ಎಲ್ಲರಿಗೂ ನಮಸ್ಕಾರ, ಈ ಪ್ರಸ್ತುತ ಲೇಖನದಲ್ಲಿ 2023 ಮತ್ತು 24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶದ ಅರ್ಜಿಯ ಕುರಿತು ಮಾಹಿತಿ ನೀಡಲಾಗುತ್ತದೆ, ಮೆಟ್ರಿಕ್ ನಂತರದ ಹಾಸ್ಟೆಲಿಗೆ ಅರ್ಜಿ ಸಲ್ಲಿಸುವ ವಿಧಾನ, ದಾಖಲಾತಿಗಳು, ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
2023 24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ:
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪುವೇಶಕ್ಕಾಗಿ ಹೊಸದಾಗಿ ಪುವೇಶ ಬಯಸುವ ಪ.ಜಾ/ಪ.ವರ್ಗದ ಹಾಗೂ ಪವರ್ಗ-1, 2ಎ, 2ಬಿ, 3ಎ, 3ಬಿ, ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ
ಎಸ್.ಸಿ & ಎಸ್.ಟಿ, ಪವರ್ಗ-1 ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷದೊಳಗಿರಬೇಕು.
BCM ಹಾಸ್ಟೆಲ್‌ಗೆ ಅಗತ್ಯವಿರುವ ದಾಖಲೆಗಳು :
ಆಧಾರ್ ಕಾರ್ಡ್, SSP ಸ್ಟೂಡೆಂಟ್ ಐಡಿ, SSLC ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಹಿಂದಿನ ವರ್ಷದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ವರ್ಗಾವಣೆ ಪ್ರಮಾಣಪತ್ರ, ಪಾಸ್ಪೋರ್ಟ್ ಗಾತ್ರದ ಫೋಟೋ, ಮೊಬೈಲ್ ನಂಬರ್, ಕಾಲೇಜ್ ಸ್ಟಡಿ ಸರ್ಟಿಫಿಕೇಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15.07.2023
ಆನ್ಲೈನಲ್ಲಿ ಅರ್ಜಿ ಸಲ್ಲಿಸುವ ವಿಧಾನ
ಅರ್ಹ ವಿದ್ಯಾರ್ಥಿಗಳು SHP ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು
ಹಂತ 1 : ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಹಂತ 2 : ಈ ಎಸ್ ಹೆಚ್ ಪಿ ಪೋರ್ಟಲ್ ನಲ್ಲಿ ಮೇಲೆ ಕಾಣಿಸುತ್ತಿರುವ ” HOSTEL APPLUCATION POSTMATRIC” ಆಯ್ಕೆ ಮಾಡಿ
ಹಂತ 3 : ಇಲ್ಲಿ ನಿಮ್ಮ SSP ಐಡಿಯನ್ನು ನಮೂದಿಸಿ ಗೆಟ್ ಡೇಟಾ ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ನಿಮ್ಮ ಶೈಕ್ಷಣಿಕ ವರ್ಷದ ಮಾಹಿತಿ ದೊರೆಯುತ್ತದೆ ಮತ್ತು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 5: ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ನಂತರ ಇಲಾಖೆಯು ಪರಿಶೀಲನೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ.
ವಿಶೇಷ ಸೂಚನೆ : ಒಂದು ವೇಳೆ ನಿಮಗೆ ಬಿಸಿಎಂ ಹಾಸ್ಟೆಲ್ ಪ್ರವೇಶಾತಿ ದೊರೆಯದಿದ್ದಲ್ಲಿ ವಿದ್ಯಾಸಿರಿ ಊಟ ಮತ್ತು ವಸತಿ ಯೋಜನೆ ಅಡಿಯಲ್ಲಿ ತಿಂಗಳಿಗೆ 1500 ರೂಪಾಯಿಯಂತೆ 10 ತಿಂಗಳಿಗೆ 15000 ನೇರವಾಗಿ ಬ್ಯಾಂಕ್ ಖಾತೆಗೆ ಇಲಾಖೆ ಜಮಾ ಮಾಡುತ್ತೆ.
ಹಾಸ್ಟೆಲ್ ಪ್ರವೇಶ ಬಯಸುವ ಎಲ್ಲಾ ವಿದ್ಯಾರ್ಥಿಗಳಿಗೆ ದಯವಿಟ್ಟು ಈ ಮಾಹಿತಿಯನ್ನು ಈಗಲೇ ಶೇರ್ ಮಾಡಿ ಅವರಿಗೆ ತುಂಬಾ ಅನುಕೂಲವಾಗುತ್ತದೆ. ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ