ರಾಜಕೀಯ ವಲಯದಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಏನು ಈ ಚರ್ಚೆ?, ಸಿಎಂ ಬದಲಾಗುತ್ತಾರ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ನಮ್ಮ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ಚೇಂಜ್ ಆಗ್ತಾರಾ?:
ಮುಂದಿನ 5 ವರ್ಷವೂ ನಾನೇ ಸಿಎಂ (CM) ಆಗಿರುತ್ತೇನೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ (Siddaramaiah) ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಹೌದು, ಹೊಸಪೇಟೆಯಲ್ಲಿ ನಡೆಯುತ್ತಿರುವ ಸಿಎಂ ಬದಲಾವಣೆ ವಿಚಾರದಲ್ಲಿ ಈ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿರಲಿದ್ದೇನೆ, ಮಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸಪೇಟೆಯಲ್ಲಿ 34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿವಿಧ ಇಲಾಖೆಗಳ ನೂತನ ಕಟ್ಟಡಗಳ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಸಿಎಂ ಬದಲಾವಣೆ ಕುರಿತಾದ ವದಂತಿ ಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಹೀಗೆ ಹೇಳಿದರು.
ಮುಂದಿನ 5 ವರ್ಷ ನಮ್ದೇ ಸರ್ಕಾರ ಇರುತ್ತೆ. ಡಿಸಿಎಂ ವಿಚಾರ ತಿರ್ಮಾನ ಮಾಡೋದು ಹೈಕಮಾಂಡ್. ನಮ್ಮದು ನ್ಯಾಷನಲ್ ಪಾರ್ಟಿ. ಏನೇ ತೀರ್ಮಾನ ಆದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗೋದು ಎಂದು ಉತ್ತರಿಸಿದರು. ಡಿಸಿಎಂ ಹೈಕಮಾಂಡ್ ತೀರ್ಮಾನ ಇನ್ನು ಸಿಎಂ ವಿಚಾರವನ್ನು ಹೈಕಮಾಂಡ್ ತಿರ್ಮಾನ ಮಾಡುತ್ತದೆ. ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಇದ್ದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿನೇ ಮಾಡೋದು ಎಂದರು.
ಇದನ್ನೂ ಓದಿ – Lava Mobile – ಬರೀ 9,999/- ಕ್ಕೆ ಲಾವಾದ ಹೊಸ 5G ಮೊಬೈಲ್, ಇಲ್ಲಿದೆ ಕಂಪ್ಲೀಟ್ ಮಾಹಿತಿ
ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು
ಇದೇ ವೇಳೆ ಬಿಜೆಪಿ ವಿರುದ್ಧ ಮಾತನಾಡಿ, ಬಿಜೆಪಿ ಪಕ್ಷ ಅಧಿಕಾರ ಇಲ್ಲದೆ ಇರಲು ಆಗುತ್ತಿಲ್ಲ. ಹಾಗಾಗಿ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ರಮೇಶ್ ಜಾರಕಿಹೊಳಿ ಸರಕಾರ ಬೀಳುತ್ತೆ ಎನ್ನುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಸೋತಿದ್ದಾರೆ, ಬೇರೆ ಕೆಲಸ ಇಲ್ಲದ್ದೇ ಬಾಯಿಗೆ ಬಂದಂಗೆ ಮಾತಾಡ್ತಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರಕಾರ ಕೊಡುತ್ತೇವೆ. ಬಿಜೆಪಿ ಭ್ರಮ ನಿರಸವಾಗಿದ್ದಾರೆ, ಅವರಿಗೆ ಅಧಿಕಾರ ಇಲ್ಲದೆ ಇರೋಕೆ ಆಗಲ್ಲ. ಮತ್ತೆ ಅಪರೇಷನ್ ಮಾಡೋಕೆ ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದರು.
ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಬದಲಾವಣೆ ಚರ್ಚೆಗೆ ಪೂರ್ಣ ವಿರಾಮ ಹಾಕಿದ್ದಾರೆ.
ಇದನ್ನೂ ಓದಿ – SC/ST ವರ್ಗದವರಿಗೆ ಸಾಲ & ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ