ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯದ ಹಣ ಬಿಡುಗಡೆಯಾಗುವ ಕುರಿತು ಮಾಹಿತಿ ನೀಡಲಾಗುತ್ತದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನ ಭಾಗ್ಯದ (Anna Bhagya) ಹೆಚ್ಚುವರಿ 5 ಕೆಜಿಯ ಬದಲಾಗಿ 170 ರೂಪಾಯಿ ಹಣ ನೀಡುವ (Cash Transfer) ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೂ ಹಣ ಸಿಕ್ಕಿಲ್ಲ. ಕೇವಲ 19 ಜಿಲ್ಲೆಯ ಫಲಾನುಭವಿಗಳಿಗೆ ಮಾತ್ರ ಅನ್ನಭಾಗ್ಯದ ಹಣ ಜಮೆಯಾಗಿದೆ.
ಕೊಡಗು, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ಉಡುಪಿ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗಳ ಕಾರ್ಡ್ ದಾರರಿಗೂ ಹಣ ಜಮಾಗೆ ದತ್ತಾಂಶವನ್ನು ಎನ್‌ಐಸಿಗೆ ಕಳುಹಿಸಲಾಗಿದೆ.ಇವತ್ತು ಈ ಮೇಲಿನ ಎಲ್ಲಾ ಜಿಲ್ಲೆಯವರೆಗೆ ಹಣ ತಲುಪುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಮೈಸೂರು, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಬಾಗಲಕೋಟೆ ಸೇರಿದಂತೆ ಒಟ್ಟು 20 ಲಕ್ಷ ಕಾರ್ಡ್ ಹೊಂದಿರುವ 69 ಲಕ್ಷ ಫಲಾನುಭವಿಗಳ ಖಾತೆಗೆ 115 ಕೋಟಿ ರೂ ವರ್ಗಾವಣೆಯಾಗಿತ್ತು.
12 ಜಿಲ್ಲೆಗಳ ಫಲಾನುಭವಿಗಳಿಗೆ ಇನ್ನೂ ತಲುಪಿಲ್ಲ ಅನ್ನ ಭಾಗ್ಯದ ಹಣ
ಉಳಿದ 12 ಜಿಲ್ಲೆಗಳಿಗೆ ಹಣ ತಲುಪಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಆಧಾರ್ ಕಾರ್ಡ್, ಅಕೌಂಟ್ ಲಿಂಕ್ ಆಗದೇ ಇರುವುದು ಒಂದು ಸಮಸ್ಯೆಯಾದರೆ ಮತ್ತೊಂದು ಕಡೆ ಒಂದು ಫೈಲ್‍ನಲ್ಲಿ 20 ಸಾವಿರ ಕುಟುಂಬಗಳಿಗೆ ಮಾತ್ರ ಹಣ ಹಾಕಲು ಸಾಧ್ಯವಾಗುತ್ತಿದೆ. ಹಂತ ಹಂತವಾಗಿ ಹಣ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. 12 ಜಿಲ್ಲೆಗಳಿಗೆ ಹಣ ತಲುಪಲು 8 ರಿಂದ 12 ದಿನ ಬೇಕಾಗಬಹುದು ಎಂದು ಹೇಳಲಾಗುತ್ತಿದೆ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಎರಡನೇ ಹಂತದಲ್ಲಿ ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೊಪ್ಪಳ ಜಿಲ್ಲೆಗಳ 13 ಲಕ್ಷ ಕಾರ್ಡ್ ಹೊಂದಿರುವ 49 ಲಕ್ಷ ಫಲಾನುಭವಿಗಳ ಖಾತೆಗೆ 80 ಕೋಟಿ ರೂ ಹಣ ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಈ ಬಳಿಕ ಮುಂದಿನ ನಾಲ್ಕು ದಿನಗಳಲ್ಲಿ ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಗದಗ, ವಿಜಯಪುರ, ಬಳ್ಳಾರಿ, ಬೀದರ್, ಕಲಬುರ್ಗಿ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳ ಪಡಿತರ ಚೀಟಿದಾರರ ಖಾತೆಗೆ ಹಣ ಜಮೆ ಆಗಲಿದೆ.
ಹಣ ಜಮೆಯಾಗದ ಜಿಲ್ಲೆಗಳು:
ಚಾಮರಾಜನಗರ, ಮಂಡ್ಯ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಹಾಸನ, ವಿಜಯಪುರ, ಹಾವೇರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ.
ನಿಮ್ಮ ಊರಿನ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವ ಡೈರೆಕ್ಟ ಲಿಂಕ್ ಇಲ್ಲಿದೆ
ಪ್ರತಿ ಕೆಜಿಗೆ ₹34/- ರೂ. ನೀಡಲು ನಿರ್ಧರಿಸಿದೆ
ಪ್ರತಿ ಕೆಜಿಗೆ ₹34/- ರೂ ಗಳಂತೆ 5kg ಗೆ ( ಒಬ್ಬರಿಗೆ ) | ₹170/- | ಕೊಡುತ್ತದೆ |
ಇಬ್ಬರಿಗೆ | ₹340/- | ಕೊಡುತ್ತದೆ |
ಮೂವರಿಗೆ | ₹510/- | ಕೊಡುತ್ತದೆ |
ನಾಲ್ವರಿಗೆ | ₹680/- | ಕೊಡುತ್ತದೆ |
ಐದು ಮಂದಿಗೆ | ₹850/- | ಕೊಡುತ್ತದೆ |
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಅನ್ನಭಾಗ್ಯದ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿರುವ ಸ್ಟೇಟಸ್ ಅನ್ನು ಹೀಗೆ ಚೆಕ್ ಮಾಡಿ:
ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ನೋಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್ 👇👇👇👇
ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ