Home Loan – ಮನೆ ಕಟ್ಟಿಸಲು ಕೇಂದ್ರದಿಂದ ಸಾಲ & ಸಹಾಯಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

pmay

ಎಲ್ಲರಿಗೂ ನಮಸ್ಕಾರ, ಇಂದಿನ ವರದಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಬಗ್ಗೆ ತಿಳಿದುಕೊಳ್ಳೋಣ, ದೇಶದಲ್ಲಿ ಆರ್ಥಿಕವಾಗಿ ದುರ್ಬಲ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಗೃಹ ಸಾಲಗಳ ಮೇಲೆ ಬಡ್ಡಿ ರಹಿತ ಸಬ್ಸಿಡಿಗಳನ್ನು ನೀಡಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 

ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY)

ಈ ಯೋಜನೆಯು ದೇಶದ ಹಲವು ಕುಟುಂಬಗಳಿಗೆ ಮನೆ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುತ್ತಿದೆ. ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಮನೆ ಖರೀದಿಸಲು ಸರ್ಕಾರವು ಮೊದಲ ಬಾರಿಗೆ 2.67 ಲಕ್ಷ ರೂಪಾಯಿಗಳ ಸಹಾಯ ಧನವನ್ನು ನೀಡುತ್ತದೆ. ಇದರಿಂದಾಗಿ ಜನರು ತಮ್ಮ ಕನಸಿನ ಮನೆಯನ್ನು ಸುಲಭವಾಗಿ ಖರೀದಿಸಬಹುದು ಮತ್ತು ಕಟ್ಟಿಕೊಳ್ಳಬಹುದು. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಈ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ.

Pradhan Mantri Awas Yojana Urban PMAY U logo

ಈ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. PMAY ಯೋಜನೆಯಡಿ ಪ್ರಯೋಜನ ಪಡೆಯುವ ಗಡುವನ್ನು ಕೇಂದ್ರ ಸರ್ಕಾರವು 2024ರ ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ವಿವರ

ಅಧಿಕೃತ ವೆಬ್‌ಸೈಟ್https://pmaymis.gov.in/
ಪ್ರಾರಂಭ ದಿನಾಂಕ2015ರ ಜೂನ್ 25
ಟೋಲ್ ಫ್ರೀ ಸಂಖ್ಯೆಗಳು1800-11-6163 – ಹುಡ್ಕೋ1800 11 3377, 1800 11 3388 – NHB
ಸಲಹೆಗಳು, ದೂರುಗಳಿಗಾಗಿ[email protected]
ಕಚೇರಿ ವಿಳಾಸವಸತಿ, ನಗರ ವ್ಯವಹಾರಗಳ ಸಚಿವಾಲಯ, ನಿರ್ಮಾಣ್ ಭವನ, ನವದೆಹಲಿ – 110011
ಸಂಪರ್ಕ ಸಂಖ್ಯೆ011 2306 3285, 011 2306 0484
ಇಮೇಲ್[email protected]
ಗುರಿಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವುದು

 

ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಎರಡು ವಿಧ

– ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ

– ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಯೋಜನೆಯನ್ನು ಈ ಹಿಂದೆ ಇಂದಿರಾ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು. ಮಾರ್ಚ್ 2016 ರಲ್ಲಿ ಹೆಸರು ಬದಲಾಯಿಸಲಾಯಿತು.

ಅರ್ಹತೆ ಅಥವಾ ಷರತ್ತುಗಳು :

ಈ ಯೋಜನೆಯನ್ನು ಬಳಸುವ ಪ್ರಮುಖ ಷರತ್ತು ಎಂದರೆ ಅರ್ಜಿದಾರರಿಗೆ ಒಮ್ಮೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ನೀವು ಮೊದಲ ಬಾರಿಗೆ ತಪ್ಪು ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುತ್ತಿದ್ದರೆ, ಈ ಯೋಜನೆಯ ಪ್ರಯೋಜನಗಳನ್ನು ನೀವು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಅರ್ಜಿಯನ್ನು ಬಹಳ ಎಚ್ಚರಿಕೆಯಿಂದ ಸಲ್ಲಿಸಬೇಕು. PMAY ಯೋಜನೆಯಡಿ, ಎಲ್ಲಾ ಫಲಾನುಭವಿಗಳಿಗೆ ಕೇವಲ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತದೆ. ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ, ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಸಲಾಗುತ್ತದೆ. ಈ ಯೋಜನೆಯು ದೇಶದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯಿಸುತ್ತದೆ. ಮೂರು ಹಂತಗಳಲ್ಲಿ ನಗರ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ

ಫಲಾನುಭವಿಗಳು ಯಾರು?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಬಿಪಿಎಲ್ ಕಾರ್ಡ್ ಹೊಂದಿರುವವರು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರು ಅರೆಸೇನಾ ಪಡೆಗಳು, ವಿಧವೆಯರು, ಮಾಜಿ ಸೈನಿಕರು, ನಿವೃತ್ತಿ ಯೋಜನೆಯಡಿಯಲ್ಲಿರುವವರು.

ಅರ್ಜಿ ಸಲ್ಲಿಸುವುದು ಹೇಗೆ?

ವಸತಿ ನಗರಾಭಿವೃದ್ಧಿ ಸಚಿವಾಲಯದ ಅಧಿಕೃತ ವೆಬ್ಸೈಟ್ ಮೂಲಕ ನಾವು ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು, ಸಲ್ಲಿಸುವ ಹಂತಗಳು ಈ ಕೆಳಗಿನಂತೆ ಇದೆ

ಇಲ್ಲಿ ಕೊಡಲಾದ ಅಧಿಕೃತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ https://pmaymis.gov.in/open/Check_Aadhar_Existence.aspx?comp=b

ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಆಧಾರ್ ಸಂಖ್ಯೆಯನ್ನು ಪರಿಶೀಲಿಸಿದ ನಂತರ ಮುಂದಿನ ಪುಟಕ್ಕೆ ಹೋಗಿ.

0111

ಮುಂದುವರೆದು ನಿಮ್ಮ ಎಲ್ಲಾ ವೈಯಕ್ತಿಕ ಮಾಹಿತಿ ಮತ್ತು ಎಲ್ಲಾ ದಾಖಲೆ ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.

ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಎಲ್ಲಾ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

One thought on “Home Loan – ಮನೆ ಕಟ್ಟಿಸಲು ಕೇಂದ್ರದಿಂದ ಸಾಲ & ಸಹಾಯಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

  1. ಇಷ್ಟು ಚಂದದ ಫ್ರೆಶ್ ನ್ಯೂಸ್ koduva nimage ಮೆನಿ ಮೇನಿ ಥ್ಯಾಂಕ್ಸ್

Leave a Reply

Your email address will not be published. Required fields are marked *

error: Content is protected !!