ಮೇ 7ರಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯನ್ನು ನೀಡುತ್ತದೆ. ಚುನಾವಣಾ ಕಾರ್ಯದ ಹಿನ್ನಲೆಯಲ್ಲಿ ಈ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಂಗಳವಾರ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಮೇ 7ರಂದು ಮತದಾನ ನಡೆಯುವ ಜಿಲ್ಲೆಗಳ ವ್ಯಾಪ್ತಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಸ್ ಸೇವೆಯನ್ನು ನೀಡುತ್ತದೆ. ಚುನಾವಣಾ ಕಾರ್ಯದ ಹಿನ್ನಲೆಯಲ್ಲಿ ಈ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ. ದಾವಣಗೆರೆ, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕ ಭಾಗದ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಸೋಮವಾರ ಬೆಳಗ್ಗೆಯೇ ಮಾಸ್ಟರಿಂಗ್ ಸ್ಥಳದಲ್ಲಿ ಬಸ್‌ಗಳು ಇರಲಿವೆ. ಆದ್ದರಿಂದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮೇ 6 ಮತ್ತು 7ರಂದು ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಮತದಾನ ಮುಗಿದು, ಮಯಯಂತ್ರಗಳನ್ನು ಮತ ಎಣಿಕೆ ಕೇಂದ್ರಕ್ಕೆ ಸಾಗಣೆ ಮಾಡಿದ ಬಳಿಕ ಸರ್ಕಾರಿ ಬಸ್‌ಗಳ ಸಾಮಾನ್ಯ ಟ್ರಿಪ್‌ಗಳು ಆರಂಭವಾಗಲಿವೆ.
ಭಾರತೀಯ ರೈಲ್ವೆಯು ಸಹ ಮತದಾನದ ದಿನ ಜನರು ಬೆಂಗಳೂರು ನಗರದಿಂದ ಉತ್ತರ ಕರ್ನಾಟಕ ಭಾಗಕ್ಕೆ ಸಂಚಾರ ನಡೆಸಲು ಮತ್ತು ಬೆಂಗಳೂರಿಗೆ ವಾಪಸ್ ಹೋಗಲು ಅನುಕೂಲವಾಗುವಂತೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.