Karnataka Anganawadi Recruitment 2024 Karnataka Apply Online @karnemakaone.kar.nic.in
ರಾಜ್ಯದಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹೌದು ರಾಜ್ಯದ ಅಂಗನವಾಡಿಗಳಲ್ಲಿ 13,593 ಹುದ್ದೆಗಳು ಖಾಲಿಯಿದ್ದು. ಅಂಗನವಾಡಿ ಶಿಕ್ಷಕಿಯರು ಸಹಾಯಕಿಯರ ನೇಮಕಾತಿಗೆ ಅರ್ಹರು ಸೂಕ್ತ ದಾಖಲೆಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳು
ರಾಜ್ಯದ ಅಂಗನವಾಡಿಗಳಲ್ಲಿ 13593 ಅಂಗನವಾಡಿ ಶಿಕ್ಷಕರಿಯರು, ಸಹಾಯಕಿಯರ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: ಕರ್ನಾಟಕ
ಈ ಅಂನವಾಡಿ ಹುದ್ದೆಗಳಿಗೆ ಆಯಾ ಜಿಲ್ಲೆಯವರು, ತಾಲೂಕಿನವರು ಅಂದರೆ ಸ್ಥಳೀಯರು ಆನ್‌ಲೈನ್ ಸೇವಾ ಕೇಂದ್ರದಲ್ಲಿ ಅರ್ಜಿಸಲ್ಲಿಸಬೇಕು. ಬೇರೆ ಬೇರೆ ಜಿಲ್ಲೆ, ತಾಲೂಕಿನವರ ಅರ್ಜಿ ಪರಿಗಣಿಸುವುದಿಲ್ಲ. ನಿಮ್ಮ ವಾಸದ ದೃಢೀಕರಣ, ಡಿಎಆರ್ ನಂಬರ್, ಆಧಾರ್ ಸಹಿತ ಆಯಾ ಗ್ರಾಮದವರು ಕೇಂದ್ರದ ಮೂರು ಕಿಲೋ ಮೀಟರ್ ವ್ಯಾಪ್ತಿಯವರು ಅರ್ಜಿ ಸಲ್ಲಿಸಿದರೆ ಪರಿಗಣಿಸಲಾಗುವುದು ಎಂದು ಸೂಚನೆ ನೀಡಲಾಗಿದೆ.
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು
ಅಂಗನವಾಡಿ ಸಹಾಯಕಿ ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯಲ್ಲಿ ಅಧ್ಯಯನ ಮಾಡಿರಬೇಕು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.
ವಯೋಮಿತಿ:
ಕನಿಷ್ಠ 19 ವರ್ಷಗಳಿಂದ ಗರಿಷ್ಟ 35 ವರ್ಷದೊಳಗಿನ ಅರ್ಹ ಮಹಿಳೆಯರು ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ದಾಖಲಾತಿಗಳು:
- ಅರ್ಜಿ ನಮೂನೆ (ಆನ್‌ಲೈನ್)
- ಜನನ ಪ್ರಮಾಣ ಪತ್ರ
- ಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪತ್ರ
- ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
- ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12-07-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 12-08-2024
ಅರ್ಜಿಯನ್ನು ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ನಂತರ ಅರ್ಜಿಯನ್ನು ಸಲ್ಲಿಸಬೇಕು
ಈ ಕೆಳಗೆ ನೀಡಿರುವ ನೇರವಾದ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಬಹುದು,
ಅರ್ಜಿ ಲಿಂಕ್ : https://karnemakaone.kar.nic.in/abcd/
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಈ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೇ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಬ್ಮಿಟ್ ಮಾಡಿದ ನಂತರ ಫಾರ್ಮನ್ನು ಡೌನ್ಲೋಡ್ ಮಾಡಿಕೊಳ್ಳಿ
ಪ್ರಮುಖ ಲಿಂಕ್’ಗಳು:
ಸೂಚನೆಗಳು: ಓದಿ
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnemakaone.kar.nic.in
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.