ರೈತರಿಗೆ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ; ಇಲ್ಲಿದೆ ಮಾಹಿತಿ

IMG 20240915 WA0003

ಬ್ಯಾಂಕ್ ಗಳಲ್ಲಿ ಸಿಬಿಲ್ ಸ್ಕೋರ್ ಇಲ್ಲದೇ  10 ಲಕ್ಷ ರೂ.ವರೆಗೆ ಸಾಲ ವಿತರಿಸಬೇಕು: ಪ್ರಹ್ಲಾದ್ ಜೋಶಿ

ರೈತನೇ ನಮ್ಮ ದೇಶದ ಬೆನ್ನೆಲುಬು. ರೈತರು (Farmers) ಬೆಳೆಯನ್ನು ಬೆಳೆಯಲು ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರೈತ ಬ್ಯಾಂಕುಗಳ ಮೊರೆ ಹೋಗುತ್ತಾನೆ. ಬ್ಯಾಂಕಗಳಿಂದ ಬೆಳೆಸಾಲ(crop loan) ಹೀಗೆ ಇನ್ನಿತರೆ ಸಾಲಗಳನ್ನು ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇಟ್ಟುಕೊಂಡಿರುತ್ತಾನೆ. ಆದರೆ ಬ್ಯಾಂಕ್ ಗಳಲ್ಲಿ ಸಾಲವನ್ನು ಪಡೆದುಕೊಳ್ಳಲು ಕೆಲವೊಂದಷ್ಟು ನೀತಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕೆಲವು ಬ್ಯಾಂಕ್ (Bank) ಗಳು ಸಿಬಿಲ್ ಸ್ಕೋರ್ ಪರಿಶೀಲಿಸಿ ಸಾಲವನ್ನು ನೀಡುತ್ತವೆ. ಆದರೆ ಆರ್.ಬಿ.ಐ ಮಾರ್ಗಸೂಚಿಗಳ ಪ್ರಕಾರ ರೈತರಿಗೆ 10 ಲಕ್ಷ ರೂ. ವರೆಗೆ ಬೆಳೆಸಾಲವನ್ನು ಯಾವುದೇ ತಕರಾರು ಇಲ್ಲದೆ ನೀಡಬೇಕು. ಈ ಮಾರ್ಗಸೂಚಿಗಳನ್ನು ಎಲ್ಲಾ ಬ್ಯಾಂಕ್ ಗಳು ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೌದು, ರೈತರು ಸಂಕಷ್ಟದಲ್ಲಿದ್ದರೂ ಕೂಡ ರೈತರಿಗೆ ಬೆಳೆಸಾಲವನ್ನು ನೀಡಲು ಕೆಲವು ಬ್ಯಾಂಕ್ ಗಳು ಅನಗತ್ಯವಾಗಿ ರೈತರಿಗೆ ಸಿಬಿಲ್ ರೇಟ್ (Cibil rate) ಕಡ್ಡಾಯ ಮಾಡುತ್ತಿವೆ. ಇದರಿಂದ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ಮುಖ್ಯವಾಗಿ ರೈತರಿಗೆ ಹಾಗೂ ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವವನ್ನು ಬೀರುತ್ತಿದೆ. ಆದ್ದರಿಂದ ಯಾವುದೇ ಬ್ಯಾಂಕ್(Bank) ಆದರೂ ಕೂಡ ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ (Prahalad Joshi) ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮತಿ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ಕೇಂದ್ರ ಸರ್ಕಾರವು ಸ್ವಯಂ ಉದ್ಯೋಗಕ್ಕೆ (Own business) ಆದ್ಯತೆಯನ್ನು ನೀಡುತ್ತಿದೆ. ಕೇಂದ್ರ ಸರ್ಕಾರ (central government) ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು. ಇದರ ಜೊತೆಯಲ್ಲಿ ಬ್ಯಾಂಕ್ ಗಳು ಕೂಡ ನಿಗದಿತ ಗುರಿಗೆ ಅನುಗುಣವಾಗಿ ಸಾಲವನ್ನು ಬಿಡುಗಡೆ ಮಾಡಬೇಕು. ರೈತರಿಗೆ ರೂ.10 ಲಕ್ಷದವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಂಕ್ ಗಳು ಪಾಲನೆ ಮಾಡಬೇಕು. ಸರಿಯಾದ ಕಾಲಮಿತಿಯೊಳಗೆ ಪ್ರಗತಿ ಸಾಧಿಸಬೇಕು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಭುದೇವ ಎನ್.ಜಿ. ಅವರು ಮಾತನಾಡಿ, ಕೃಷಿ ಬೆಳೆ ಸಾಲವು ಜೂನ್ 2024 ರ ಅಂತ್ಯಕ್ಕೆ 610.8 ಕೋಟಿ ರೂ. ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 650.34 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಮತ್ತು ಶೇ.106.47 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ. ಕೃಷಿ ಅವಧಿ ಸಾಲವು ಜೂನ್ 2024 ರ ಅಂತ್ಯಕ್ಕೆ 615.66 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 641.57 ಕೋ.ರೂ.ಗಳಷ್ಟು ಸಾಧನೆಯಾಗಿದೆ. ಶೇ. 104.18 ರಷ್ಟು ತ್ರೈಮಾಸಿಕ ಗುರಿಗೆ ಸಾಧನೆಯಾಗಿದೆ ಎಂದರು.
ಸೂಕ್ಷ್ಮ , ಸಣ್ಣ, ಹಾಗೂ ಮಧ್ಯಮ ಉದ್ಯಮಗಳು ಜೂನ್ 2024 ರ ಅಂತ್ಯಕ್ಕೆ 2357.81 ಕೋ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 3312.98 ಕೋ.ರೂ.ಗಳಷ್ಟು ಸಾಧನೆಯಾಗಿದೆ. ಶೇ.140.51 ರಷ್ಟು ತ್ರೈಮಾಸಿಕ ಗುರಿಗೆ ಶೇಕಡಾವಾರು ಸಾಧನೆಯಾಗಿದೆ.
ಇತರೆ ಆಧ್ಯತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 180.23 ಕೋಟಿ.ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 147.8 ಕೋಟಿ.ರೂ. ಗಳಷ್ಟು ಸಾಧನೆಯಾಗಿದೆ. ಮತ್ತು ಶೇ 82.01 ರಷ್ಟು ತ್ರೈಮಾಸಿಕ (Three months) ಗುರಿಗೆ ಶೇಕಡಾವಾರು ಸಾಧನೆಯಾಗಿದೆ.
ಆಧ್ಯತಾ ರಹಿತಾ ವಲಯದಲ್ಲಿ ಜೂನ್ 2024 ರ ಅಂತ್ಯಕ್ಕೆ 1828.76 ಕೋಟಿ ರೂ.ಗಳಷ್ಟು ಗುರಿಯನ್ನು ಹೊಂದಿದ್ದು, ಜೂನ್ 2024 ರ ಅಂತ್ಯಕ್ಕೆ 2701.13 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ. ಶೇ.147.7 ರಷ್ಟು ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ.
ಒಟ್ಟಾರೆಯಾಗಿ ಜೂನ್ 2024 ರ ಅಂತ್ಯಕ್ಕೆ 5593.26 ಕೋಟಿ ರೂ.ಗಳ ಗುರಿಯನ್ನು ಹೊಂದಿದ್ದು, 2024 ರ ಅಂತ್ಯಕ್ಕೆ 7453.82 ಕೋಟಿ ರೂ.ಗಳಷ್ಟು ಸಾಧನೆಯಾಗಿದೆ.133.26 ತ್ರೈಮಾಸಿಕ ಗುರಿಯ ಶೇಕಡಾವಾರು ಸಾಧನೆಯಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಆರ್.ಬಿ.ಐ ಜಿಲ್ಲಾ ಅಗ್ರಣೀಯ ಅಧಿಕಾರಿ ಅರುಣಕುಮಾರ, ಬ್ಯಾಂಕ್ ಆಫ್ ಬರೋಡಾದ ಜಿಲ್ಲಾ ಪ್ರಾದೇಶಿಕ ವ್ಯವಸ್ಥಾಪಕ ವಿಜಯ ಪಾಟೀಲ, ನಬಾರ್ಡ್ ಎಜಿಎಮ್ ಮಯೂರ ಕಾಂಬ್ಳೆ ಅವರು ಮಾತನಾಡಿದರು. ಲೀಡ್ ಡಿಸ್ಟ್ರಿಕ್ಟ್ ಮ್ಯಾನೇಜರ ಪ್ರಭುದೇವ ಎನ್.ಜಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ವಿವಿಧ ಬ್ಯಾಂಕ್ ಗಳ ಪ್ರಾದೇಶಿಕ ವ್ಯವಸ್ಥಾಪಕರು, ಶಾಖಾ ವ್ಯವಸ್ಥಾಪಕರು, ರೈತ ಪ್ರತಿನಿಧಿಗಳು,ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!