ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸಂಚಾರಿಗಳಿಗೆ ಗುಡ್ ನ್ಯೂಸ್!. ಶೀಘ್ರದಲ್ಲೇ ಹೊಸ ಯೋಜನೆ ಆರಂಭ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ (Bengaluru Mysuru Expressway )ಚಲಿಸುವ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವೇ ಇಲ್ಲದಂತಾಗಿದೆ. ಅದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್ ಎಐ) ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡುತ್ತಿದೆ. ಹೆದ್ದಾರಿಯ ಒಂದು ಸಮಗ್ರ ಸೇವಾ ರಸ್ತೆಯನ್ನು ನಿರ್ಮಿಸಿ ಮಾರ್ಗದುದ್ದಕ್ಕೂ ಪಟ್ಟಣಗಳಿಗೆ ಸಂಪರ್ಕವನ್ನು ಹೆಚ್ಚಿಸುವ ಮತ್ತು ಎಕ್ಸ್‌ಪ್ರೆಸ್‌ವೇ ಗೆ ಪ್ರವೇಶಿಸುವ ಹಾಗೂ ನಿರ್ಗಮಿಸುವ ವಾಹನಗಳಿಗೆ ಸುಗಮ ಪ್ರವೇಶವನ್ನು ಒದಗಿಸಿಕೊಡುವ ಗುರಿಯನ್ನು ಹೊಂದಿದೆ. ಇದೀಗ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ (Express way) ಸಂಚಾರಿಗಳಿಗೆ ಗುಡ್ ನ್ಯೂಸ್. ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಹದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಓಡಾಡುವ ಜನ ಹೆಚ್ಚು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ದಾರಿಯ ಮುಖಾಂತರ ಎಲ್ಲಿಗೆ ಹೋಗಬೇಕೆಂದರೂ ಸರ್ವಿಸ್ ರಸ್ತೆಯೇ ಇಲ್ಲ. ಜನರ ಸಮಸ್ಯೆಗಳನ್ನು ಆಲಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಮಸ್ಯೆ ನಿವಾರಿಸಲು ಮುಂದಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡ ನಿರ್ಧಾರವೇನು?:
ಇನ್ನು ಈ ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವ ಯೋಜನೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡಿದ್ದು, ಮಾರ್ಗದುದ್ದಕ್ಕೂ ಹಲವು ಪಟ್ಟಣಗಳಿಗೆ ಸಂಪರ್ಕ ಹೆಚ್ಚಿಸಲು ಮತ್ತು ಎಕ್ಸ್‌ಪ್ರೆಸ್‌ವೇಗೆ ಪ್ರವೇಶಿಸುವ ಅಥವಾ ನಿರ್ಗಮಿಸುವ ವಾಹನಗಳಿಗೆ ಸುಗಮ ಪ್ರವೇಶವನ್ನು ಒದಗಿಸುವ ಗುರಿಯನ್ನು ಹಾಕಿಕೊಂಡು ಜನರ ಸಮಸ್ಯೆಗಳನ್ನು ನಿವಾರಿಸಲು ಮುಂದಾಗಿದೆ.
ಜನರು ಎದುರಿಸುತ್ತಿರುವ ಸಮಸ್ಯೆಗಳೇನು (problems) ?
ಬೆಂಗಳೂರು-ಮೈಸೂರು ನಡುವಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಿ, ಪ್ರಯಾಣದ ಸಮಯ ಕಡಿಮೆ ಮಾಡಲು 118 ಕಿಲೋ ಮೀಟರ್ ಉದ್ದದ ಎಕ್ಸ್‌ಪ್ರೆಸ್‌ವೇ ಅನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಈ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ (service road) ಇಲ್ಲದಿರುವುದರಿಂದ ಜನರು ಕಷ್ಟಪಡುವಂತಾಗಿದೆ. ಈ ಹೆದ್ದಾರಿಯಲ್ಲಿ ರೈಲು ಮಾರ್ಗದಂತಹ ಅಡೆತಡೆಗಳೂ ಸಹ ಕೂಡಿದ್ದು, ಪ್ರಯಾಣಿಕರು ಬಿಡದಿ, ಚನ್ನಪಟ್ಟಣ, ಮತ್ತು ಮದ್ದೂರಿನಂತಹ ಪಟ್ಟಣಗಳಿಗೆ ಭೇಟಿ ನೀಡಿ ತದನಂತರ ಅಲ್ಲಿಂದ ಹೆದ್ದಾರಿಯನ್ನು ಪ್ರವೇಶಿಸಲು ಅಥವಾ ನಿರ್ಗಮಿಸಬೇಕಿತ್ತು. ಹಾಗೆ ಈ ಎಲ್ಲಾ ಪ್ರದೇಶಗಳಿಗೆ ಆಗಮಿಸಬೇಕೆಂದರೆ ಸುತ್ತಾಡಿಕೊಂಡು ಬರಬೇಕಾಗುತ್ತದೆ. ಇದರಿಂದ ಸಮಯ ಹಾಗೂ ಇಂಧನದ ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರು. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡ ನಿರ್ಧಾರದಿಂದ ಜನರ ಸಮಸ್ಯೆ ಕಡಿಮೆಯಾಗಬಹುದು.
ಈ ಯೋಜನೆಯ ಕಾರ್ಯ ಯಾವಾಗ ಪ್ರಾರಂಭವಾಗುತ್ತದೆ :
ಈ ಹೆದ್ದಾರಿಯಲ್ಲಿನ ಗುಡ್ಡಗಾಡು ಪ್ರದೇಶದಂತಹ ಅಡೆತಡೆಗಳನ್ನು ತಪ್ಪಿಸುವ ಸಲುವಾಗಿ ಅಂಡರ್‌ಪಾಸ್‌ಗಳು ಮತ್ತು ಮೇಲ್ ಸೇತುವೆಗಳಂತಹ ಹೆಚ್ಚುವರಿ ಮೂಲಸೌಕರ್ಯಕ್ಕಾಗಿ ಸ್ಥಳಗಳನ್ನು ಗುರುತಿಸಿದ್ದು, ರೈಲ್ವೆ ಮಾರ್ಗಗಳು (Railway tracks) ಮತ್ತು ಗುಡ್ಡಗಾಡು ಪ್ರದೇಶದಂತಹ ಅಡೆತಡೆಗಳನ್ನು ತಪ್ಪಿಸುವ ಸಲುವಾಗಿ ಈ ರೀತಿಯ ಪ್ರದೇಶವನ್ನು ಗುರುತಿಸಿ ಜಾಗಗಳ ಸಮೀಕ್ಷೆಗಳನ್ನು ನಡೆಸಲಾಗಿದೆ. ಹಾಗೂ ಈಗಾಗಲೇ ಟೆಂಡರ್‌ಗಳನ್ನು (Tender) ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಸರ್ವಿಸ್ ರಸ್ತೆ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿ:
ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ಟೋಲ್ ಪ್ಲಾಜಾಗಳಲ್ಲಿ ದಟ್ಟಣೆ ನಿಯಂತ್ರಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿ ಮಾಡಲು ಮುಂದಾಗಿದ್ದು, ಎನ್‌ಎಚ್‌ಎಐನ ಅಂಗಸಂಸ್ಥೆಯಾದ ಐಎಚ್‌ಎಂಸಿಎಲ್ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (Global Navigation Satellite system) ವ್ಯವಸ್ಥೆಯ ಸ್ಥಾಪನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಒಟ್ಟಾರೆಯಾಗಿ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ಅನ್ನು ಎರಡು ಟೋಲ್ ಸಂಗ್ರಹಣಾ ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. ಇಲ್ಲಿ ವಾಹನ ಸವಾರರು ಟೋಲ್ ಪಾವತಿಸಬೇಕಾದರೆ ವಾಹನಗಳನ್ನು ನಿಲ್ಲಿಸದೆ ಟೋಲ್ (Toll) ಕಟ್ಟಲು ಸಹಾಯವಾಗಲಿದೆ. ಇನ್ನು ಈ ಕುರಿತಾಗಿ ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭ ಆಗಲಿದ್ದು, ಇದಕ್ಕಾಗಿ ಹಲವು ಅಧ್ಯಯನಗಳು ಹಾಗೂ ಸಮೀಕ್ಷೆಗಳು ಮಾಡಲಾಗಿದೆ. ಇದರಿಂದ ಪ್ರಯಾಣಿಕ ಸಮಯದ ಜೊತೆ ಟೋಲ್ ನಲ್ಲಿ ಉಂಟಾಗುವ ವಿಳಂಬದ ಸಮಸ್ಯೆಯನ್ನು ಕಡಿಮೆ ಮಾಡಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದುಕೊಂಡಿರುವ ಈ ನಿರ್ಧಾರದಿಂದ ಅಂಡರ್‌ಪಾಸ್‌ಗಳು, ಮೇಲ್ಸೇತುವೆಗಳು ಮತ್ತು ಸರ್ವಿಸ್ ರಸ್ತೆ ಸೇರಿದಂತೆ ಹೊಸ ಯೋಜನೆಗಳು ನಿರ್ಮಾಣವಾಗುವುದರಿಂದ ಈ ಸಮಸ್ಯೆಗಳು ಬಗೆಹರಿಯಬಹುದು ಎಂದು ಎನ್‌ಎಚ್‌ಎಐ (NHAI) ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ.ಬ್ರಹ್ಮಂಕರ್ ತಿಳಿಸಿದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.