ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಸಿಗುವ 5 kg ಅಕ್ಕಿಯ ಬದಲು ಬರುವ 170/- ರೂ ಗಳನ್ನು ನಿಮ್ಮ ಬ್ಯಾಂಕ್ ಗೆ ಜಮಾ ಆಗಬೇಕೆಂದರೆ ಏನು ಮಾಡಬೇಕು ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ ರೂ.34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ. ಆದರೆ ಇ-ಕೆವೈಸಿ ಮಾಡಿಸದಿದ್ದರೆ, ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆ ಸ್ಥಗಿತಗೊಳ್ಳಲಿದೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಅನ್ನ ಭಾಗ್ಯದ (Anna Bhagya) ಹೆಚ್ಚುವರಿ 5 ಕೆಜಿಯ ಬದಲಾಗಿ 170 ರೂಪಾಯಿ ಹಣ ನೀಡುವ (Cash Transfer) ಯೋಜನೆಗೆ ಚಾಲನೆ ಸಿಕ್ಕಿ 1 ವಾರ ಕಳೆದರೂ 12 ಜಿಲ್ಲೆಗಳ ಫಲಾನುಭವಿಗಳಿಗೆ ಈವರೆಗೂ ಹಣ ಸಿಕ್ಕಿಲ್ಲ. ಕೇವಲ 19 ಜಿಲ್ಲೆಯ ಫಲಾನುಭವಿಗಳಿಗೆ ಮಾತ್ರ ಅನ್ನಭಾಗ್ಯದ ಹಣ ಜಮೆಯಾಗಿದೆ.
ಅಂತೋದಯಾ ಕಾರ್ಡ್ (AAY) ಇದ್ದವರಿಗೆ ಶಾಕ್
ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಷರತ್ತು ವಿಧಿಸಿದೆ. ಅಂತ್ಯೋದಯ ಕಾರ್ಡ್ ಹೊಂದಿದ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಜನರಿದ್ದರೆ ಅಕ್ಕಿಯ ಬದಲಾಗಿ ಹಣ ಸಿಗುವುದಿಲ್ಲ. ಅಂತ್ಯೋದಯ ಕಾರ್ಡ್‌ಗೆ ಈಗ 35ಕೆಜಿ ಅಕ್ಕಿ ನೀಡಲಾಗ್ತಿದೆ. ಆದರೆ, ಮೂವರಿಗೆ 35 ಕೆಜಿ ಅಕ್ಕಿ ಸಾಕು ಅನ್ನೋದು ಸರ್ಕಾರದ ಲೆಕ್ಕವಾಗಿದೆ. ಅಂತ್ಯೋದಯ ಕಾರ್ಡ್ನಲ್ಲಿ 4 ಜನರಿದ್ರೆ 35 ಕೆಜಿ ಅಕ್ಕಿ ಜತೆ 170 ರೂ. ಹಣ ಲಭ್ಯವಾಗುತ್ತದೆ. ಆದರೆ, ಬಿಪಿಎಲ್ ಕಾರ್ಡ್‌ದಾರರಿಗೆ ಈ ನಿಯಮ ಅನ್ವಯಿಸಲ್ಲ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಅಂತೋದಯ ಕಾರ್ಡ ಹೊಂದಿದವರಿಗೆ ಈಗ 35 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಆದ್ದರಿಂದ ಮೂವರು ಅಥವಾ ಅದಕ್ಕಿಂತ ಕಡಿಮೆ ಜನರಿದ್ದರೆ ಅಕ್ಕಿಯ ಬದಲಾಗಿ ಹಣ ಕೊಡುವುದಿಲ್ಲ. ಜೊತೆಗೆ, ಅಂತ್ಯೋದಯ ಕಾರ್ಡ್ನಲ್ಲಿ 4 ಜನರಿದ್ರೆ 35 ಕೆಜಿ ಅಕ್ಕಿ ಜೊತೆಗೆ 170 ರೂ. ಹಣ ಕೊಡಲಾಗುತ್ತದೆ. 5 ಜನರಿದ್ದರೆ 35 ಕೆಜಿ ಅಕ್ಕಿ ಜೊತೆಗೆ 510 ರೂ., 6 ಜನರಿದ್ದರೆ 850 ರೂ. ಹಣವನ್ನು ಪಡಿತರ ಚೀಟಿಯ ಕುಟುಂಬದ ಯಜಮಾನರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಆದರೆ, ಬಿಪಿಎಲ್ ಕಾರ್ಡ್‌ದಾರರಿಗೆ ತಲಾ 5 ಕೆ.ಜಿ. ಅಕ್ಕಿಯ ಜೊತೆಗೆ ತಲಾ ಸದಸ್ಯರಿಗೂ 170 ರೂ. ಹಣವನ್ನು ಹಂಚಿಕೆ ಮಾಡಲಾಗುತ್ತದೆ.
ಬಿಪಿಎಲ್ ಕಾರ್ಡ್ ಹೊಂದಿದ್ದರೆ ಗಮನಿಸಿ
ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಹಕರು ಕಳೆದ ಮೂರು ತಿಂಗಳಿನಿಂದ ನೀವು ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯನ್ನು ಪಡೆದುಕೊಳ್ಳದಿದ್ದರೂ ಅಂತಃ ಕುಟುಂಬಗಳಿಗೆ ಅಕ್ಕಿಯ ಬದಲಾಗಿ ಹಣವನ್ನು ವಿತರಣೆ ಮಾಡುವುದಿಲ್ಲ.
ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲು ಕೆಳಗಿನ ವಿಷಯಗಳನ್ನು ಕಡ್ಡಾಯವಾಗಿ ಮಾಡಬೇಕು:
ಮೊದಲನೇಯದಾಗಿ, ನಿಮ್ಮ ಪಡೆತರ ಚೀಟಿ ( ರೇಷನ್ ಕಾರ್ಡ್) ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೇ ಅನ್ನುವುದನ್ನು ಪರಿಶೀಲಿಸಿ, ಇಲ್ಲವಾದಲ್ಲಿ ಶೀಘ್ರದಲ್ಲೆ ನಿಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಿ.
ಎರಡೇನೇಯದಾಗಿ, ರೇಷನ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಅಕೌಂಟ್ ನಿಮ್ಮ ಆಧಾರ್ ಕಾರ್ಡ್ ಜೊತೆಗೆ ಸೀಡಿಂಗ್ ಆಗಿಬೇಕು, ಅಂದರೆ NPC Mapping ಆಗಿರ್ಬೇಕು ನಿಮ್ಮ ಬ್ಯಾಂಕ್ ಅಕೌಂಟ್ ಸೀಡಿಂಗ್ ಮಾಡಬೇಕಾಗುತ್ತದೆ. ಏಕೆಂದರೆ ಸರ್ಕಾರವು ಡಿಬಿಟಿ ಮುಖಾಂತರ ಹಣವನ್ನು ಜಮಾಯಿಸುತ್ತದೆ, ಹಾಗಾಗಿ ಪಡೆತದಾರರ ಬ್ಯಾಂಕ್ ಅಕೌಂಟ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಬೇಕಾಗುತ್ತದೆ ಮತ್ತು NPC ಸರ್ವರ್ ಗೆ Mapping ಆಗಬೇಕಾಗುತ್ತದೆ.
ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ, ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.
ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರು ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವ ಮತ್ತ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿರುವ ಫಲಾನುಭವಿ ಕುಟುಂಬಗಳ ಪಟ್ಟಿಗಳು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುತ್ತದೆ.
ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.ಜುಲೈ ತಿಂಗಳ 20 ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕುತ್ತದೆ.
ನಿಮ್ಮ ಊರಿನ ಫಲಾನುಭವಿಗಳ ಸಂಪೂರ್ಣ
ಹಂತ 1: ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಹಂತ 2: ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಅನ್ನಭಾಗ್ಯ ಯೋಜನೆಯ ಹಣ ಪಡೆಯಲು 3 ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು?
- ಪಡಿತರ ಚೀಟಿಯಲ್ಲಿ ಇರುವ ಮುಕ್ಯಸ್ತನ ಹೆಸರಲ್ಲಿ ಒಂದು ಅಕೌಂಟ್ ಇರಬೇಕು
- ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು
- ನಿಮ್ಮ ಅಕೌಂಟ್ ಗೆ ಆಧಾರ್ ಕಾರ್ಡ್ ನ್ನೂ ಲಿಂಕ್ ಮಾಡಿರಬೇಕು ( NPCI map ಆಗಿರಬೇಕು)
ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯ ಎಂದು ತಿಳಿಯುವ ಲಿಂಕ್👇👇👇👇
ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ 👇👇👇👇
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ