ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳು
ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿ ಅಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯಲ್ಲಿ ಅಧ್ಯಯನ ಮಾಡಿರಬೇಕು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.
ವಯೋಮಿತಿ:
ಕನಿಷ್ಠ 19 ವರ್ಷಗಳಿಂದ ಗರಿಷ್ಟ 35 ವರ್ಷದೊಳಗಿನ ಅರ್ಹ ಮಹಿಳೆಯರು ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ದಾಖಲಾತಿಗಳು:
- ಅರ್ಜಿ ನಮೂನೆ (ಆನ್‌ಲೈನ್)
- ಜನನ ಪ್ರಮಾಣ ಪತ್ರ
- ಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪತ್ರ
- ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
- ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ
ಪ್ರಮುಖ ದಿನಾಂಕಗಳು:
- ಬೆಳಗಾವಿ ಗ್ರಾಮೀಣ ವ್ಯಾಪ್ತಿ: ಆಗಸ್ಟ್ 08, 2024 ಕೊನೆಯ ದಿನ
- ಬೆಳಗಾವಿ ಜಿಲ್ಲಾ ವ್ಯಾಪ್ತಿ: ಆಗಸ್ಟ್ 04, 2024 ಕೊನೆಯ ದಿನ
ಅರ್ಜಿಯನ್ನು ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಅರ್ಜಿಯನ್ನು ಸಲ್ಲಿಸಬೇಕು
ಈ ಕೆಳಗೆ ನೀಡಿರುವ ನೇರವಾದ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಬಹುದು,
ಅರ್ಜಿ ಲಿಂಕ್ : https://karnemakaone.kar.nic.in/abcd/
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಈ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೇ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಬ್ಮಿಟ್ ಮಾಡಿದ ನಂತರ ಫಾರ್ಮನ್ನು ಡೌನ್ಲೋಡ್ ಮಾಡಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.