ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್, ಅಕ್ರಮ -ಸಕ್ರಮ, ನಿರಂತರ ಜ್ಯೋತಿ ಯೋಜನೆಯಡಿ ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ….!
ಇಂದು ರೈತರು (Farmer’s) ಬಹಳ ಕಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ಮಳೆ ಇಲ್ಲದೆ ಬೆಳೆಗಳನ್ನು ಬೆಳೆಯಲು ಬಹಳ ಕಷ್ಟ ಪಡುತ್ತಿದ್ದಾರೆ. ಹಾಗೂ ವಾತಾವರಣ ವೈಪರಿತ್ಯವೂ ಇದಕ್ಕೆ ಕಾರಣವಾಗಿದೆ. ಆದರೆ ಇದೀಗ ರೈತರು ಚಿಂತಿಸುವ ಹಾಗಿಲ್ಲ. ಯಾಕೆಂದರೆ
ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು ಇದೀಗ ರೈತರು ಯಾವುದೇ ತೊಂದರೆ ಇಲ್ಲದೆ ತಮ್ಮ ಹೊಲಗದ್ದೆಗಳಲ್ಲಿ ನೀರನ್ನು ಬಳಸಿಕೊಂಡು ಬೆಳೆ ಬೆಳೆಯಬಹುದಾಗಿದೆ.
ಅಕ್ರಮ ಸಕ್ರಮ ಯೋಜನೆ ಅಡಿ ರೈತರ ಪಂಪ್ ಸೆಟ್ (Pump set) ಗಳಿಗೆ ವಿದ್ಯುತ್ ಸಂಪರ್ಕ :
ಹೌದು ಇದೀಗ ಕರ್ನಾಟಕ ಸರ್ಕಾರವು, ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮ(Akrama – sakrama)ದಡಿ ವಿದ್ಯುತ್ ಸಂಪರ್ಕ (Power service) ಕಲ್ಪಿಸಿಕೊಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸುಮಾರು 2 ಲಕ್ಷ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ :
ಇಂಧನ ಸಚಿವ ಕೆ.ಜೆ. ಜಾರ್ಜ್ ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ (Solar park) ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಮಾತನಾಡಿ, ಇನ್ನೂ 2 ಲಕ್ಷ ಪಂಪ್ ಸೆಟ್ ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.
ಕುಸುಮ್ ಬಿ ಮತ್ತು ಸಿ (Kusum B and C) ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ :
ತೋಟದ ಮನೆಗಳಿಗೆ ಹಗಲು ಹೊತ್ತು 3 ಫೇಸ್ ಹಾಗೂ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಕೊಡಲು ಈಗಾಗಲೆ ನಿರ್ಣಯ ಮಾಡಲಾಗಿದ್ದು, ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿಯಡಿ ವಿದ್ಯುತ್ ಪೂರೈಸಲು ಟೆಂಡರ್ ಪ್ರಕ್ರಿಯೆ ನಡೆದಿದ್ದು, ಶೀಘ್ರ ಕಾರ್ಯಾದೇಶ ನೀಡಲಾಗುವುದು. ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಯೋಜನೆಯಿಂದಾಗಿ ರೈತರಿಗೆ ತಮ್ಮ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ದೊರೆಯಲಿದೆ ಎಂದು ಹೇಳಿದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.