ರೈತರಿಗೆ ಗುಡ್ ನ್ಯೂಸ್ : 8 ತಿಂಗಳಲ್ಲಿ ಜಮೀನು ‘ಸಕ್ರಮ’ಕ್ಕೆ ಆದೇಶ, ತಾಲೂಕು ಮಟ್ಟದಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ.

bagar hukum

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಭೂರಹಿತ ಸಾಗುವಳಿದಾರರ ಜಮೀನು ಸಕ್ರಮೀಕರಣಗೊಳಿಸುವಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವುದು ಕಂಡು ಬಂದ ಹಿನ್ನಲೆಯಲ್ಲಿ, ಎಲ್ಲಾ ತಾಲೂಕುಗಳಲ್ಲೂ ಶೀಘ್ರದಲ್ಲೇ ಬಗರ್ ಹುಕುಂ ಸಮಿತಿಗಳನ್ನು ರಚಿಸಿ, ಮುಂದಿನ 8 ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಲಾಗುವುದು ಎಂದು ತಿಳಿಸಿದ್ದಾರೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ ಅವಕಾಶ ಇದೆ ಎಂದು ರಾಜ್ಯ ಸರ್ಕಾರದಿಂದ ತಿಳಿದು ಬಂದಿದೆ. ಹಾಗೆಯೇ ಅರ್ಜಿಯನ್ನು ಪರಿಶೀಲನೆ ಮಾಡಿ ನಂತರ ವಿಲೇವಾರಿ ಮಾಡುವ ಬದಲು ತಂತ್ರಜ್ಞಾನ ಬಳಕೆಗೆ ರಾಜ್ಯ ಸರಕಾರ ಮುಂದಾಗಿದೆ. 1980 ರಲ್ಲಿ ಕೃಷಿ ಚಟುವಟಿಕೆಗೆ ಸಣ್ಣ ರೈತರ ಬಳಿ ಜಮೀನು ಇರಲಿಲ್ಲ. ಅಂತಹ ರೈತರಿಗೆ ಸರಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡುವ ವ್ಯವಸ್ಥೆಯನ್ನು ಅಂದಿನ ಸರಕಾರ ಜಾರಿ ಮಾಡಿತ್ತು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಜಮೀನುಗಳನ್ನು ಸಕ್ರಮೀಕರಣಗೊಳಿಸಲು ಪರಿಶೀಲನೆ ನಡೆಸಿದಾಗ ಹಲವು ಅಕ್ರಮಗಳು ಕಂಡುಬಂದಿವೆ ಎಂದು ಸಚಿವರು ತಿಳಿಸಿದರು. ಎಲ್ಲಾ ಅರ್ಜಿಗಳನ್ನು ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಬ್ಬನೇ ವ್ಯಕ್ತಿ ಬರೋಬ್ಬರಿ 25 ಅರ್ಜಿಗಳನ್ನು ಹಾಕಿರುವುದು ಕಂಡುಬಂದಿದೆ. ಮೀನುಗಳನ್ನು ಇದುವರೆಗೂ ಸಾಗುವಳಿ ಮಾಡದೆ ಇರುವವರು ಸಹಿತ ಅರ್ಜಿ ಹಾಕಿರುವುದು ಸೇರಿದಂತೆ ಹಲವಾರು ನ್ಯೂನ್ಯತೆಗಳು ಕಂಡುಬಂದಿವೆ, ಹಾಗಾಗಿ ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಹೊಸದಾಗಿ ಬಗರ್ ಹುಕುಂ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ . ಈಗಾಗಲೇ 50 ಪ್ರಸ್ತಾವನೆಗಳು ಬಂದಿದ್ದು ಅಷ್ಟು ಸಮಿತಿಗಳನ್ನ ಶೀಘ್ರದಲ್ಲೇ ರಚನೆ ಮಾಡಲಾಗುತ್ತದೆ ಎಂದರು.

bagur hukam

ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಜಮೀನುಗಳನ್ನು ಮಹಜರ್ ಮಾಡಿ ಸಾಗುವಳಿ ಖಾತ್ರಿಪಡಿಸಲು ತಹಸಿಲ್ದಾರ್ ಅವರಿಗೆ ನಿರ್ದೇಶನ ನೀಡಲಾಗಿದೆ.ಇನ್ನು ಮುಂದೆ ನಡೆಯುವ ಎಲ್ಲಾ ಬಗರ್ ಹುಕುಂ ಸಮಿತಿ ಸಭೆಗಳನ್ನು ಗಣಕೀಕೃತಗೊಳಿಸುವುದು ಅಲ್ಲದೆ ಎಲ್ಲಾ ಸದಸ್ಯರ ಹಾಜರಾತಿಗಳನ್ನು ಬಯೋಮೆಟ್ರಿಕ್ ಮೂಲಕ ಖಾತ್ರಿಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!