ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಅನ್ನ ಭಾಗ್ಯದ ಹಣ ಬಿಡುಗಡೆಯಾಗುವ ಕುರಿತು ಮಾಹಿತಿ ನೀಡಲಾಗುತ್ತದೆ. ಅನ್ನಭಾಗ್ಯ ಯೋಜನೆಯಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.ಡಿ ಬಿ ಟಿ ಮೂಲಕ ಅನ್ನಭಾಗ್ಯ ಗೃಹಲಕ್ಷ್ಮಿ ಅಥವಾ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ವಿಧಾನವನ್ನು ನಿಮಗೆ ತಿಳಿಸಿಕೊಡಲಾಗುತ್ತದೆ, ಹೌದು, ಬಹಳಷ್ಟು ಜನ ಆಹಾರ ಮತ್ತು ಸರಬರಾಜು ಇಲಾಖೆಯ ವೆಬ್ಸೈಟ್ ಮೂಲಕ DBT ಸ್ಟೇಟಸ್ ಅನ್ನು ಚೆಕ್ ಮಾಡಲು ಪ್ರಯತ್ನಿಸುತ್ತಿರುವ ಕಾರಣ ವೆಬ್ ಸೈಟ್ ಸರ್ವರ್ ಸಮಸ್ಯೆಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ನೀವು ಈ ಕೆಳಗೆ ಕೊಡಲಾದ ವಿಧಾನದ ಮೂಲಕ ನಿಮ್ಮ ಅನ್ನ ಭಾಗ್ಯ ಯೋಜನೆಯ ಡಿ ಬಿ ಟಿ ನೇರ ನಗದು ವರ್ಗಾವಣೆ ಚೆಕ್ ಮಾಡಬಹುದು. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ:
ಅನ್ನಭಾಗ್ಯ ಯೋಜನೆ (Annabhagya Scheme) ಅಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಅಂತ ಆಹಾರ ಸಚಿವ ಮುನಿಯಪ್ಪ (KH Muniyappa) ತಿಳಿಸಿದ್ದಾರೆ.
ರಾಜ್ಯದಲ್ಲಿ 1.28 ಕೋಟಿ ಪಡಿತರ ಚೀಟಿ (Ration Card) ಕುಟುಂಬಗಳಲ್ಲಿ 4.42. ಕೋಟಿ ಫಲಾನುಭವಿಗಳು ಇದ್ದಾರೆ. ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಅಂತ ಮಾಹಿತಿ ನೀಡಿದರು.
ಈ ಜನರಿಗೆ ಹಣ ಸಂದಾಯವಾಗಿಲ್ಲ :
28 ಲಕ್ಷ ಕುಟುಂಬಗಳಲ್ಲಿ ಕಳೆದ 3 ತಿಂಗಳಲ್ಲಿ ಒಂದೂ ತಿಂಗಳು ಪಡಿತರ ಪಡೆದಿಲ್ಲ. 5,32,349 ಫಲಾನುಭವಿಗಳಿ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರು ಇದ್ದಾರೆ. 3,40,425 ಫಲಾನುಭವಿಗಳಿಗೆ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇಲ್ಲ. 19,27,225 ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಆಗಿಲ್ಲ ಮತ್ತು ಅನರ್ಹ ಪಡಿತರ ಚೀಟಿ ಆಗಿವೆ. ಇವರಿಗೆ ಹಣ ಖಾತೆಗೆ ಹಾಕಿಲ್ಲ ಅಂತ ಮಾಹಿತಿ ನೀಡಿದರು.
ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
ಹೊಸ ಪಡಿತರ ಚೀಟಿಗೆ ಜುಲೈ ಅಂತ್ಯಕ್ಕೆ 2,95,986 ಅರ್ಜಿ ಬಂದಿವೆ. ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಕಾರ್ಡ್ ನೀಡುವ ಪ್ರಕ್ರಿಯೆ ನಿಂತಿತ್ತು. ಈಗ ಫಲಾನುಭವಿಗಳ ಮಾಹಿತಿಯನ್ನ ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆ ಅನುಮತಿ ಪಡೆದು ಕಾರ್ಡ್ ವಿವರಣೆ ಮಾಡ್ತೀವಿ ಅಂತ ತಿಳಿಸಿದರು. ಬ್ಯಾಂಕ್ ಅಕೌಂಟ್ ಇಲ್ಲದ 28 ಲಕ್ಷ ಕುಟುಂಬಗಳಿಗೆ ಬ್ಯಾಂಕ್ ಖಾತೆ ಮಾಡಿಸಿದ ಬಳಿಕವೇ ಹಣ ಹಾಕೋದಾಗಿ ಸಚಿವರು ತಿಳಿಸಿದರು.
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಹಣ ಬಂದ ತಕ್ಷಣ ಮೆಸೇಜ್ ಕೂಡ ಬರಲಿದೆ :
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರ ಕುಟುಂಬದ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್ ಕಾರ್ಡ್‌ಗಳ 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸ ಬೇಕಿದೆ. ಅದರಂತೆ ಎಂದಿನಂತೆ ತಲಾ ಐದು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಎಲ್ಲಾ ಹಂತಗಳಲ್ಲಿಯೂ ಪ್ರತಿ ಜಿಲ್ಲೆಗೆ ಅನ್ನ ಭಾಗ್ಯದ ಹಣವನ್ನು ಜಮಾ ಮಾಡಲಾಗುತ್ತದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ