ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ(Gruhalakshmi) ಹಾಗೂ ಯುವನಿಧಿ(Yuvanidhi) ಯೋಜನೆ ಅಡಿಯಲ್ಲಿ ಸೇವಾ ಸಿಂಧೂರಿನಲ್ಲಿ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಚನೆಯಲ್ಲಿ ಹಣವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆಗಳ ಅಡಿಯಲ್ಲಿ ಹಣವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು :
ಭಾರತದ ರಾಜ್ಯ ಸರ್ಕಾರವು ತಮ್ಮ ವಾರ್ಷಿಕ ಬಜೆಟ್ನಲ್ಲಿ ಯುವಕರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ. ನಮ್ಮ ದೇಶವು ಪ್ರಗತಿಯ ಹಾದಿಯಲ್ಲಿದೆ ಅಂತಹ ಪ್ರೊಫೈಲ್ ಸ್ಥಿರ ಆರ್ಥಿಕತೆಯನ್ನು ಸಿದ್ಧಪಡಿಸುವುದು ಭಾರತ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಅನುಕೂಲಕ್ಕಾಗಿ ಅನೇಕ ಯೋಜನೆಗಳು ಮತ್ತು ಉದ್ಯೋಗಗಳನ್ನು ಪ್ರಾರಂಭಿಸಿದೆ. ಅವುಗಳಲ್ಲಿ ಯುವನಿಧಿ ಯೋಜನೆಯು ಒಂದು. ಹಾಗೆಯೇ ಮನೆಗೆ ಒಡತಿಗೆ ನೆರವಾಗಲೆಂದು ಪ್ರತಿ ತಿಂಗಳು 2000 ರೂಗಳನ್ನು ಕೂಡ ನೀಡಲು ಸರ್ಕಾರ ಮುಂದಾಗಿದೆ.
ಯುವನಿಧಿ ಯೋಜನೆಗೆ ಬೇಕಾದ ಅರ್ಹತೆಗಳು :
- ಪದವಿ ಪಡೆದಿರುವ ನಿರುದ್ಯೋಗಿಗಳಿಗೆ ಕರ್ನಾಟಕ ಸರ್ಕಾರದಿಂದ 2 ವರ್ಷಗಳವರೆಗೆ ತಿಂಗಳಿಗೆ Rs 3000 ನೀಡಲಾಗುವುದು.
- ಡಿಪ್ಲೋಮಾ ಹೊಂದಿರುವ ನಿರುದ್ಯೋಗಿ ಯುವಕರಿಗೆ 2 ವರ್ಷಗಳವರೆಗೆ ಕರ್ನಾಟಕ ಸರ್ಕಾರದಿಂದ ತಿಂಗಳಿಗೆ 1500 ರೂ.
- ತಮ್ಮ ಪದವಿಯನ್ನು ಮುಗಿಸಿ ಆರು ತಿಂಗಳ ನಂತರ ಉದ್ಯೋಗ ದೊರೆಯದಿದ್ದರೆ ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ಬೇಕಾದ ಅರ್ಹತೆಗಳು :
- ಮನೆಯ ಒಡತಿಗೆ ಈ ಎರಡು ಸಾವಿರ ರೂಗಳ ಅನುದಾನವನ್ನು ನೀಡಲಾಗುತ್ತದೆ.
- ಆಧಾರ್ ಕಾರ್ಡ್ ನೊಂದಿಗೆ ಡಿಬಿಟಿ ಲಿಂಕ್ ಆಗಿರಬೇಕು
- ವಾಸ ದೃಢೀಕರಣ ಹಾಗೂ ಗುರುತಿನ ಪುರಾವೆಯನ್ನು ಹೊಂದಿರಬೇಕು.
ಗೃಹಲಕ್ಷ್ಮಿ, ಯುವನಿಧಿ ಯೋಜನೆಗೆ ಸೇವಾ ಸಿಂಧುವಿನಲ್ಲಿ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಈ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸೇವಾ ಸಿಂಧೂವಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ಹೊಸ ಬಳಕೆದಾರರೂ ಇಲ್ಲಿ ನೋಂದಾಯಿಸಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಹಂತ 3: ಮುಂದುವರೆದು, ಆಧಾರ್ ನಂಬರ್ ಅನ್ನು ನೋಂದಣಿ ಮಾಡಿ ಕ್ಯಾಪ್ಚವನ್ನು ಹಾಕಿ ನೆಕ್ಸ್ಟ್ ಮೇಲೆ ಕ್ಲಿಕ್ ಮಾಡಿ.
ಹಂತ 4: ನಿಮ್ಮ ಮೊಬೈಲ್ ನಂಬರ್ ಗೆ ಬಂದಿರುವ ಓಟಿಪಿಯನ್ನು ನೊಂದಣಿ ಮಾಡಿ continue ಮೇಲೆ ಕ್ಲಿಕ್ ಮಾಡಿ.
ಹಂತ 5: ನಂತರ allow ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಹಂತ 6: ನಂತರ ಇ-ಮೇಲ್(e-mail) ಐಡಿ ಅಥವಾ ಮೊಬೈಲ್ ನಂಬರ್ ಅನ್ನು ಹಾಕಿ, ಪಾಸ್ವರ್ಡ್ ಅನ್ನು ಹಾಕಿ ಕ್ಯಾಪ್ಚವನ್ನು ಎಂಟರ್ ಮಾಡಿ. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಹಂತ 7: ನಂತರ ಸೇವಾ ಸಿಂಧು ಅಕೌಂಟ್ ನಲ್ಲಿ ಲಾಗಿನ್ ಮೇಲೆ ಕ್ಲಿಕ್ ಮಾಡಿ
ಹಂತ 8: ನಂತರ ನೊಂದಾಯಿತ ಬಳಕೆದಾರರು ಇಲ್ಲಿ ಲಾಗಿನ್ ಮಾಡಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ 9: ನಂತರ ನಿಮ್ಮ ಇಮೇಲ್ ಐಡಿ ಅಥವಾ ಮೊಬೈಲ್ ನಂಬರ್ ಹಾಕಿ, ನೀವು ಕ್ರಿಯೇಟ್ ಮಾಡಿದ ಪಾಸ್ವರ್ಡ್ ಅನ್ನು ಟೈಪ್ ಮಾಡಿ, ಕ್ಯಾಪ್ಚವನ್ನು ಹಾಕಿ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಹಂತ 10: ನಂತರ ಅಪ್ಲೈ ಫಾರ್ ಸರ್ವಿಸಸ್ ಮೇಲೆ ಕ್ಲಿಕ್ ಮಾಡಿ. ನಂತರ ವಿವ್ ಆಲ್ ಅವೈಲಬಲ್ ಸರ್ವಿಸಸ್ ಮೇಲೆ ಕ್ಲಿಕ್ ಮಾಡಿ.
ಹಂತ 11: ಹೀಗೆ ಮಾಡಿದಲ್ಲಿ ನಿಮಗೆ ಎಲ್ಲ ಯೋಜನೆಗಳು ಕಾಣಿಸುತ್ತದೆ ಅದರಲ್ಲಿ ನೀವು ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗೆ ಸದ್ಯದಲ್ಲೇ ಅರ್ಜಿಗಳನ್ನು ಹಾಕುವ ಅವಕಾಶ ದೊರೆಯುತ್ತದೆ.
ಈ ಮೇಲಿನ ವಿಧಾನವನ್ನು ಅನುಸರಿಸಿ ಮುಂದಿನ ದಿನಗಳಲ್ಲಿ ನೀವು ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗೆ ಸೇವಾ ಸಿಂಧುವಿನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಎರಡು ಯೋಜನೆಗಳನ್ನು ಸೇವಾ ಸಿಂಧುವಿನಲ್ಲಿ ಸೇರಿಸಲಾಗುತ್ತದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ