ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2023-24 ಶೈಕ್ಷಣಿಕ ವರ್ಷದಿಂದ 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ರಾಜ್ಯದಲ್ಲಿ ಈ ವರ್ಷ ಈ ಎರಡು ತರಗತಿಗಳಿಂದ ಸುಮಾರು 15 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತಿದೆ, ಲೇಖನವನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ :
ಕಳೆದ ವರ್ಷ 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಮಾಪನ ಪರೀಕ್ಷೆಗಳನ್ನು ಪರಿಚಯಿಸಿದ ನಂತರ, ಸರ್ಕಾರವು ಈಗ 9 ನೇ ತರಗತಿಯ ವಿದ್ಯಾರ್ಥಿಗಳನ್ನು ಒಳಗೊಳ್ಳಲು ಸಂಕಲನಾತ್ಮಕ ಮೌಲ್ಯಮಾಪ(Summative Assessment) ನವನ್ನು ವಿಸ್ತರಿಸಿದೆ. ಹೆಚ್ಚುವರಿಯಾಗಿ, 11 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುವುದು.
2023-24ನೇ ಶೈಕ್ಷಣಿಕ ವರ್ಷದಿಂದ, ಕರ್ನಾಟಕ ಸರ್ಕಾರವು 9 ನೇ ತರಗತಿಯ ವಿದ್ಯಾರ್ಥಿಗಳಿಗೆ SA( Summative Assessment) 2 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದೆ.ಈ ಪರೀಕ್ಷೆಗಳನ್ನು ಶಾಲಾ ಮತ್ತು ಕಾಲೇಜು ಹಂತಗಳಲ್ಲಿ ನಡೆಸಬೇಕೆಂದು ನಿರ್ಧರಿಸಲಾಗಿದೆ, ಆಯಾ ಶಿಕ್ಷಣ ಸಂಸ್ಥೆಗಳು ಪರೀಕ್ಷಾ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತವೆ.
ಸೂಚನೆ ಪ್ರಕಾರ, 9ನೇ ತರಗತಿಯ SA-2 ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ರಾಜ್ಯ ಗುಣಮಟ್ಟ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (KSQAAC) ಪ್ರಕಟಿಸುತ್ತದೆ. ಇದನ್ನು ರಾಜ್ಯಮಟ್ಟದಲ್ಲಿ ಸಿದ್ದಪಡಿಸಿಲಾಗುವುದು ಮತ್ತು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕರಿಗಳ ಲಾಗಿನ್ ನಲ್ಲಿ ಲಭ್ಯವಾಗುವಂತೆ, ಶಾಲಾ ಶಿಕ್ಷಣ ಸಂಭಂದಪಟ್ಟ ಉಪನಿರ್ದೇಶಕರು ಲಭ್ಯವಾಗುವಂತೆ ಮಾಡಲಾಗುತ್ತದೆ.
11 ನೇ ತರಗತಿಯ ವಾರ್ಷಿಕ ಪ್ರಶ್ನೆ ಪತ್ರಿಕೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಪಿಯು ಪರೀಕ್ಷಾ ವಿಭಾಗವು ರಾಜ್ಯ ಮಟ್ಟದಲ್ಲಿ ಸಿದ್ದಪಡಿಸುತ್ತದೆ. ವಿದ್ಯಾರ್ಥಿಯು ವಾರ್ಷಿಕ 11 ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಸಂಬಂಧಿತ ವಿಶ್ವವಿದ್ಯಾನಿಲಯ / ಕಾಲೇಜು ಮಟ್ಟದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಅಧಿಸೂಚನೆಯು ಮತ್ತಷ್ಟು ಸೇರಿಸುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ