ಭಾಗ್ಯಲಕ್ಷ್ಮಿ ಬಾಂಡ್ ಗೆ 18 ವರ್ಷ, ಎಲ್ಲಾ ಹೆಣ್ಣು ಮಗುವಿಗೆ ಬರುತ್ತೆ ಬರೋಬ್ಬರಿ 1 ಲಕ್ಷ ರೂಪಾಯಿ| Bhagya Lakshmi Bond 2023

bhagyalakshmi bond

ಹೆಣ್ಣು ಮಕ್ಕಳ ಭಾಗ್ಯಲಕ್ಷ್ಮಿ ( Bhaagya Lakshmi Scheme ) ಯೋಜನೆಯು ಇದೀಗ ಬಡವರ ಕೈ ಹಿಡಿದಿದೆ. ಹೌದು, ಇದೀಗ ಚಾಲ್ತಿಯಲ್ಲಿರುವ ಸಿ ಎಂ ಸಿದ್ದರಾಮಯ್ಯ ನವರ ಗೃಹಲಕ್ಷ್ಮಿ ( Gurhalakshmi scheme ) ಯೋಜನೆ ಬಡವರ ಕೈ ಬಿಟ್ಟರೂ, ಬಿಜೆಪಿ(BJP)ಯ ಯಡಿಯೂರಪ್ಪನವರ ಭಾಗ್ಯಲಕ್ಷ್ಮಿ ಕೈ ಹಿಡಿಯಿತು ಎಂದು ಹಲವಾರು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕಿದ್ದು, ಈ ಯೋಜನೆಯ ಕಂತನ್ನು ಬಿಡಲಾಗಿದೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಬಡವರ ಕೈ ಹಿಡಿದ ಭಾಗ್ಯಲಕ್ಷ್ಮಿ ಯೋಜನೆ :

ಈ ಯೋಜನೆಗೆ ಬಡತನ ರೇಖೆಗಿಂತ ( Poverty Line ) ಕೆಳಗೆ ಇರುವ ಕುಟುಂಬಗಳಲ್ಲಿ 31.3.2006 ರ ನಂತರ ಜನಿಸಿದ ಹೆಣ್ಣು ಮಕ್ಕಳು ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಆರ್ಹರಿರುತ್ತಾರೆ. ಮಗು ಜನಿಸಿದ ಒಂದು ವರ್ಷದೊಳಗೆ ಜನನ ಪ್ರಮಾಣ ಪತ್ರವನ್ನು ಒದಗಿಸಿ ನೋಂದಾಯಿಸಲು ಅವಕಾಶವಿದೆ. ಮುಖ್ಯವಾಗಿ ಈ ಯೋಜನೆಯ ಸೌಲಭ್ಯಗಳನ್ನು ಬಡತನ ರೇಖೆಗಿಂತ ಕೆಳಗೆ ಇರುವ ಕುಟುಂಬದ ಇಬ್ಬರು ಹೆಣ್ಣುಮಕ್ಕಳಿಗೆ ಸೀಮಿತಗೊಳಿಸಲಾಗಿದೆ. ಫಲಾನುಭವಿ ಹೆಣ್ಣುಮಗುವಿನ ತಂದೆ ಅಥವಾ ತಾಯಿ ಶಾಶ್ವತ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡಿರಬೇಕಾಗಿರುತ್ತದೆ ಮತ್ತು ಇನ್ನೊಂದು ಮುಖ್ಯ ವಿಚಾರ ಏನೆಂದರೆ ಕುಟುಂಬದಲ್ಲಿ ಮಕ್ಕಳ ಸಂಖ್ಯೆ 3ಕ್ಕಿಂತ ಹೆಚ್ಚಿಗೆ ಇರಬಾರದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ – Voter ID – ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ, ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಿ.

ಈ ಯೋಜನೆಯಲ್ಲಿ ಇರುವ ಠೇವಣಿ ಹಾಗೂ ಬಡ್ಡಿಯ ವಿವರ ಹೀಗಿದೆ :

ನೋಂದಣಿ ನಂತರ ಹಾಗೂ ಪೂರ್ಣ ಪರಿಶೀಲನೆ ನಂತರ ಪ್ರತಿ ಫಲಾನುಭವಿಗೆ ರೂ.10,000/-ಗಳನ್ನು ಆಯ್ಕೆಯಾದ ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ನಿಶ್ಚಿತ ಠೇವಣಿಯನ್ನು ಇಡಲಾಗುತ್ತದೆ. ಹಾಗೂ ಪಾಲುದಾರ ಹಣಕಾಸು ಸಂಸ್ಥೆಯು ಹೆಣ್ಣುಮಗುವಿನ ಹೆಸರಿನಲ್ಲಿ ಇಟ್ಟ ರೂ.10,000/-ಗಳ ಠೇವಣಿಯ ಮೇಲಿನ ಆದಾಯವನ್ನು ಗರಿಷ್ಠಗೊಳಿಸಿ, ಠೇವಣಿ(deposit) ಹಣವನ್ನು ಬಡ್ಡಿ ಸಮೇತವಾಗಿ ಫಲಾನುಭವಿಗಳಿಗೆ 18 ವರ್ಷಗಳು ಪೂರ್ಣಗೊಂಡ ನಂತರ ದೊರಕಿಸಿ ಕೊಡಲಾಗುತ್ತದೆ.

bhagyalakshmi

ಹಾಗೂ ಮೊದಲ ಮಗುವಿಗೆ ಮತ್ತು ರೂ.40,918/- ನ್ನು ಎರಡನೇ ಮಗುವಿಗೆ ನೀಡಲಾಗುತ್ತದೆ. 2008 ರ ಆಗಸ್ಟ್ ನಂತರ ಜನಿಸಿದ ಮಗುವಿಗೆ ಠೇವಣಿ ಮೊತ್ತವನ್ನು 19,300 ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ಮೊದಲ ಹೆಣ್ಣು ಮಗುವಿಗೆ 1,00,052 ರೂ. ಎರಡನೇ ಮಗುವಿಗೆ 18,350 ರೂ. ಹೆಚ್ಚಳ ಮಾಡಲಾಗಿದ್ದು, ಒಟ್ಟು 1,00,097 ರೂಪಾಯಿ ಸಿಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ –  Loan Scheme – ಮಹಿಳೆಯರಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ, ಇಲ್ಲಿದೆ ಸಂಪೂರ್ಣ ಮಾಹಿತಿ

ಆರೋಗ್ಯ ವಿಮೆ ಸೌಲಭ್ಯವು ಕೂಡ ದೊರೆಯುತ್ತದೆ :

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಹೆಣ್ಣು ಮಗು ಖಾಯಿಲೆ ಬಿದ್ದಲ್ಲಿ, ಆರೋಗ್ಯ ವಿಮೆ ಸೌಲಭ್ಯವನ್ನು ಗರಿಷ್ಠ 25,000 ರವರೆಗೆ ನೀಡಲಾಗುವುದು. ವಿಮಾದಾರರು ಸ್ವಾಭಾವಿಕ ಸಾವು ಹೊಂದಿದಲ್ಲಿ 42500/- ವಿಮೆ ಹಣ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಮತ್ತು ವಿಮಾದಾರರು ಅಪಘಾತದಿಂದ ಸತ್ತರೆ ರೂ.1,00,000/- ವಿಮೆ ಹಣವನ್ನು ಕುಟುಂಬಕ್ಕೆ ನೀಡಲಾಗುತ್ತದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಯೋಜನೆಗೆ ಬೇಕಾದ ಮುಖ್ಯ ಆರ್ಹತೆ ಅಂಶಗಳು :

ಮಗುವಿನ ಜನನವನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು.
ಮಗುವಿಗೆ ಆರೋಗ್ಯ ಇಲಾಖೆಯ ಕಾರ್ಯಕ್ರಮದಂತೆ ರೋಗನಿರೋಧಕ ಹಾಕಿಸಿರಬೇಕು.
ಅಂಗನವಾಡಿ ಕೇಂದ್ರಕ್ಕೆ ನೋಂದಣಿಯಾಗಿರಬೇಕು.
ಶಿಕ್ಷಣ ಇಲಾಖೆಯ ನೋಂದಾಯಿತ ಶಾಲೆಗಳಲ್ಲಿ ಮಗುವನ್ನು ಶಾಲೆಗೆ ದಾಖಲಿಸಿರಬೇಕು.
ಮಗು ಬಾಲಕಾರ್ಮಿಕರಾಗಿರಬಾರದು.
18 ವರ್ಷ ಪೂರ್ಣಗೊಳ್ಳುವವರೆಗೆ ವಿವಾಹ ಆಗಿರಬಾರದು.

ಇದನ್ನೂ ಓದಿ – Free Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!