7th pay commission : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆ, ಹೊಸ ಅಪ್‌ಡೇಟ್‌..!

IMG 20241109 WA0005

ರಾಜ್ಯ ಸರ್ಕಾರಿ ನೌಕರರ(State Government Employees) ಡಿಎ ಹೆಚ್ಚಳ ಯಾವಾಗ? ಎಂಬ ಗೊಂದಲಗಳಿಗೆ ತೆರೆ ಬಿದ್ದಿದೆ.

ಕೇಂದ್ರ ಸರ್ಕಾರಿ ನೌಕರರು ಹಲವು ಹೋರಾಟದ ಫಲದಿಂದ ಇಂದು ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಕೇಂದ್ರ ಸರ್ಕಾರಿ(central government) ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ (DA Hike) ಹಾಗೂ ತುಟ್ಟಿ ಪರಿಹಾರವನ್ನು (DR Hike) ಘೋಷಿಸಲಾಗಿದೆ. ಇನ್ನು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಯಾವಾಗ ಆಗುತ್ತದೆ ಎಂದು ಕಾದುಕುಳಿತ್ತಿದ್ದಾರೆ. ಇನ್ನು ಕರ್ನಾಟಕ ಸರ್ಕಾರ ಸಹ ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಆದೇಶವನ್ನು ಹೊರಡಿಸುವ ಕುರಿತು ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರಿ ನೌಕರರು ಡಿಎ ಹೆಚ್ಚಳ ಯಾವಾಗ ಆಗುತ್ತದೆ?:

ಇನ್ನು ಕೇಂದ್ರದಲ್ಲಿ ಡಿಎ ಹೆಚ್ಚಳ ಮಾಡಿದ ಬಳಿಕ ರಾಜ್ಯ ಸರ್ಕಾರ ಕೂಡ ತನ್ನ ನೌಕರರಿಗಾಗಿ ಡಿಎ ಹೆಚ್ಚಳ ಮಾಡಬೇಕಿದೆ. ಇನ್ನು ರಾಜ್ಯ ಸರ್ಕಾರ ಡಿಎ ಹೆಚ್ಚಳವನ್ನು  7ನೇ ವೇತನ ಆಯೋಗದ(7th Pay Commission) ವರದಿ ಶಿಫಾರಸಿನ ಅನ್ವಯ ಮಾಡಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರಿ ನೌಕರರೆಲ್ಲಾ ಕಾದು ಕುಳಿತಿದ್ದರು. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ ಕುರಿತು ಮುಖ್ಯಮಂತ್ರಿಗಳಿಗೆ(Chief Minister) ಪತ್ರ ಬರೆಯಲಾಗಿತ್ತು. ಈ ಕುರಿತು ಸರ್ಕಾರ ಆದೇಶ ಸೋಮವಾರ ಅಥವಾ ಮಂಗಳವಾರ ಆದೇಶ ಬರುವ ನಿರೀಕ್ಷೆ ಇತ್ತು. ಆದರೆ ಈ ಕುರಿತು ಯಾವುದೇ ಆದೇಶ ಇನ್ನು ಬಿಡುಗಡೆಯಾಗಿಲ್ಲ.

ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್(L. K. Ateeq) ಈ ಬಗ್ಗೆ ಏನು ಹೇಳಿದ್ದಾರೆ?:

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಿಸಿದ ನಂತರ ರಾಜ್ಯದ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಬಿಡುಗಡೆ ಮಾಡಬೇಕು ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ(Additional Chief Secretary, Finance Department) ಎಲ್. ಕೆ. ಅತೀಕ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಕ್ಷರಿ (C. S. Shadakshari,) ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಮಾಡಿಕೊಂಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಎಲ್. ಕೆ. ಅತೀಕ್ ಬಾಕಿ ಇರುವ ತುಟ್ಟಿ ಭತ್ಯೆಯನ್ನು ಕೂಡಲೇ ಬಿಡುಗಡೆಗೊಳಿಸಲಾಗುವುದು. ಹಾಗೂ ಶಿಘ್ರದಲ್ಲಿ ಈ ಕುರಿತು ಆದೇಶ ಹೊರಡಿಸುತ್ತೀವಿ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರು ಡಿಎ ಹೆಚ್ಚಳದ ಕುರಿತು ಮುಖ್ಯಮಂತ್ರಿಗಳಿಗೆ ಸಿ. ಎಸ್. ಷಡಾಕ್ಷರಿ ಪತ್ರ ಬರೆದಿದ್ದರು:

ರಾಜ್ಯ ಸರ್ಕಾರಿ ನೌಕರರ ಸಿಗಬೇಕಿರುವ ತುಟ್ಟಿಭತ್ಯೆ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಮೂಲಕ ಸಿ. ಎಸ್. ಷಡಾಕ್ಷರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದು, ಬಾಕಿ ಇರುವ ನೌಕರರ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ(In cash) ನೀಡುವಂತೆ ಆದೇಶ ಹೊರಡಿಸಲು ಮನವಿ ಮಾಡಿಕೊಂಡಿದ್ದರು.

ಸಿ. ಎಸ್. ಷಡಾಕ್ಷರಿ ಬರೆದ ಪತ್ರದಲ್ಲಿ ಇದ್ದ ಅಂಶಗಳು ಹೀಗಿವೆ:

ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು ಹಾಗೂ ಕೇಂದ್ರ ಸರ್ಕಾರ ಡಿಎ ಹೆಚ್ಚಳದ ಆದೇಶವನ್ನು ಉಲ್ಲೇಖಿಸಿದ್ದರು. ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ದಿನಾಂಕ 01-07-2024ರಿಂದ ಅನ್ವಯವಾಗುವಂತೆ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿದೆ. ಈಗ ಕರ್ನಾಟಕದ ಸರ್ಕಾರಿ ನೌಕರು ದಿನಾಂಕ 01-07-2024 ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸರ್ಕಾರಕ್ಕೆ ಮನವಿ ಮಾಡಿದರು.  ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ(Social Media post) ‘ಆತ್ಮೀಯ ರಾಜ್ಯದ ಸರ್ಕಾರಿ ನೌಕರ ಬಾಂಧವರೇ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಬಾಕಿ ಇರುವ ತುಟ್ಟಿ ಭತ್ಯೆ ಆದೇಶದ ಕಡತ ಸರ್ಕಾರದಲ್ಲಿ ಅನುಮೋದನೆಗೆ ಬಾಕಿ ಇದ್ದು, ಸೋಮವಾರ ಅಥವಾ ಮಂಗಳವಾರ ಸರ್ಕಾರಿ ಆದೇಶವಾಗಲಿದೆ’ ಎಂದು ಮಾಹಿತಿ ನೀಡಲಾಗಿತ್ತು. ಆದರೆ ಇನ್ನೂ ಆದೇಶ ಪ್ರಕಟವಾಗಿಲ್ಲ ಎಂದು ತಮ್ಮ ಸಾಮಾಜಿಕ ಜಾಲತಾನಣದಲ್ಲಿ ವಿಷಯ ಹಂಚಿಕೊಂಡಿದ್ದರು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!