Annabhagya: ಪಡಿತರ ಚೀಟಿದಾರರಿಗೆ ಅನ್ನಭಾಗ್ಯದ ಒಟ್ಟು 10 ಕೆಜಿ ಅಕ್ಕಿ ನೀಡಲು ಸರ್ಕಾರ ತೀರ್ಮಾನ..!

IMG 20240822 WA0001

WhatsApp Group Telegram Group
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ.

ಅನ್ನ ಭಾಗ್ಯ ಯೋಜನೆಯು (Anna bhagya scheme) ಕರ್ನಾಟಕ ಸರ್ಕಾರದ ಕಡೆಯಿಂದ ಸಮಾಜದ ಕಡಿಮೆ ಅದೃಷ್ಟವಂತ ವರ್ಗದವರಿಗೆ ಸಹಾಯ ಮಾಡುವ ಒಂದು ಮಹತ್ವದ ಯೋಜನೆಯಾಗಿದೆ. ಕೇಂದ್ರ ಸರ್ಕಾರವು ಬಡವರಿಗಾಗಿ ಅನ್ನ ಭಾಗ್ಯ ಮತ್ತು ಮುಖ್ಯವಾಗಿ ಬಿಪಿಲ್ ಕಾರ್ಡ್ ದಾರರಿಗೆ (BPL Card)  ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ (state government) ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ಸಹಕಾರ :

ಹೌದು, ಸುಮಾರು ಒಂದು ವರ್ಷದ ನಂತರ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವಿನ ಬಿಕ್ಕಟ್ಟು ಬಗೆಹರಿದಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ(central government) ಒಪ್ಪಿಗೆ ನೀಡಿದೆ. ಅದಕ್ಕಾಗಿ ಎಲ್ಲಾ ಬಿಪಿಲ್ ಕಾರ್ಡ್ ದಾರರಿಗೆ ಇದು ಗುಡ್ ನ್ಯೂಸ್ ಎಂದು ಹೇಳಬಹುದು. ಉಚಿತವಾಗಿ ಬಿಪಿಲ್ ಕಾರ್ಡ್(BPL card) ಮೂಲಕ ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಅಡಿಯಲ್ಲಿ ಅಕ್ಕಿ ಪೂರೈಕೆ :

ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಅಡಿಯಲ್ಲಿ ಅಕ್ಕಿಯನ್ನು ಪೂರೈಸಲು ಕೇಂದ್ರವು ಒಪ್ಪಿಗೆ ನೀಡಿದೆ. ಕಳೆದ ವಾರ ದೆಹಲಿಯಲ್ಲಿ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ (K. H Muniyappa) ಮತ್ತು ಜೋಶಿ (Joshi) ನಡುವೆ ನಡೆದ ಸಭೆಯ ನಂತರ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರವು ಆದೇಶ ನೀಡಿದ ತಕ್ಷಣ ಕೇಂದ್ರವು ಅಗತ್ಯ ಪ್ರಮಾಣದ ಅಕ್ಕಿಯನ್ನು ನೀಡಲಾಗುತ್ತದೆ. ಇದೀಗ ಕೇಂದ್ರದಿಂದ ಅಕ್ಕಿ ನೀಡಲು ಒಪ್ಪಿಗೆ ದೊರೆತಿದೆ. ಕಳೆದ ವರ್ಷ ದೇಶಾದ್ಯಂತ ಭೀಕರ ಬರಗಾಲದ ಹಿನ್ನೆಲೆಯಲ್ಲಿ ದಾಸ್ತಾನು ಕೊರತೆ ಆತಂಕದಿಂದಾಗಿ ಕೇಂದ್ರವು ಅಕ್ಕಿಯನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂದು ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ (Congress) ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಆದರೆ, ಕೇಂದ್ರದಿಂದ ಹೆಚ್ಚುವರಿ 5 ಕೆಜಿ ಸಿಗದ ಕಾರಣ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸುವ ಪ್ರಯತ್ನ ನಡೆದಿತ್ತು, ನಂತರದಲ್ಲಿ ಹೆಚ್ಚುವರಿ 5ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ.

ಕರ್ನಾಕಟಕ್ಕೆ  ಅಕ್ಕಿ ಪೂರೈಸಲು  ಅಗತ್ಯವಿದೆ :

ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಮಾಸಿಕ 5 ಕೆಜಿ ಉಚಿತ ಅಕ್ಕಿ ನೀಡುವ ಭರವಸೆ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಪೂರೈಸಲು ಕರ್ನಾಟಕಕ್ಕೆ 2,36,000 ಟನ್ ಅಕ್ಕಿ ಅಗತ್ಯವಿದೆ. ಕರ್ನಾಟಕದ ಅನ್ನ ಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿ ದಾಸ್ತಾನನ್ನು ದೊರೆಯುತ್ತದೆ. ಮತ್ತು ರಾಜ್ಯ ಸರ್ಕಾರವು ಆದೇಶವನ್ನು ನೀಡಿದರೆ ಅದನ್ನು ಪೂರೈಸಲು ಎಲ್ಲಾ ಸೌಲಭ್ಯವು ಸಿದ್ಧವಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!