ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (Fasal Bima Scheme) ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ.
ರೈತರೇ ನಮ್ಮ ದೇಶದ ಬೆನ್ನೆಲುಬು. ಹೀಗಿರುವಾಗ ನಮ್ಮ ರೈತರಿಗೆ ಬೆಳೆಯಲ್ಲಿ ನಷ್ಟವಾದರೆ ರೈತರಿಗೆ ದಿಕ್ಕೇ ತೋಚದಂತಾಗುತ್ತದೆ. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಆದ್ದರಿಂದ 2024 -25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆವಿಮೆ (crop insurance) ನೋಂದಣಿ ಮಾಡಿಕೊಳ್ಳಲು ಕರ್ನಾಟಕ ಸರ್ಕಾರವು ಸೂಚಿಸಿದೆ. ಯಾವೆಲ್ಲ ಬೆಳೆಗಳಿಗೆ ವಿಮೆ ಮಾಡಿಸಬೇಕು? ಕೊನೆಯ ದಿನಾಂಕ ಯಾವಾಗ? ಎಂಬ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, ಸಹಾಯಕ ಕೃಷಿ ನಿದೇರ್ಶಕರಾದ ನಾಗೇಂದ್ರ ಶ್ರೀ ರಂಗೇಗೌಡರವರು (Nagendra Sri Rangegowda) ಈ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(Fasal Bima Scheme) ಯೋಜನೆಯಡಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿಯನ್ನು ಪ್ರಾರಂಭಿಸಿದ್ದು, ರೈತರು ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದ್ದಾರೆ.
ಯಾವೆಲ್ಲ ಬೆಳೆಗಳಿಗೆ ವಿಮೆ ಮಾಡಿಸಬಹುದು :
ರಾಗಿ (ಮುಂಗಾರು)
ನವಣೆ (ಮುಂಗಾರು)
ಹುರುಳಿ (ಮುಂಗಾರು)
ನೆಲಗಡಲೆ ( ನೀರಾವರಿ / ಮುಂಗಾರು )
ಸಜ್ಜೆ ( ನೀರಾವರಿ / ಮುಂಗಾರು )
ತೊಗರಿ (ಮುಂಗಾರು)
ಭತ್ತ ( ನೀರಾವರಿ / ಮುಂಗಾರು )
ಈ ಮೇಲಿನ ಎಲ್ಲಾ ಬೆಳೆಗಳಿಗೂ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಕೃಷಿ ಬೆಳೆಗಳಿಗೆ ವಿಮೆ ನೋಂದಣಿಯನ್ನು ಮಾಡಿಸಬಹುದು.
ಬೆಳೆ ವಿಮೆಗೆ ಹೇಗೆ ನೋಂದಣಿ ಮಾಡಿಕೊಳ್ಳಬೇಕು?
ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಹಾಗೂ ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಇಲ್ಲವಾದರೆ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಯ ಮೊ.8277472721 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
ಗಮನಿಸಿ :
ಬೆಳೆಗಳಿಗೆ ವಿಮೆ ಮಾಡಿಸಲು 16 – 08- 2024 ಕೊನೆಯ ದಿನವಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.