ಸೆಂಟ್ರಲ್ ಪೊಲ್ಯೂಶನ್ ಕಂಟ್ರೋಲ್ ಬೋರ್ಡ್ (CPCB) ನೇಮಕಾತಿ 2025 (Central Pollution Control Board (CPCB) Recruitment 2025) ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರತ ಸರ್ಕಾರದ ಸೆಂಟ್ರಲ್ ಪೊಲ್ಯೂಶನ್ ಕಂಟ್ರೋಲ್ ಬೋರ್ಡ್ (CPCB) ಸಂಸ್ಥೆಯು 2025ರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನೇಮಕಾತಿಯಲ್ಲಿ ಒಟ್ಟು 69 ಹುದ್ದೆಗಳಿವೆ, ಇದರಲ್ಲಿ ಸೈಂಟಿಸ್ಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಅಸಿಸ್ಟಂಟ್, ಅಕೌಂಟ್ ಅಸಿಸ್ಟಂಟ್ ಮುಂತಾದ ಹುದ್ದೆಗಳಿವೆ. ಅರ್ಜಿ ಸಲ್ಲಿಸುವ ಇಚ್ಛೆಯುಳ್ಳ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಬಹುದು. ಕೊನೆಯ ದಿನಾಂಕ ಏಪ್ರಿಲ್ 28 ಆಗಿರುತ್ತದೆ.
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸೈಂಟಿಸ್ಟ್ ‘ಬಿ’- 22 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ
ಸಹಾಯಕ ಕಾನೂನು ಅಧಿಕಾರಿ- 1 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ
ಸೀನಿಯರ್ ಟೆಕ್ನಿಕಲ್ ಸೂಪರ್ ವೈಸರ್- 2 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್ – 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಟೆಕ್ನಿಕಲ್ ಸೂಪರ್‌ವೈಸರ್- 5 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್
ಅಸಿಸ್ಟೆಂಟ್ – 4 ಹುದ್ದೆ, ವಿದ್ಯಾರ್ಹತೆ: ಪದವಿ
ಅಕೌಂಟ್ಸ್ ಅಸಿಸ್ಟೆಂಟ್- 2 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಟ್ರಾನ್ಸ್‌ಲೇಟರ್ – 1 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಸೀನಿಯರ್ ಡ್ರಾಫ್ಟ್‌ಮ್ಯಾನ್ 1 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್
ಜೂನಿಯರ್ ಟೆಕ್ನಿಷಿಯನ್ – 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ
ಸೀನಿಯರ್ ಲ್ಯಾಬೊರೇಟರಿ ಅಸಿಸ್ಟೆಂಟ್ – 2 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಅಪ್ಪರ್ ಡಿವಿಷನ್ ಕ್ಲರ್ಕ್ – 8 ಹುದ್ದೆ, ವಿದ್ಯಾರ್ಹತೆ: ಪದವಿ
ಡೇಟಾ ಎಂಟ್ರಿ ಆಪರೇಟರ್ ಗ್ರೇಡ್-2 – 1 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಸ್ಟೆನೋಗ್ರಾಫರ್ ಗ್ರೇಡ್-2 – 3 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಜೂನಿಯರ್ ಲ್ಯಾಬೊರೇಟರಿ ಅಸಿಸ್ಟೆಂಟ್ – 2 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಲೋವರ್ ಡಿವಿಷನ್ ಕ್ಲರ್ಕ್ 5 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಫೀಲ್ಡ್ ಅಟೆಂಡೆಂಟ್ 1 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) – 3 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ. ಜತೆಗೆ ಕಾರ್ಯಾನುಭವ ಇರಬೇಕು.
ವಯೋಮಿತಿ :
18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿ ಆದೇಶಗಳ ಪ್ರಕಾರ:
ಓಬಿಸಿ ಅಭ್ಯರ್ಥಿಗಳಿಗೆ: 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ.
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ ಸಡಿಲಿಕೆ.
ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ: 10-15 ವರ್ಷ ಸಡಿಲಿಕೆ.
ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಹಿಳಾ ಅಭ್ಯರ್ಥಿಗಳು: ಉಚಿತ
ಇತರ ಅಭ್ಯರ್ಥಿಗಳು: 1,000 ರೂ.
ಅರ್ಜಿ ಸಲ್ಲಿಕೆ ವಿಧಾನ:
- CPCB ಅಧಿಕೃತ ವೆಬ್ಸೈಟ್ https://cpcb.nic.in/ ಗೆ ಭೇಟಿ ನೀಡಿರಿ.
- Recruitment ವಿಭಾಗಕ್ಕೆ ಹೋಗಿ, ಸಂಬಂಧಿತ ಅಧಿಸೂಚನೆಯನ್ನು ಓದಿ.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ (ಯಾರಿಗೆ ಅನ್ವಯವಿದೆಯೋ ಎಂಬುದನ್ನು ಪರಿಶೀಲಿಸಿ) ಪಾವತಿಸಿ.
- ಅರ್ಜಿ ಸಲ್ಲಿಸಿದ ನಂತರ ಅದನ್ನು ಡೌನ್‌ಲೋಡ್ ಮಾಡಿಕೊಂಡು ಭವಿಷ್ಯಕ್ಕಾಗಿ ಕಾಪಿ ಇಡಿಕೊಳ್ಳಿ.
ಕೊನೆಯದಾಗಿ ಹೇಳುವುದಾದರೆ, CPCB ನೇಮಕಾತಿ 2025 ಸರ್ಕಾರದ ಪ್ರಮುಖ ಉದ್ಯೋಗಾವಕಾಶಗಳಲ್ಲಿ ಒಂದು. ಪರಿಸರ ಮಾಲಿನ್ಯ ನಿಯಂತ್ರಣದಂತಹ ಮಹತ್ವದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಇದು ಅತ್ಯುತ್ತಮ ಅವಕಾಶ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸರಿಯಾದ ಸಮಯದಲ್ಲಿ ಸಲ್ಲಿಸಿ, ಈ ಉತ್ತಮ ಅವಕಾಶವನ್ನು ಬಳಸಿಕೊಳ್ಳಬೇಕು.ನಿಗದಿ ಮಾಡಿದ ಅಂತಿಮ ದಿನಾಂಕದೊಳಗೆ ಅರ್ಜಿ ಸಲ್ಲಿಸಿ,ಮತ್ತು ಇಂತಹ ಉತ್ತಮವಾದ ಮಾಹಿತಿಯನ್ನು ನೀವು ತಿಳಿದಮೇಲೆ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.