ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ…!
ಕಾಂಗ್ರೆಸ್ ಸರ್ಕಾರದ (Congress government) ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ (Annabhagya Yojana) ಕೂಡ ಒಂದು. ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಸಿಗುತ್ತದೆ, ಇನ್ನು ಮುಂದೆ ತಿಂಗಳಿಗೆ 10 ಕೆಜಿ ಅಕ್ಕಿ ಸಿಗುತ್ತದೆ . ಈ ಯೋಜನೆಯನ್ನು ಕರ್ನಾಟಕ ಉಚಿತ ಅಕ್ಕಿ ವಿತರಣಾ ಯೋಜನೆ ಎಂದೂ ಕರೆಯುತ್ತಾರೆ. ಮತ್ತು ಇದು ಸಮಾಜದ ದುರ್ಬಲ ವರ್ಗದ ಜನರಿಗೆ ನೆರವು ನೀಡಲು ಸರ್ಕಾರವು (government) ಜಾರಿಗೆ ತಂದ ಒಂದು ಪ್ರಮುಖ ಯೋಜನೆ ಇದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಹಾರ ಸಚಿವ ಮುನಿಯಪ್ಪನವರಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ :
ಸ್ವಲ್ಪ ದಿನದ ಹಿಂದೆ ಬಿಡುಗಡೆ ಆಗಬೇಕಿದ್ದ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆಯಾಗದೆ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಸಚಿವ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದಾರೆ.
ಬಿಪಿಎಲ್ (BPL) ಫಲಾನುಭವಿಗಳಿಂದ ಸರ್ಕಾರದ ವಿರುದ್ಧ ಆಕ್ರೋಶ :
ಎರಡು ತಿಂಗಳಿನಿಂದ ಅನ್ನಭಾಗ್ಯ ಹಣ ಬಿಡುಗಡೆ ಯಾಗಿರಲಿಲ್ಲ ಈ ಕಾರಣದಿಂದ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಈ ವಿಚಾರವಾಗಿ ಆಹಾರ ಸಚಿವ ಮುನಿಯಪ್ಪ ಪ್ರತಿಕ್ರಿಯಿಸಿದ್ದು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ (Server problem) ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಅಕ್ಕಿ ಬದಲಿಗೆ ಹಣ ದೊರೆಯುತ್ತಿದ್ದು, ಇದೀಗ ಹಣವೂ ಕೂಡ ಖಾತೆಗೆ ಜಮಾ ಆಗುತ್ತಿಲ್ಲ :
ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡುವ ವಿಚಾರದ ಕುರಿತಾಗಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ಮಧ್ಯೆ ಜಟಾಪಟಿ ನಡೆಯುತ್ತಿತ್ತು. ಕೇಂದ್ರ ಸರ್ಕಾರ (central government) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದಿದ್ದರೂ ಖರೀದಿಸುತ್ತಿಲ್ಲವೆಂಬ ಆರೋಪ ಕೂಡ ಕೇಳಿಬಂದಿತ್ತು. ಇದೆಲ್ಲದರ ಮಧ್ಯೆ 5ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದನ್ನು ಮುಂದುವರೆಸುವುದಾಗಿ ಇತ್ತೀಚೆಗೆ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು. ಇಷ್ಟಾದರೂ ಕೂಡ ಸರ್ಕಾರ ಎರಡು ತಿಂಗಳಿನಿಂದ ಡಿಬಿಟಿ ಹಣ (DBT Money) ಹಾಕಿರಲಿಲ್ಲ.
ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗುತ್ತಿಲ್ಲ ಎಂದ ಬಿಪಿಎಲ್ ಕಾರ್ಡ್‌ದಾರರು :
ಬಿಪಿಎಲ್ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಯಾವುದೇ ಹಣ ಪಾವತಿ ಆಗಿಲ್ಲ. ಹೀಗಾಗಿ ಫಲಾನುಭವಿಗಳು ಪ್ರತಿದಿನ ಬೆಂಗಳೂರು ಒನ್ ಹಾಗೂ ಬ್ಯಾಂಕ್ ಗಳನ್ನ ಸುತ್ತುವಂತ್ತಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.