ಕರ್ನಾಟಕ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ!

metro recruitment

ಈ ವರದಿಯಲ್ಲಿ ಮೆಟ್ರೋ ಹುದ್ದೆಗಳ ನೇಮಕಾತಿ ಕುರಿತು ತಿಳಿಸಿಕೊಡಲಾಗುತ್ತಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ನೇಮಕಾತಿ(BMRCL Recruitment) 2024:

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಸಂಸ್ಥೆಯು (BMRCL) 2024 ನೇ ಆರ್ಥಿಕ ವರ್ಷದ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಸಂಸ್ಥೆ ಒಟ್ಟು 96 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದು, ಇದರಲ್ಲಿ 69 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳು ಸೇರಿವೆ. ಈ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 10-07-2024 ಎಂದು ನಿಗದಿಪಡಿಸಲಾಗಿದೆ.

ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಸಂಸ್ಥೆಯು (Bangalore Metro Rail Corporation-BMRCL)

ಹುದ್ದೆಯ ಹೆಸರು: ಸ್ಟೇಷನ್ ಕಂಟ್ರೋಲರ್(Station Controller)/ ಟ್ರೈನ್ ಆಪರೇಟರ್(Train Operator)

ಒಟ್ಟು ಹುದ್ದೆಗಳು: 69

ಉದ್ಯೋಗ ಸ್ಥಳ: ಬೆಂಗಳೂರು ಮೆಟ್ರೋ(Bangalore Metro)

ಗುತ್ತಿಗೆಯ ಅವಧಿ: 05 ವರ್ಷಗಳು

ಶೈಕ್ಷಣಿಕ ಅರ್ಹತೆ:

ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಹತ್ತನೇ ತರಗತಿಯನ್ನು ಉತ್ತೀರ್ಣರಾಗಿರಬೇಕು ಮತ್ತು ನಿರ್ದಿಷ್ಟಪಡಿಸಿದ ಬ್ರ್ಯಾಂಚ್‌ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಕನಿಷ್ಠ ವಯಸ್ಸು: 21 ವರ್ಷ (ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು)

ಗರಿಷ್ಠ ವಯಸ್ಸು: 45 ವರ್ಷ

ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC): 03 ವರ್ಷ

ಮಾಜಿ ಸೈನಿಕರಿಗೆ: 05 ವರ್ಷ

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 35000-82660 ನೀಡಲಾಗುತ್ತದೆ ಮತ್ತು BMRCL ನ ನಿಯಮಾವಳಿಗಳ ಪ್ರಕಾರ ಇತರ ಸೌಲಭ್ಯಗಳು ದೊರೆಯುತ್ತವೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ.

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ(Competative exam) ಮತ್ತು ಕೌಶಲ್ಯ ಪರೀಕ್ಷೆ(Skill test) ಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು 10-07-2024 ರವರೆಗೆ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ನಂತರ, ಆನ್‌ಲೈನ್ ಅರ್ಜಿಯ ಪ್ರತಿಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ 15-07-2024 ರ ಒಳಗೆ ಹಾರ್ಡ್ ಕಾಪಿಯನ್ನು ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು, BMRCL,  https://www.bmrc.co.in/career/ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 14-06-2024

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2024

ಹಾರ್ಡ್ ಕಾಪಿ ಕಳುಹಿಸಿ ಕೊಡುವ ಕೊನೆಯ ದಿನಾಂಕ: 15-07-2024

ಈ ನೇಮಕಾತಿ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಯನ್ನು BMRCL ವೆಬ್‌ಸೈಟ್‌ನಲ್ಲಿ ಪರಿಶೀಲಿಸಿ ಹಾಗೂ ಕೆಳಗೆ ನೀಡಲಾದ ನೋಟಿಫಿಕೇಶನ್ ಅನ್ನು ಓದಿ, ವಿದ್ಯಾರ್ಹತೆ, ಅರ್ಹತೆ ಮತ್ತು ಇತರ ವಿವರಗಳನ್ನು ತಪಾಸಿಸಿ.

ಅಧಿಕೃತ ನೋಟಿಫಿಕೇಶನ್

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!