ಬಿಪಿಎಲ್ ಕಾರ್ಡ್ ಇದ್ದವರಿಗೆ ಬಂಪರ್ ಗುಡ್ ನ್ಯೂಸ್, ಸಿಗಲಿದೆ ಹೊಸ ಸೌಲಭ್ಯ!

IMG 20240908 WA0005

WhatsApp Group Telegram Group
ಬಿಪಿಎಲ್‌ ಕಾರ್ಡ್ (BPL Card) ಹೊಂದಿರುವ ರಾಜ್ಯದ ಜನತೆಗೆ ಗುಡ್‌ ನ್ಯೂಸ್‌ : ಅಕ್ಕಿ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆಯನ್ನೂ ಉಚಿತವಾಗಿ ನೀಡಲಿದೆ ಸರ್ಕಾರ.

ಅಕ್ರಮ  ಬಿಪಿಎಲ್ ಕಾರ್ಡ್ (BPL card) ಹೊಂದಿದ್ದವರಿಗೆ ಸರ್ಕಾರ ಕಡಿವಾಣ ಹಾಕಿತ್ತು. ಇದರಿಂದ ಅನರ್ಹರಿಗೆ ನೋವುಂಟಾಗಿದ್ದರು ಕೂಡ, ಅರ್ಹ ಫಲಾನುಭವಿಗಳಿಗೆ ಸರಿಯಾದ ನ್ಯಾಯವನ್ನು ದೊರಕಿಸಿದಂತಾಗಿದೆ. ಇದರ ಬೆನ್ನಲ್ಲೇ ಅರ್ಹ ಫಲಾನುಭವಿಗಳಿಗೆ ಸರ್ಕಾರ (government) ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಇದರಿಂದ ಸಾಕಷ್ಟು ಜನತೆಗೆ ಉಪಕಾರವಾಗಲಿದ್ದು ಇದರ ಸದುಪಯೋಗವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಬಹುದು. ಸರ್ಕಾರ ನೀಡಿರುವ ಆ ಬಂಪರ್ ಕೊಡುಗೆ ಯಾವುದು? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ (BPL card) ಹೊಂದಿದ್ದವರಿಗೆ ಸರ್ಕಾರದಿಂದ ಸಾಕಷ್ಟು ಪ್ರಯೋಜನಗಳು ದೊರೆಯುತ್ತಲೇ ಇರುತ್ತವೆ. ಹಾಗೆ ಮುಂದಿನ ತಿಂಗಳಿನಿಂದ ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ಮತ್ತೊಂದು ಪ್ರಯೋಜನ ಸಿಗಲಿದೆ. ಸರ್ಕಾರ ಈಗಾಗಲೇ ತಿಳಿಸಿರುವಂತೆ ಮುಂದಿನ ತಿಂಗಳಿನಿಂದ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆಯನ್ನೂ ಉಚಿತವಾಗಿ ನೀಡಲಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ  (state government ) ಅನ್ನಭಾಗ್ಯ ಯೋಜನೆಯಡಿ  ಅರ್ಹ ಬಿಪಿಎಲ್ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಾರಣಾಂತರಗಳಿಂದ  5 ಕೆಜಿ ಅಕ್ಕಿ ನೀಡಿ, ಇನ್ನುಳಿದ 5 ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೇರವಾಗಿ ಬ್ಯಾಂಕ್ (bank) ಖಾತೆಗೆ ವರ್ಗಾವಣೆ ಮಾಡುತ್ತಿತ್ತು. ಆದರೆ ಇದೀಗ ಹಣದ ಬದಲಾಗಿ ಅಕ್ಕಿಯ ಜೊತೆ ಇನ್ನಿತರೆ ಸಾಮಾನುಗಳನ್ನು ಉಚಿತವಾಗಿ ನೀಡಲು ತೀರ್ಮಾನಿಸಿದೆ.

ಹಣದ ಬದಲಿಗೆ ಯಾವ ದಿನಸಿ ವಸ್ತುಗಳು ದೊರೆಯಲಿವೆ:

ಈಗಾಗಲೇ 5 ಕೆಜಿ ಅಕ್ಕಿಯನ್ನು ನೀಡುತ್ತಿದ್ದು, ಇದರ ಜೊತೆಗೆ ಹಣದ ಬದಲಾಗಿ ಬೇಳೆ, ಎಣ್ಣೆ, ಸಕ್ಕರೆಯನ್ನು ವಿತರಣೆ ಮಾಡಲು ಆಹಾರ ಇಲಾಖೆ (food department) ಈಗಾಗಲೇ ಸಿದ್ಧತೆ ನಡೆಸಿದೆ. ಇದರಿಂದ ಅನೇಕ ಕುಟುಂಬಗಳಿಗೆ ಅನುಕೂಲವಾಗಲಿದ್ದು, ರಾಜ್ಯದ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!