ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್‌ದಾರರ(BPL card holders) ವಿರುದ್ಧ ಆಹಾರ ಇಲಾಖೆ ದಂಡವನ್ನು ವಸೂಲಿ ಮಾಡುತ್ತಿದೆ. ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದವರ ಪತ್ತೆ ಮಾಡಿ ಲಕ್ಷಾಂತರ ರೂ ದಂಡ ವಿಧಿಸಿದೆ. ಮೃತಪಟ್ಟ ವ್ಯಕ್ತಿ ಹೆಸರುಗಳು ಡಿಲೀಟ್ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ್ದ 72 ಸರ್ಕಾರಿ ನೌಕರರಿಗೆ 4,12,890 ರೂ. ದಂಡ ವಿಧಿಸಲಾಗಿದೆ.
ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕಕರಿಗೆ ದಂಡ :
Illegal BPL Card Fine:// ಇತ್ತೀಚಿನ ದಿನಗಳಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ ವ್ಯಕ್ತಿಗಳನ್ನು ಕಂಡುಹಿಡಿಯುವಲ್ಲಿ ರಾಜ್ಯ ಸರ್ಕಾರವು ಒಂದು ಹೆಜ್ಜೆ ಮುಂದೆ ಇದೆ ಎಂದೆ ಹೇಳಬಹುದು. ರಾಜ್ಯದಾದ್ಯಂತ ಆಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಆಗಿ ಬದಲಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದೆ. ಇದೀಗ ಇದರ ಭಾಗವಾಗಿ ಜಿಲ್ಲಾ ಆಹಾರ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಸಾವಿರಾರು ಕಾರ್ಡ್ ಗಳನ್ನು ಪತ್ತೆ ಮಾಡಿ ಎಪಿಎಲ್‌ಗೆ ಪರಿವರ್ತಿಸುವ ಕೆಲಸ ಮಾಡಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿದ್ದು, ಇವುಗಳಲ್ಲಿ 1.2 ಲಕ್ಷ ಎಪಿಎಲ್, 3.52 ಲಕ್ಷ ಬಿಪಿಎಲ್, 36,000 ಅಂತ್ಯೋದಯ ಕಾರ್ಡ್‌ಗಳಿವೆ. ಕಳೆದ ಏಪ್ರಿಲ್ 1ರಿಂದ ಅಕ್ಟೋಬರ್ 31ರ ವರೆಗೆ 53,342 ಕಾರ್ಡ್‌ಗಳ ಪರಿಶೀಲನೆ ನಡೆಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಜಿಲ್ಲೆಯಲ್ಲೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ(Tax payer’s) ಸಾವಿರಾರು ಕಾರ್ಡ್‌ಗಳನ್ನು ಜಿಲ್ಲಾಆಹಾರ ಇಲಾಖೆ ಎಪಿಎಲ್‌ಗೆ ಬದಲಿಸಿದೆ. ಒಟ್ಟು 2388 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಜಿಲ್ಲಾಆಹಾರ ಇಲಾಖೆ ವರ್ಗಾವಣೆ ಮಾಡಿದೆ. ಮರಣ ಹೊಂದಿದ 70 ಬಿಪಿಎಲ್ ಕಾರ್ಡ್‌ದಾರರ ಹೆಸರನ್ನು ಪಟ್ಟಿಯಿಂದ ರದ್ದುಗೊಳಿಸಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.