BBMP ನೇಮಕಾತಿ 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ (bbmp.gov.in) ಗ್ರೂಪ್ “ಡಿ” ಸಿವಿಲ್ ಸರ್ವೆಂಟ್ (ಕೆಕೆ ಮತ್ತು ಆರ್‌ಪಿಸಿ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಒಟ್ಟು 11,307 ಹುದ್ದೆಗಳು ಲಭ್ಯವಿವೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15ನೇ ಮೇ 2024 ಆಗಿದೆ.
BBMP Group D Jobs Recruitment 2024 – ನೇಮಕಾತಿ ವಿವರ
ಹುದ್ದೆ ಹೆಸರು : ಪೌರಕಾರ್ಮಿಕರು (ಗ್ರೂಪ್ ‘ಡಿ’)
ಖಾಲಿ ಹುದ್ದೆಗಳ ಸಂಖ್ಯೆ : ಒಟ್ಟು 11,307 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆಫ್ ಲೈನ್ ಮೂಲಕ
BBMP Group D Vacancy details- ವೃಂದವಾರು ಹುದ್ದೆಗಳ ಸಂಖ್ಯೆ ವಿವರ :
ಉಳಿಕೆ ಮೂಲ ವೃಂದ – 10402 ಹುದ್ದೆಗಳು
ಕಲ್ಯಾಣ-ಕರ್ನಾಟಕ ವೃಂದ 905 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಕನ್ನಡ ಭಾಷೆ ಮಾತನಾಡಲು ಬರಬೇಕು,ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ 2 ವರ್ಷ ಸೇವೆಯನ್ನು ಸಲ್ಲಿಸಿರಬೇಕು.
ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಟ 55 ವರ್ಷದ ಒಳಗಿರಬೇಕು.
ಸಂಬಳ:
ಮಾಸಿಕ ವೇತನ ₹17,000/- ರಿಂದ ₹28,950/
ಪ್ರಮುಖ ದಿನಾಂಕಗಳ ವಿವರ:
ಅಪ್ಲಿಕೇಶನ್ ಪ್ರಾರಂಭ ದಿನಾಂಕ: 15 ಮಾರ್ಚ್ 2024
ಅಪ್ಲಿಕೇಶನ್ ಮುಕ್ತಾಯ ದಿನಾಂಕ: 15 ಮೇ 2024
ಅರ್ಜಿ ಸಲ್ಲಿಕೆಯ ಪ್ರಕ್ರಿಯೆ :
BBMP Group D Jobs Recruitment 2024 – BBMP ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು, ಕೆಳಗೆ ನೀಡಿರುವ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಅಧಿಸೂಚನೆಯಲ್ಲಿ ಹೊರಡಿಸಿರುವ ಎಲ್ಲಾ ದಾಖಲೆ ದಾಖಲಾತಿಗಳನ್ನು ಲಗತ್ತಿಸಿ, ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡುವ ಮುನ್ನ ಅಧಿ ಸೂಚನೆಯನ್ನು ಒಂದು ಸಾರಿ ಪೂರ್ತಿಯಾಗಿ ಓದಿ.
ಅರ್ಜಿ ಸಲ್ಲಿಸಲು ವಿಳಾಸ : ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.
ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ : ಡೌನ್ ಲೋಡ್
ಅರ್ಜಿ ನಮೂನೆ PDF : ಡೌನ್ ಲೋಡ್
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..