ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಿದೆ. ಮಹಿಳೆಯರು ಆಧಾರ ಕಾರ್ಡ್‌ನ್ನು ತೋರಿಸಿ ಉಚಿತವಾಗಿ ರಾಜ್ಯದ ಯಾವುದೇ ಮೂಲೆಗೆ ಉಚಿತವಾಗಿ ಪ್ರಯಾಣಿಸಬಹುದು.ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ.
ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿದರೆ ಸಾಕು ಉಚಿತ ಪ್ರಮಾಣ:
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು “ಶಕ್ತಿ ಯೋಜನೆ”ಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಹಾಜರುಪಡಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ.
ಮಹಿಳಾ ಪ್ರಯಾಣಿಕರು ಮೊಬೈಲ್‌ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದರೂ ಸಹ ಮೊಬೈಲ್‌ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನಾವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿದ್ದವು, ಆದಕಾರಣ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಸರ್ಕಾರವು ಆದೇಶವನ್ನು ನೀಡಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಇನ್ನು ಮುಂದೆ ಬಸ್ಸಿನಲ್ಲಿ ಯಾವುದಾದರೂ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಬಹುದು :
ಸಂಚಾರ ವ್ಯವಸ್ಥಾಪಕರು (ಕಾ), ಕ.ರಾ.ರ.ಸಾ.ನಿಗಮ, ಕೇಂದ್ರ ಕಛೇರಿ, ಬೆಂಗಳೂರು ಅವರು ಇದಕ್ಕೆ ಆದೇಶವನ್ನು ನೀಡಿದ್ದಾರೆ. ಈ ಸಂಬಂಧ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ, ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ.
ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ವರದಿಯನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ಈ ಆದೇಶದ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ