Job Alert : ಸೆಂಟ್ರಲ್ ಬ್ಯಾಂಕನಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ! ಅರ್ಜಿ ಹಾಕಿ

IMG 20240911 WA0000

ಈ ವರದಿಯಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (CBI recruitment-2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (CBI recruitment-2024) ಅವಲೋಕನ :

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) 2024

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI 2024) ಈ ವರ್ಷವೂ ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆಹೊರಡಿಸಿದೆ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI) ಈ ಬಾರಿ 13 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI) 2024 ಮೂಲಕ ಬ್ಯಾಂಕ್ ಫ್ಯಾಕಲ್ಟಿ, ಆಫೀಸ್ ಅಸಿಸ್ಟೆಂಟ್, ಅಟೆಂಡರ್ ಮತ್ತು ವಾಚ್‌ಮ್ಯಾನ್/ಗಾರ್ಡನರ್  13 ಖಾಲಿ ಇರುವ ವಿವಿಧ ಪೋಸ್ಟ್‌ಗಳ  ನೇಮಕಾತಿಗಾಗಿ ಆನ್‌ಲೈನ್ ಮುಖಾಂತರ ನೋಂದಣಿ (Online registration) ಮಾಡಬಹುದಾಗಿದೆ. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.

ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :

ಇಲಾಖೆ ಹೆಸರು  – ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI)
ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 13
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ –ಭಾರತ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI recruitment-2024) ಖಾಲಿ ಇರುವ ಹುದ್ದೆಗಳ ವಿವರ:

ಅಧ್ಯಾಪಕರು 3
ಕಚೇರಿ ಸಹಾಯಕ 5
ಅಟೆಂಡೆಂಟ್ 3
ಚೌಕಿದಾರ್ 2
ಒಟ್ಟು 13 ಹುದ್ದೆಗಳು

ವಿದ್ಯಾರ್ಹತೆ :

ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಮ್ಮ ರಾಜ್ಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಯಾವುದೇ ವಿಷಯದಲ್ಲಾದರೂ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇದರೊಂದಿಗೆ ಕಂಪ್ಯೂಟರ್‌ ನಲ್ಲಿ ಉತ್ತಮ ಜ್ಞಾನವನ್ನು ಹೊಂದಿರಬೇಕು. ಅಭ್ಯರ್ಥಿಗೆ ಸ್ಥಳೀಯ ಭಾಷೆ ಸುಲಲಿತವಾಗಿ ಮಾತನಾಡಲು ಬರುತ್ತಿರಬೇಕು. ಉತ್ತಮ ಸಂವಹನ ಮಾಡುವ ಕೌಶಲ್ಯದ ಜೊತೆಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆ ಗೊತ್ತಿರಬೇಕು ಎಂದು ತಿಳಿಸಲಾಗಿದೆ.

ಅದೇ ರೀತಿ ಕಂಪ್ಯೂಟರ್ ಸೈನ್ಸ್‌ ಪದವಿ, ಅಕೌಂಟೆಂಟ್ ಜ್ಞಾನ, ಟ್ಯಾಲಿ ಗೊತ್ತಿರಬೇಕು.ಇಲ್ಲಿ ಏಳನೇ ತರಗತಿ ಉತ್ತೀಣದಿಂದ ಹಿಡಿದು ಪದವಿವರೆಗಿನವರಿಗೆ ಆಹಾಯ ಅರ್ಹತೆಗೆ ತಕ್ಕ ಕೆಲಸ ಇದೆ. ನೋಡಿಕೊಂಡು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಹಾಗೂ ಗರಿಷ್ಠ ವಯಸ್ಸಿನ ಮಿತಿ 40 ವರ್ಷ ಇರಬೇಕು.

ಸಂಬಳದ ಪ್ಯಾಕೆಜ್ ಎಷ್ಟು?

ಅಧ್ಯಾಪಕರ ಹುದ್ದೆಗೆ ಮಾಸಿಕ 30000 ರೂ,ವೇತನ ನೀಡಲಾಗುತ್ತದೆ.
ಕಚೇರಿ ಸಹಾಯಕ ಹುದ್ದೆಗೆ 20000 ರೂ.ವೇತನ ನೀಡಲಾಗುತ್ತದೆ.
ಅಟೆಂಡೆಂಟ್ ಹುದ್ದೆಗೆ 14000 ರೂ. ವೇತನ ನೀಡಲಾಗುತ್ತದೆ.
ಚೌಕಿದಾರ್/ತೋಟಗಾರ ಹುದ್ದೆಗೆ 12000 ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :

ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ(No written test), ಸಂದರ್ಶನದ (Interview) ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಯನ್ನು ಹೀಗೆ ಸಲ್ಲಿಸಿ :

ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
centralbankofindia.co.in

ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ,  ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ ಅನ್ವಯಿಸದಲ್ಲಿ.

ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಸೆಪ್ಟಂಬರ್ 15

ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!