ಈ ವರದಿಯಲ್ಲಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ(BMRCL)
Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ (BMRCL Recruitment 2024 ) ಅವಲೋಕನ:
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆಹೊರಡಿಸಿದೆ,
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ಈ ಬಾರಿ 05 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)
2024 ಮೂಲಕ ಜನರಲ್ ಮ್ಯಾನೇಜರ್ (General Manager) ಪೋಸ್ಟ್‌ಗಳನ್ನು ನೇಮಕಾತಿಗಾಗಿ ಆನ್‌ಲೈನ್ ನೋಂದಣಿ (Online registration) ಈಗಾಗಲೇ ಪ್ರಾರಂಭವಾಗಿದೆ ಮತ್ತು 25 ಸೆಪ್ಟೆಂಬರ್ 2024 ರಂದು ಕೊನೆಗೊಳ್ಳುತ್ತದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಇಲಾಖೆ ಹೆಸರು – ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)
ಹುದ್ದೆಗಳ ಹೆಸರು – ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು 05
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ /ಆಫ್ಲೈನ್
ಉದ್ಯೋಗ ಸ್ಥಳ –ಭಾರತ
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಖಾಲಿ ಹುದ್ದೆಗಳ ವಿವರ:
ಜನರಲ್ ಮ್ಯಾನೇಜರ್ (ಗುತ್ತಿಗೆ / ಅಂಗಡಿಗಳು)02
ಜನರಲ್ ಮ್ಯಾನೇಜರ್ (ಟ್ರಾಕ್ಷನ್)01
ಜನರಲ್ ಮ್ಯಾನೇಜರ್ (ಟ್ರಾಕ್ಷನ್)01
ಜನರಲ್ ಮ್ಯಾನೇಜರ್ (ಸಿಗ್ನಲಿಂಗ್)01
ಒಟ್ಟು ಹುದ್ದೆಗಳು 05
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್. ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್, ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ, ಎಲೆಕ್ಟ್ರಿಕಲ್ ಟೆಕ್ನಾಲಜಿ, ಟೆಕ್ನಿಕಲ್ ಆಂಡ್ ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್/ ಟೆಲಿಕಾಮ್ಯುನಿಕೇಶನ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಸೂಕ್ತ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು.
ವಯೋಮಿತಿ :
ನಮ್ಮ ಮೆಟ್ರೋ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 58 ವರ್ಷ ದಾಟಿರಬಾರದು. ಜಾತಿ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ. ಅನುಭವವು ಪರಿಗಣಿಸಲಾಗುತ್ತದೆ.
ಸಂಬಳದ ಪ್ಯಾಕೆಜ್ ಎಷ್ಟು?
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಹೇಳುವಂತೆ ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 2,06,250 ರೂಪಾಯಿ ವೇತನ ಸಹಿತವಾಗಿ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯನ್ನು ಪರಿಶೀಲಿಸಲಾಗುತ್ತದೆ. ನಂತರ ಸೇವೆಯ ಅನುಭವ ನೋಡಿಕೊಂಡು ಸಂದರ್ಶನ(Intreview) ಮುಖಾಂತರ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆನ್‌ಲೈನ್, ಆಫ್‌ಲೈನ್ ಅರ್ಜಿ ಸಲ್ಲಿಕೆಗೆ ಹೇಗೆ?
ಆಫ್‌ಲೈನ್ (Offline) ಅರ್ಜಿಯನ್ನು ಹೀಗೆ ಸಲ್ಲಿಸಿ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳ ಸಹಿತ ಇಲ್ಲಿನ ವಿಳಾಸ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, BMTC ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ
ಶಾಂತಿನಗರ, ಬೆಂಗಳೂರು-560027 ಇಲ್ಲಿಗೆ ಶೀಘ್ರವೇ ಕಳುಹಿಸಬೇಕು.
ಆನ್‌ಲೈನ್ (Online) ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://english.bmrc.co.in/
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ ಅನ್ವಯಿಸದಲ್ಲಿ.
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.09.2024
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ