ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರಧಾನ್ಯ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಸ್ಥಗಿತಗೊಳಿಸಲಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ಹೊಸ ಮಾರ್ಗ ಸೊಚಿಯನ್ನು ಬಿಡುಗಡೆ ಮಾಡಿದೆ. ಆ ಮಾರ್ಗ ಸೂಚಿಗಳು ಯಾವುವು?, ಕೆವೈಸಿ ಮಾಡದಿದ್ದರೆ ಹಣ ಮತ್ತು ಆಹಾರ ಧಾನ್ಯಗಳು ಏಕೆ ದೊರೆಯುವುದಿಲ್ಲ ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅನ್ನಭಾಗ್ಯ ಯೋಜನೆಯ(annabhagya scheme) ಹಣ :
ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಮಾಸಿಕ ತಲಾ 10 ಕೆಜಿ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿತ್ತು. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. ಹೆಚ್ಚುವರಿ 5 ಕೆಜಿ ಅಕ್ಕಿ ಸಿಗದಿರುವ ಕಾರಣಕ್ಕೆ ಸರ್ಕಾರ ಅಕ್ಕಿ ದಾಸ್ತಾನು ಆಗುವವರೆಗೂ 5 ಕೆಜಿ ಬದಲು ಹಣವನ್ನು ನೀಡಲು ಮುಂದಾಗಿದೆ. ಪ್ರತಿ ಕೆಜಿಗೆ 34 ರೂ.ನಂತೆ ಒಬ್ಬರಿಗೆ 170 ರೂ. ನೀಡಲು ಸರ್ಕಾರ ಮುಂದಾಗಿದ್ದು, ಸದಸ್ಯರು ಹೆಚ್ಚಾದಂತೆ ಅದೇ ಅನುಪಾತದಡಿ ದುಡ್ಡು ಕೂಡ ಹೆಚ್ಚಳವಾಗುತ್ತಾ ಹೋಗುತ್ತದೆ.
ಅನ್ನ ಭಾಗ್ಯ ಯೋಜನೆಯ ಮಾರ್ಗಸೂಚಿಗಳು :
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಮಾರ್ಗಸೂಚಿಗಳು ಹೊರಬಿದ್ದಿವೆ. ಈ ಮಾರ್ಗ ಸೂಚಿಗಳು ಕಡ್ಡಾಯವಾಗಿದ್ದು ಎಲ್ಲಾ ಪಡಿತರ ಚೀಟಿಯನ್ನು ಹೊಂದಿದವರು ಅನುಸರಿಸಬೇಕಾಗಿದೆ. ಆಹಾರ ಧಾನ್ಯಗಳನ್ನು ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರು ಇದ್ದರೆ ಆ ಕುಟುಂಬಗಳಿಗೆ ಹಣವನ್ನು ನೀಡದಿರಲು ಸರ್ಕಾರ ನಿರ್ಧರಿಸಿದೆ. ಕುಟುಂಬದ ಮುಖ್ಯಸ್ಥರು ಯಾರು ಎಂಬ ಸಮಸ್ಯೆ ಬಗೆಹರಿಯದಿದ್ದರೆ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ಹಣ ಕೊಡದಿರಲು ಸರ್ಕಾರ ತೀರ್ಮಾನಿಸಿದೆ.
ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಬರಿ ಅಕ್ಕಿ ಅಷ್ಟೇ, ಹಣ ಏಕೆ ಇಲ್ಲ :
ಅಂತ್ಯೋದಯ ಕಾರ್ಡು ಹೊಂದಿರುವ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಕ್ಕೆ ನಗದು ವರ್ಗಾವಣೆ ಸೌಲಭ್ಯ ಸಿಗುವುದಿಲ್ಲ ಎಂದು ಸರ್ಕಾರ ಹೇಳಿದೆ. ಏಕೆಂದರೆ, ಈಗಾಗಲೇ ಅಂತ್ಯೋದಯ ಕಾರ್ಡ್‌ನಲ್ಲಿ ಮೂರು ಅಥವಾ ಮೂರಕ್ಕಿಂತ ಕಡಿಮೆ ಜನ ಹೊಂದಿರುವ ಕುಟುಂಬಗಳು 30 ಕೆಜಿ ಅಕ್ಕಿ ಪಡೆಯುತ್ತಿರುವುದರಿಂದ ಅವರಿಗೆ ಹಣ ನೀಡದಿರಲು ನಿರ್ಧರಿಸಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಆದರೆ ಮೂರಕ್ಕಿಂತ ಹೆಚ್ಚು ಜನ ಇರುವವರಿಗೆ ಇದು ಅನ್ವಯಿಸುವುದಿಲ್ಲ. ಮೂರಕ್ಕಿಂತ ಹೆಚ್ಚಿನ ಸಂಖ್ಯೆಯ ಸದಸ್ಯರಿದ್ದರೆ ಮಾತ್ರ ಹೆಚ್ಚುವರಿ ಸದಸ್ಯರಿಗೆ ಹಣ ಸಿಗಲಿದೆ. 4 ಸದಸ್ಯರು ಇರುವ ಕುಟುಂಬಕ್ಕೆ 170 ರೂ., ಐವರು ಸದಸ್ಯರಿದ್ದರೆ 340 ರೂ., ಆರು ಸದಸ್ಯರಿದ್ದರೆ 510 ರೂ.ಗಳನ್ನು ನೀಡಲಾಗುವುದು. ಹೆಚ್ಚಿನ ಸದಸ್ಯರು ಇದ್ದಲ್ಲಿ ಇದೇ ಅನುಪಾತದಲ್ಲಿ ದುಡ್ಡನ್ನು ನೀಡಲಾಗುತ್ತದೆ. ಇನ್ನು, ಕಳೆದ ಮೂರು ತಿಂಗಳುಗಳಲ್ಲಿ ಪಡಿತರ ಸೌಲಭ್ಯ ಪಡೆದಿದ್ದರೆ ಮಾತ್ರ ಅನ್ನಭಾಗ್ಯ ನಗದು ವರ್ಗಾವಣೆಗೆ ಕುಟುಂಬ ಅರ್ಹವಾಗಲಿದೆ.
ಪಡಿತರ ಚೀಟಿಯು, ಕುಟುಂಬದ ಮುಖ್ಯಸ್ಥರನ್ನು ಹೊಂದಿಲ್ಲದಿದ್ದರೆ ಅಥವಾ ಒಂದಕ್ಕಿಂತ ಹೆಚ್ಚಿನ ಮುಖ್ಯಸ್ಥರಿದ್ದರೆ ಅವರು ಆದಷ್ಟು ಬೇಗ ಪಡಿತರ ಚೀಟಿಯಲ್ಲಿ ಒಬ್ಬ ಮುಖ್ಯಸ್ಥರನ್ನು ಹೊಂದಿರಬೇಕು. ಮತ್ತು ಮಹಿಳಾ ಸದಸ್ಯರಿರುವ ಪಡಿತರ ಚೀಟಿಯನಲ್ಲಿ ಮುಖ್ಯಸ್ಥರು ಮಹಿಳೆಯಾಗಿರಬೇಕು. ಪ್ರಮುಖವಾಗಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಬೇಕು. ಹೀಗಿದ್ದರೆ ಇವರಿಗೆ ಅನ್ನ ಭಾಗ್ಯದ ಯೋಜನೆ ದೊರೆಯಲಿದೆ.
ಇ-ಕೆವೈಸಿಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ :
ತಮ್ಮ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಚೀಟಿ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ದುಡ್ಡು ಸಿಗಲಿದೆ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ. ಬ್ಯಾಂಕ್ ಖಾತೆಯ ಮಾಹಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲೇ ನೀಡಬೇಕು ಎಂದು ಸರ್ಕಾರ ತಿಳಿಸಿದೆ. ಆಧಾರ್ ಲಿಂಕ್ ಆಗದೇ ಇರುವ, ಸಕ್ರೀಯ ಬ್ಯಾಂಕ್‌ಖಾತೆ ಇಲ್ಲದೇ ಇರುವ ಮತ್ತು ಬ್ಯಾಂಕ್ ಇ-ಕೆವೈಸಿ ಆಗದೇ ಇರುವ ಅಂತ್ಯೋದಯ ಅನ್ನಭಾಗ್ಯ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಪಿಎಚ್‌ಎಚ್) ಫಲಾನುಭವಿಗಳು, ಅವುಗಳನ್ನು ಸರಿಪಡಿಸಿಕೊಳ್ಳಲು ಆಹಾರ ಇಲಾಖೆಯ ಉಪ ನಿರ್ದೇಶಕರು ಸೂಚಿಸಿದ್ದಾರೆ. ಇ-ಕೆವೈಸಿಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎನ್ನಲಾಗಿದೆ.
ಸರ್ಕಾರದಿಂದ ಹೊರಡಿಸಿರುವ ಈ ಮಾರ್ಗಸೂಚಿಗಳನ್ನು ಎಲ್ಲರೂ ತಿಳಿದುಕೊಳ್ಳುವುದು ಅವಶ್ಯಕವಾಗಿದೆ.
ಆನ್‌ಲೈನ್‌ನಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
ಆನ್ಲೈನ್ ನಲ್ಲಿ ಆಧಾರ್- ರೇಷನ್ ಕಾರ್ಡ್ ಲಿಂಕ್ ಮಾಡುವ ವಿಧಾನ :
ಹಂತ 1: ಮೊದಲಿಗೆ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಹಂತ 2: ನಂತರ ಪುಟ ತೆರೆದ ಮೇಲೆ ಇ-ಸೇವೆಗಳು ಎಂಬ ಆಯ್ಕೆಯನ್ನು ಮಾಡಿ ನಂತರ ಇ -ಪಡಿತರ ಚೀಟಿಯಲ್ಲಿ ಯು ಐ ಡಿ ಲಿಂಕ್ ಮಾಡಿ ಎಂಬ ಆಯ್ಕೆಯನ್ನು ಮಾಡಿ.
ಹಂತ 3: ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು, UID ಲಿಂಕಿಂಗ್ ಫಾರ್ RC ಮೆಂಬರ್ಸ್ ಎಂಬ ಆಯ್ಕೆಯನ್ನು ಮಾಡಿಕೊಳ್ಳಿ.
ಹಂತ 4: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ನಮೂದಿಸಿ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಹಂತ 5: ಮುಂದುವರೆದು ನೀವು ನೋಂದಾಯಿಸಿದ ಮೊಬೈಲ್ ನಂಬರಿಗೆ ಓಟಿಪಿಯು ಬರುತ್ತದೆ ಅದನ್ನು ಹಾಕಿ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
ಹಂತ 6: ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ನಮೂದಿಸಿ ಸಬ್ಮಿಟ್ ಮಾಡಿ
ಹಂತ 7: ಹೀಗೆ ಮಾಡುವುದರಿಂದ ಕೊನೆಯದಾಗಿ ನಿಮಗೆ ಲಿಂಕ್ ಆಗಿರುವ ನೋಟಿಫಿಕೇಶನ್ ಬರುತ್ತದೆ.
ಇಷ್ಟು ಮಾಡಿದರೆ ನಿಮ್ಮ ration card ಆಧಾರ್ ಕಾರ್ಡ್ ಗೆ ಆನ್ ಲೈನ್ ಮೂಲಕ ಲಿಂಕ್ ಮಾಡುವದು ಪೂರ್ಣವಾಗುತ್ತದೆ.
ಆಫ್ ಲೈನ್ ಮೂಲಕ ನಿಮ್ಮ ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
ಹಂತ 1: ಹತ್ತಿರದ PDS ಕೇಂದ್ರ ಅಥವಾ ಪಡಿತರ ಅಂಗಡಿ/ಸ್ಥಳೀಯ ಪಡಿತರ ಕಚೇರಿಗೆ ಭೇಟಿ ನೀಡಿ
ಹಂತ 2: ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್‌ನ ನಕಲುಗಳ ಜೊತೆಗೆ ನಿಮ್ಮ ಪಡಿತರ ಚೀಟಿಯ ನಕಲು ಪ್ರತಿಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಕುಟುಂಬದ ಮುಖ್ಯಸ್ಥರ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ತೆಗೆದುಕೊಳ್ಳಿ.
ಹಂತ 3: ನಿಮ್ಮ ಬ್ಯಾಂಕ್ ಖಾತೆಯು ಆಧಾರ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಿಮ್ಮ ಬ್ಯಾಂಕ್ ಪಾಸ್‌ಬುಕ್‌ನ ನಕಲನ್ನು ಸಹ ನೀವು ಸಲ್ಲಿಸಬೇಕಾಗುತ್ತದೆ.
ಹಂತ 4: ಈ ಎಲ್ಲಾ ದಾಖಲೆಗಳನ್ನು ನಿಮ್ಮ ಆಧಾರ್‌ನ ಪ್ರತಿಯೊಂದಿಗೆ PDS ಅಂಗಡಿಯಲ್ಲಿ ಸಲ್ಲಿಸಿ.
ಹಂತ 5: ಪಡಿತರ ಅಂಗಡಿಯಲ್ಲಿ ಲಭ್ಯವಿರುವ ಪ್ರತಿನಿಧಿಯು ಮೊದಲ ಬಾರಿಗೆ ಆಧಾರ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ದೃಢೀಕರಣಕ್ಕಾಗಿ ನಿಮ್ಮನ್ನು ಕೇಳಬಹುದು.
ದಾಖಲೆಗಳನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ SMS ಅಧಿಸೂಚನೆಯನ್ನು ಕಳುಹಿಸಲಾಗುತ್ತದೆ. ಎರಡು ಡಾಕ್ಯುಮೆಂಟ್‌ಗಳನ್ನು ಯಶಸ್ವಿಯಾಗಿ ಲಿಂಕ್ ಮಾಡಿದಾಗ ನೀವು ಇನ್ನೊಂದು SMS ಅಧಿಸೂಚನೆಯನ್ನು ಸ್ವೀಕರಿಸುತ್ತೀರಿ.
ಆಗ ನೀವು ಸಂಪೂರ್ಣವಾಗಿ ಆಫ್ ಲೈನ್ ಮೂಲಕ ration card ಆಧಾರ್ ಕಾರ್ಡ್ ಗೆ ಆನ್ ಲೈನ್ ಮೂಲಕ ಲಿಂಕ್ ಮಾಡುವದು ಪೂರ್ಣವಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
Ration card ಆಧಾರ್ ಲಿಂಕ್ ಗೆ ಅವಶ್ಯಕ ದಾಖಲೆಗಳು ಈ ಕೆಳಗಿನಂತೆ ಇವೆ :
ರೇಷನ್ ಕಾರ್ಡ್ ಆಧಾರ್ ಲಿಂಕ್ ಮಾಡಲು ಅಪ್ಲೋಡ್ ಮಾಡಬೇಕಾದ ದಾಖಲೆಗಳನ್ನು ಕೆಳಗೆ ನೀಡಲಾಗಿದೆ:
ಮೂಲ ಪಡಿತರ ಚೀಟಿಯ ನಕಲು ಪ್ರತಿ
ನಿಮ್ಮ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್‌ನ ಫೋಟೋಕಾಪಿಗಳು
ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್‌ನ ಫೋಟೋಕಾಪಿ
ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಕುಟುಂಬದ ಮುಖ್ಯಸ್ಥನ ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳು.
ಇಂತಹ ಉತ್ತಮವಾದ ಕುರಿತು ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ