ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನು ಕ್ರಮ ಎದುರಿಸಿ : ಅನಗತ್ಯ ಫೀಲ್ಡ್‌ಗೆ ಕಳುಹಿಸದಂತೆ ಸಚಿವ ಕೃಷ್ಣ ಬೈರೇಗೌಡ (Minister Krishna Byre Gowda) ತಾಕೀತು.
ರಾಜ್ಯದಲ್ಲಿ ಅಕ್ರಮ, ಸಕ್ರಮ ‘ಬಗರ್ ಹುಕುಂ’ (Bagar Hukum) ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ (conference meeting) ನಡೆಸಿ ಎಚ್ಚರಿಕೆ ನೀಡಿದ ಅವರು, ಈಗಾಗಲೇ ಹಲವಾರು ಆಪ್‌ಗಳಿಗೆ ನಿರಂತರವಾಗಿ ಉತ್ತರ ನೀಡುವ ಜತೆಗೆ ಕಚೇರಿ ಕೆಲಸದಲ್ಲೂ ತೊಡಗಿಕೊಂಡಿರುವ ಗ್ರಾಮ ಆಡಳಿತಾಧಿಕಾರಿಗಳ ಕಾರ್ಯ ಒತ್ತಡ ತಗ್ಗಿಸಲು ಕಂದಾಯ ಇಲಾಖೆ ಮುಂದಾಗಿದೆ. ‘ಬಗರ್ ಹುಕುಂ ಅರ್ಜಿಗಳ (Bagar Hukum applications) ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಅರ್ಜಿ ವಿಲೇವಾರಿ ಕೆಲಸಗಳು ಶೀಘ್ರದಲ್ಲಿ ಮುಗಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳುಹಿಸಬೇಡಿ ಎಂದು ತಹಶೀಲ್ದಾರರಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು ಮಾಡಿದ್ದಾರೆ.
ತಹಶೀಲ್ದಾರರಿಗೆ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ:
ಗ್ರಾಮ ಆಡಳಿತ ಅಧಿಕಾರಿಗಳನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳುಹಿಸುಬಾರದು. ಒಂದು ವೇಳೆ ಕಳುಹಿಸಿದರೆ ಅವರ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಆದ್ದರಿಂದ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಒಂದು ವೇಳೆ ಈ ಅವಧಿಯಲ್ಲಿ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟಿಸ್ (Notice) ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
ಎಷ್ಟು ಅರ್ಜಿಗಳು ಸಲ್ಲಿಕೆಯಾಗಿವೆ :
ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಅರ್ಹ ಭೂಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬದು ಕೂಡ ಒಂದು. ಆದ್ದರಿಂದ ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ “ಬಗರ್ ಹುಕುಂ” ಅರ್ಜಿಗಳನ್ನು ಆಹ್ವಾನಿಸಲಾಯಿತು. ಆದರೆ ಕೆಲವು ಅಧಿಕಾರಿಗಳು ಬಗರ್ ಹುಕುಂ ಸಂಬಂಧಿತ ಕೆಲಸಗಳಲ್ಲಿ ಅಸಡ್ಡೆ ತೋರುತ್ತಿದ್ದಾರೆ. ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುದೆಂದು ತಹಶೀಲ್ದಾರ್ಗಳಿಗೆ ಮೊದಲ ಹಂತದಲ್ಲೇ ತಿಳಿಯುತ್ತೆ. ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ, ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು. ಅಧಿಕಾರಿಗಳು ಈ ಕೆಲಸವನ್ನು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಅನಗತ್ಯವಾಗಿ ಅರ್ಜಿಗಳ ಪರಿಶೀಲನೆಗಾಗಿ ಫೀಲ್ಡ್ಗೆ ಕಳುಹಿಸಬೇಡಿ ಎಂದು ಸಚಿವ ಕೃಷ್ಣ ಬೈರೇಗೌಡ ತಾಕೀತು ಮಾಡಿದ್ದಾರೆ.
ಅರ್ಹರ ಗ್ರ್ಯಾಂಟ್ ಗೆ (Qualified grante) ವಿಳಂಬ ಬೇಡ:
ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಸಭೆ (bagar hukum committee) ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ. ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು. ಇದೇ ಸಂದರ್ಭದಲ್ಲಿ ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.
ಗಮನಿಸಿ (notice) :
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.