ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಅನ್ನ ಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿ ಬದಲಾಗಿ ಹಣ ವಿತರಿಸುತ್ತಿರುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ, ಹೌದು ಮಧ್ಯವರ್ತಿಗಳ ಹಾವಳಿ ಇಲ್ಲದೆ ನೇರವಾಗಿ ನಮ್ಮ ಬ್ಯಾಂಕ್ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ನೇರವಾಗಿ ಹೇಗೆ ಹಾಕುತ್ತಾರೆ ಮತ್ತು ಈ ಹಣ ನಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗಲು ನಾವು ಕಡ್ಡಾಯವಾಗಿ ಯಾವ ಕೆಲಸವನ್ನು ಮಾಡಬೇಕು ಎನ್ನುವುದನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿಗೆ ಕೌಂಟ್ಡೌನ್ ಶುರುವಾಗಿದೆ. ಜೂನ್ 12 ರಂದು ಶಕ್ತಿ ಯೋಜನೆ ಜಾರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೀಗ ಮತ್ತೆರಡು ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಜ್ಯೋತಿ ನಾಳೆಯಿಂದ ಜಾರಿಗೆ ಬರಲಿದೆ. 5 ಕೆಜಿ ಅಕ್ಕಿ ಜತೆ ಜನರು ಖಾತೆಗೆ ಹಣ ಜಮೆ ಬಗ್ಗೆ ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ಅನ್ನ ಭಾಗ್ಯ ಯೋಜನೆ ಹಣ ವರ್ಗಾವಣೆ ಮಾಹಿತಿ
ಕರ್ನಾಟಕದಲ್ಲಿ ನಾಳೆಯಿಂದ ಅನ್ನಭಾಗ್ಯ ಯೋಜನೆ (Anna Bhagya Scheme) ಜಾರಿಯಾಗಲಿದೆ. 5 ಕೆಜಿ ಅಕ್ಕಿ (Rice) ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ(Money) ನೀಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ(KH Muniyappa) ಮಾಹಿತಿ ನೀಡಿದ್ದಾರೆ. 5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್ ಅಕೌಂಟ್ ಇದ್ದಾವೆ. ಅಕೌಂಟ್ ಇಲ್ಲದವರು ಮಾಡಿಸಬೇಕು.
ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಕೆಜಿಗೆ 34 ರೂಪಾಯಿಯಂತೆ ತಲಾ 170ಹಣ ಪಾವತಿಸಬೇಕಾಗಿದೆ. ಪಡಿತರ ಚೀಟಿಯಲ್ಲಿ ಇಬ್ಬರಿದ್ದರೆ ಅವರು 340 ರೂಪಾಯಿ ಸಿಗಲಿದೆ. ಒಂದು ವೇಳೆ ಕುಟುಂಬದಲ್ಲಿ ಐವರು ಇದ್ದರೇ ಮಾಸಿಕ 850 ರೂಪಾಯಿ ನೀಡಲಾಗುತ್ತದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಫಲಾನುಭವಿಗಳ ಖಾತೆಗೆ ಹಣ ಹೇಗೆ ಜಮಾ ಆಗುತ್ತದೆ?
ರಾಜ್ಯದಲ್ಲಿ ಒಟ್ಟು 1 ಕೋಟಿ 28 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದ್ದು, 4 ಕೋಟಿ 42 ಲಕ್ಷ ಫಲಾನುಭವಿಗಳಿದ್ದಾರೆ. 1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. ಇನ್ನುಳಿದ ಬಾಕಿ ಉಳಿದಿರುವ 6 ಲಕ್ಷ ಕಾರ್ಡ್‌ಗಳು ಆಧಾರ್ ಲಿಂಕ್ ಆಗಬೇಕು. ಆಧಾರ್ ಲಿಂಕ್ ಆಗುತ್ತಿದ್ದಂತೆಯೇ ಬ್ಯಾಂಕ್ ಅಕೌಂಟ್ ಕೂಡ ಕಾರ್ಡ್ ಗಳಿಗೆ ಅಪ್ಡೇಟ್ ಆಗುತ್ತದೆ.
ಫಲಾನುಭವಿಗಳ ಖಾತೆಗೆ ನೇರವಾಗಿ DBT ಮೂಲಕ ಹಣ ವರ್ಗಾವಣೆ ಆಗುತ್ತದೆ. ಹಾಗಾಗಿ ಬಿಪಿಎಲ್ ಮತ್ತು ಅಂತೋದಯ ಕಾರ್ಡ ಹೊಂದಿರುವ ಪ್ರತಿಯೊಬ್ಬರು ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡನ್ನು ನೀವು ಮ್ಯಾಪಿಂಗ್ ಮಾಡಬೇಕು. ಮತ್ತು ನಿಮ್ಮ ರೇಷನ್ ಕಾರ್ಡ್ ಗೆ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡನ್ನು ಲಿಂಕ್ ಮಾಡಲೇಬೇಕು. ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಮ್ಯಾಪಿಂಗ್ ಆಗಿರುವ ಸ್ಟೇಟಸ್ ಹೇಗೆ ಚೆಕ್ ಮಾಡುವುದು ಎಂದು ತಿಳಿದುಕೊಳ್ಳಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಆಧಾರ್ ಕಾರ್ಡ್ & ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯ – ಇಲ್ಲಿದೆ ಚೆಕ್ ಮಾಡುವ ವಿಧಾನ
ನಂತರ ನಿಮ್ಮ ರೇಷನ್ ಕಾರ್ಡಿಗೆ ನಿಮ್ಮ ಆಧಾರ್ ಕಾರ್ಡನ್ನ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಾಗಾಗಿ ಇದುವರೆಗೂ ನಿಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಈಗಲೇ ಲಿಂಕ್ ಮಾಡಿ ಇದರ ಸ್ಟೇಟಸ್ ಅನ್ನು ಚೆಕ್ ಮಾಡಲು ಕೆಳಗಿನ ವಿಡಿಯೋವನ್ನು ನೀವು ವೀಕ್ಷಣೆ ಮಾಡಿ ತಿಳಿದುಕೊಳ್ಳಬಹುದು
ಆಧಾರ್ ಕಾರ್ಡ್ ನೊಂದಿಗೆ ಡಿಬಿಟಿ ಲಿಂಕ್ ಮಾಡಿ :
ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.
ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:
ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper
ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.
ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.
ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
You show village list of Anna bhaghya