ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ(All Party Meeting) : ತಮಿಳುನಾಡಿಗೆ (Tamil Nadu)ನಿತ್ಯ 8 ಸಾವಿರ ಕ್ಯುಸೆಕ್ ಕಾವೇರಿ ನೀರು ಹರಿಯಲಿದೆ.
ಕಾವೇರಿ ನದಿಯಲ್ಲಿ ಒಳ ಹರಿವು ಹೆಚ್ಚಿದ್ದರೂ ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ಇಲ್ಲಿಯವರೆಗೂ ಶೇ.63 ರಷ್ಟು ಜಲಾಶಯ ಭರ್ತಿಯಾಗಿದೆ ಅಷ್ಟೇ. ಆದ್ದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ (Karnataka government) ಎಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ನಿರ್ದೇಶನದಂತೆ ಈ ತಿಂಗಳ ಕೊನೆಯವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ ಒಂದು ಟಿಎಂಸಿ ನೀರು ಬಿಡಬೇಕೆಂಬ ಆದೇಶವನ್ನು ನೀಡಿದ್ದರು. ಆದರೆ ಕೇವಲ ಶೇ .63 ರಷ್ಟು ನೀರಿರುವ ಕಾರಣ ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರು ಬಿಡಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 14 ರಂದು ಅಂದರೆ ನೆನ್ನೆ ನೆಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. ಹಾಗಾದರೆ ಒಂದು ಟಿಎಂಸಿ ಬದಲಿಗೆ ಎಷ್ಟು ನೀರನ್ನು ಬಿಡುತ್ತಾರೆ? ಅಥವಾ ಈ ಬಾರಿ ತಮಿಳುನಾಡಿಗೆ ಕಾವೇರಿ ನೀರು ಇದೆಯೋ? ಇಲ್ಲವೋ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Cauvery Dispute: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆಯನ್ನು(All Party Meeting) ಭಾನುವಾರ ಸಂಜೆ ಅಂದರೆ ಜುಲೈ 14 ರಂದು ನಡೆಸಲಾಯಿತು. ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಅಂತಿಮವಾಗಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, 31ರ ವರೆಗೂ 8 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಮುಂಗಾರು ಮಳೆ ಚುರುಕಾಗಿರುವ ಕಾರಣ ರಾಜ್ಯದ ಜಲಾಶಯಗಳಿಗೆ ಒಳಹರಿವು ಉತ್ತಮವಾಗಿದೆ. ನಾಲ್ಕು ಜಲಾಶಯಗಳ ಪೈಕಿ ಹಾರಂಗಿ ಶೇ 76%, ಕಬಿನಿ ಶೇ 96%, ಹೇಮಾವತಿ ಶೇ 56%, ಕೆಆರ್‌ಎಸ್ ಶೇ 54% ರಷ್ಟು ನೀರು ಭರ್ತಿಯಾಗಿದೆ. ಒಟ್ಟಾರೆಯಾಗಿ ಶೇಕಡ 63% ರಷ್ಟು ಮಾತ್ರ ಭರ್ತಿ ಆಗಿದೆ. ಇನ್ನು ಜಲಾಶಯ ಬೇಗ ತುಂಬಲಿ ಎಂದು ಜನರು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆಯೇ ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ ಹೇಳಿದೆ. ಆದರೆ ಜುಲೈ 12 ರಂದು 20 ಸಾವಿರ, 13ರಂದು 19 ಸಾವಿರ, ಹಾಗೂ ನೆನ್ನೆ (ಜುಲೈ14) 13 ಸಾವಿರ ಕ್ಯುಸೆಕ್ ನೀರಿನ ಒಳ ಹರಿವು ಇತ್ತು.ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಈಗಾಗಲೇ ಹರಿದುಹೋಗಿದೆ.
2024ರ ಜುಲೈ 11ರಂದು ನಡೆದಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ ಮೂರನೇ ಸಭೆಯಲ್ಲಿ ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಅಂತ್ಯದವರೆಗೂ ಸುಮಾರು 20 ದಿನ 1ಟಿಎಂಸಿ ನೀರನ್ನು ಪ್ರತೀ ದಿನ ಬಿಡಬೇಕು. ಒಟ್ಟು 20 ದಿನಕ್ಕೆ 20 ಟಿಎಂಸಿ ನೀರು ಬಿಡಲು ಆದೇಶಿಸಿದ್ದರು. ಸಾಮಾನ್ಯವಾಗಿ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 ಟಿಎಂಸಿ, ಜುಲೈ ನಲ್ಲಿ 31.24 ಟಿಎಂಸಿ ನೀರು ಬಿಡಬೇಕಾಗಿದೆ. ಒಟ್ಟಾರೆಯಾಗಿ 40.43 ಟಿಎಂಸಿ ಬಿಡಬೇಕಾಗಿದೆ. ಈಗಾಗಲೇ ತಮಿಳುನಾಡಿಗೆ 5 ಟಿಎಂಸಿ ಗೂ ಹೆಚ್ಚು ನೀರನ್ನು ಬಿಟ್ಟಿದ್ದೇವೆ. ಆದರೆ ಇನ್ನು ಮುಂದೆ ನಮ್ಮಿಂದ 1ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಿಯಂತ್ರಣಾ ಸಮಿತಿ ಶಿಫಾರಸು ಹಿನ್ನೆಲೆಯಲ್ಲಿ ಜುಲೈ 14 ರಂದು ವಿಧಾನಸೌಧದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, ಆಡಳಿತ ಹಾಗೂ ಪ್ರತಿಪಕ್ಷಗಳ ಘಟಾನುಘಟಿ ನಾಯಕರು ಸಭೆಯಲ್ಲಿ ಸೇರಿದ್ದರು. ಎಲ್ಲಾ ನಾಯಕರ ಒಪ್ಪಿಗೆಯ ಮೇರೆಗೆ ಎರಡು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ನಿರ್ಣಯ – 1
ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರ ಸಲಹೆ ಮೇರೆಗೆ ತಮಿಳುನಾಡಿಗೆ 1 ಟಿಎಂಸಿ ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನಿಸಲಾಗಿದೆ.
ನಿರ್ಣಯ – 2
ನಿಯಂತ್ರಣಾ ಸಮಿತಿ ಆದೇಶ ನೀಡಿದಂತೆ 1 ಟಿಎಂಸಿ ಕಾವೇರಿ ನೀರು ಬಿಡಬೇಕು ಎಂಬ ಆದೇಶಕ್ಕೆ ವಿರುದ್ಧವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿ (CWMA) ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ.
ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ವಪಕ್ಷಗಳ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರಿಗೆ ಬದಲಾಗಿ, 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ ಕೈಗೊಳ್ಳಲಾಗಿದೆ. ಮಳೆ ಕಡಿಮೆ ಆದರೆ ಈಗ ಬಿಡುವ 8 ಸಾವಿರ ಕ್ಯುಸೆಕ್ ನೀರಿನಲ್ಲೂ ಕಡಿಮೆ ಮಾಡುತ್ತೇವೆ, ಒಂದು ವೇಳೆ ಮಳೆ ಜಾಸ್ತಿ ಆದಲ್ಲಿ ಎಷ್ಟು ಬಿಡಬೇಕೋ ಅಷ್ಟು ನೀರು ಬಿಡ್ತೀವಿ. ಅಲ್ಲದೇ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶಕ್ಕೆ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಕಾವೇರಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಸಚಿವ ಸಂಪುಟದ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಲ ಸಂಪನ್ಮೂಲ ಇಲಾಖೆ ಹೆಚ್ಖುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮೋಹನ್ ಕಾತರಕಿ, ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರು ಸಭೆಯಲ್ಲಿದ್ದರು. ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಗೈರಾಗಿದ್ದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.