಲ್ಲಿಸುವ ಸಂಪೂರ್ಣ ವಿವರಣೆ ಮತ್ತು ಸ್ಟೆಪ್ಸ್ ಗಳಿಗಾಗಿ ಈ ಕೆಳಗಿನ ವಿಡಿಯೋವನ್ನು ಸಂಪೂರ್ಣವಾಗಿ ನೋಡಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ