ಗ್ಯಾರಂಟಿ ಯೋಜನೆಗಳ ಹಿನ್ನಲೆಯಲ್ಲಿ ಆರ್ಥಿಕ ಸಂಕಷ್ಟ: ಸರ್ಕಾರಿ ನೌಕರರಿಗೆ ಬಿಗ್ ಶಾಕ್!
ಇತ್ತೀಚಿನ ದಿನಗಳಲ್ಲಿ, ಸರ್ಕಾರದ ಗ್ಯಾರಂಟಿ ಯೋಜನೆಗಳು (Guarantee scheme) ರಾಜ್ಯಗಳ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿವೆ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಸರ್ಕಾರಗಳು (Governments) ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಮೇಲೆ ಪರಿಣಾಮ ಬೀರುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಖುದ್ದ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಸರ್ಕಾರಗಳ ಮೂಲಕ ಸಾರ್ವಜನಿಕ ಕಲ್ಯಾಣಕ್ಕಾಗಿ (Public welfare) ಜಾರಿಗೆ ತರಲಾದ ಗ್ಯಾರಂಟಿ ಯೋಜನೆಗಳು ದೇಶದ ಆರ್ಥಿಕ ಸ್ಥಿತಿಗೆ ಬಿರುಕು ಮೂಡಿಸುತ್ತಿವೆ ಎಂಬ ವಾದಗಳು ಇತ್ತೀಚೆಗೆ ಜೋರಾಗಿವೆ. ವಿಶೇಷವಾಗಿ, ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಗ್ಯಾರಂಟಿ ಯೋಜನೆಗಳ ಪರಿಣಾಮವೇ ಈಗ ಸರ್ಕಾರಿ ನೌಕರರ (Government employees) ಭವಿಷ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂಬ ಆತಂಕ ಕಾಡುತ್ತಿದೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇತ್ತೀಚಿಗೆ ಈ ಬಗ್ಗೆ ಹೇಳಿಕೆ ನೀಡಿದ್ದು, ಸರ್ಕಾರದ ಹಣಕಾಸು ಪರಿಸ್ಥಿತಿ ನಿಭಾಯಿಸಲು ಕಷ್ಟವಾಗುತ್ತಿದೆ. ರಾಜ್ಯದ ಆರ್ಥಿಕ ಸ್ಥಿತಿ (state economy situation) ತೀವ್ರ ಹದಗೆಟ್ಟಿದ್ದು, ತಿಂಗಳ ಮೊದಲ ದಿನವೇ ಸರ್ಕಾರಿ ನೌಕರರಿಗೆ ವೇತನ ನೀಡಲು ಸರ್ಕಾರಕ್ಕೆಕ್ಕೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯಗಳ ಆರ್ಥಿಕ ಸ್ಥಿತಿಗೆ ಹೊಡೆತ:
ತೆಲಂಗಾಣ ಮತ್ತು ಕರ್ನಾಟಕ ಕಾಂಗ್ರೆಸ್ ಸರ್ಕಾರಗಳು (Thelangana and Karnataka Congress Government) ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದವು. ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನೂ, ತೆಲಂಗಾಣದಲ್ಲಿ ಆರು ಪ್ರಮುಖ ಗ್ಯಾರಂಟಿ ಯೋಜನೆಗಳನ್ನೂ ಜಾರಿಗೊಳಿಸಲಾಗಿದೆ. ಈ ಯೋಜನೆಗಳು ಸಾರ್ವಜನಿಕರಿಗೆ ನೇರ ಲಾಭ ತಲುಪಿಸುತ್ತಿದ್ದರೂ, ಸರ್ಕಾರಗಳ ಮೇಲೆ ಆರ್ಥಿಕ ಒತ್ತಡ (Economic pressure) ಹೆಚ್ಚುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ತೆಲಂಗಾಣದಲ್ಲಿ ಈ ಯೋಜನೆಗಳ ಜಾರಿಗೆ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡುತ್ತಿರುವುದು ಬಹಿರಂಗವಾಗಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೇ ತಿಳಿಸಿದ್ದಾರೆ. ಪ್ರತಿಮಾಸವೂ ಆರ್ಬಿಐಯಿಂದ (RBI) ಸುಮಾರು ₹4,000 ಕೋಟಿ ಸಾಲ ತೆಗೆದುಕೊಳ್ಳುತ್ತಿರುವುದಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಹಾಗೆಯೇ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಕೂಡ ನೀಡಲಾಗಿದೆ. ತಮ್ಮ ವೇತನವೇ ಅನುಮಾನ!
ಆರ್ಥಿಕ ಬಿಕ್ಕಟ್ಟಿನ ಕಾರಣ ಸರ್ಕಾರವೇ ನೌಕರರ ವೇತನ (Government employees payment) ನೀಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. “ನಿಮಗೆ ಸಂಬಳವೇ ಬೇಕೇ? ಅಥವಾ ತುಟ್ಟಿಭತ್ಯೆ ಬೇಕೇ?” ನಮ್ಮ ಪರಿಸ್ಥಿತಿಯನ್ನೂ ಸ್ವಲ್ಪ ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಎಂಬ ಪ್ರಶ್ನೆ ಕೇಳಿ, ನೌಕರರ ಆಕ್ರೋಶಕ್ಕೆ ಕಾರಣರಾಗಿರುವ ರೇವಂತ್ ರೆಡ್ಡಿ, ಸರ್ಕಾರದ ಕೈಯಲ್ಲಿ ಹಣವಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.
ತೆಲಂಗಾಣ ಸರ್ಕಾರದ ಈ ನಿರ್ಧಾರವು ಕರ್ನಾಟಕದ ಸರ್ಕಾರಿ ನೌಕರರಲ್ಲಿ ಆತಂಕವನ್ನು ಮೂಡಿಸಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಗ್ಯಾರಂಟಿ ಯೋಜನೆಗಳ ಜಾರಿಗೆ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂಬ ಭೀತಿ ಉಂಟಾಗಿದೆ. ಇದು ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪಾವತಿಯಲ್ಲಿ ವಿಳಂಬ (Delay in payment of salaries and allowances to employees) ಅಥವಾ ಕಡಿತಕ್ಕೆ ಕಾರಣವಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.
ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ಜನರು ಅನುಭವಿಸುತ್ತಿರುವುದಾದರೂ, ಅವುಗಳನ್ನು ಜನರಿಗೆ ತಲುಪಿಸಲು ಸರ್ಕಾರಗಳು ಹಣಕಾಸು (Financial) ನಿಭಾಯಿಸಲು ಪರದಾಡುತ್ತಿವೆ. ಸಾಲದ ಹೊರೆ ಹೆಚ್ಚಿದಂತೆ ಈ ಯೋಜನೆಗಳ ಭವಿಷ್ಯವೇ ಅಸ್ಪಷ್ಟವಾಗಲಿದೆ. ಸರ್ಕಾರಗಳು ಈ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳದಿದ್ದರೆ, ಮುಂಬರುವ ದಿನಗಳಲ್ಲಿ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳ ಭದ್ರತೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ.
ಸಾರ್ವಜನಿಕ ಯೋಜನೆಗಳ ಜಾರಿಗೆ ಸರ್ಕಾರಗಳು ಆರ್ಥಿಕ ಸ್ಥಿತಿಯನ್ನು (economic situation) ಸಮತೋಲನದಲ್ಲಿ ಇರಿಸಿಕೊಳ್ಳುವುದು ಅತ್ಯಂತ ಮುಖ್ಯ. ಆದರೆ, ಆರ್ಥಿಕ ಸಂಕಷ್ಟಗಳು ಉಂಟಾದಲ್ಲಿ, ಅದರ ಪರಿಣಾಮ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಮೇಲೆ ಬೀಳಬಹುದು. ಅದಕ್ಕಾಗಿ, ಸರ್ಕಾರಗಳು ಯೋಜನೆಗಳ ಜಾರಿಗೆ ಮುನ್ನ ಆರ್ಥಿಕ ಸ್ಥಿತಿಯನ್ನು ಸೂಕ್ತವಾಗಿ ವಿಶ್ಲೇಷಿಸಿ, ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅಗತ್ಯ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.